ರೈತರ ಪ್ರತಿಭಟನೆಗೆ ಸಂಬಂಧಿಸಿದ ಖಾತೆ, ಪೋಸ್ಟ್‌ ನಿರ್ಬಂಧಿಸಲು ಕೇಂದ್ರ ಸರ್ಕಾರ ಆದೇಶ – ಅಸಮ್ಮತಿ ಸೂಚಿಸಿದ ಎಕ್ಸ್!

ರೈತರ ಪ್ರತಿಭಟನೆಗೆ ಸಂಬಂಧಿಸಿದ ಖಾತೆ, ಪೋಸ್ಟ್‌ ನಿರ್ಬಂಧಿಸಲು ಕೇಂದ್ರ ಸರ್ಕಾರ ಆದೇಶ – ಅಸಮ್ಮತಿ ಸೂಚಿಸಿದ ಎಕ್ಸ್!

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ದಿನದಿಂದ ದಿನಕ್ಕೆ ಈ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಇದೀಗ ಈ ಪ್ರತಿಭಟನೆಗೆ ಸಂಬಂಧಿಸಿದ ಖಾತೆಗಳು ಮತ್ತು ಪೋಸ್ಟ್‌ಗಳನ್ನು ನಿರ್ಬಂಧಿಸುವ ಭಾರತ ಸರ್ಕಾರದ ಆದೇಶಕ್ಕೆ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್  ಅಸಮ್ಮತಿ ವ್ಯಕ್ತಪಡಿಸಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ವಿದ್ಯಾರ್ಥಿನಿ ಸೌಜನ್ಯ ಹತ್ಯೆ ಕೇಸ್‌ಗೆ ಮರುಜೀವ – ಸರ್ಕಾರ ಮತ್ತು ಸಿಬಿಐಗೆ ನೋಟಿಸ್ ಜಾರಿ ಮಾಡಿದ ಕರ್ನಾಟಕ ಹೈಕೋರ್ಟ್

ಸಾಮಾಜಿಕ ಮಾಧ್ಯಮ ವೇದಿಕೆಯು ನಿರ್ದಿಷ್ಟ ಬಳಕೆದಾರ ಖಾತೆಗಳು ಮತ್ತು ಪೋಸ್ಟ್‌ಗಳನ್ನು ನಿರ್ಬಂಧಿಸಬೇಕು ಎಂದು ಭಾರತ ಸರ್ಕಾರ ಕಾರ್ಯನಿರ್ವಾಹಕ ಆದೇಶಗಳನ್ನು ಹೊರಡಿಸಿದೆ. ಈ ನಿರ್ದೇಶನಗಳನ್ನು ಅನುಸರಿಸಲು ವಿಫಲವಾದರೆ, ಭಾರಿ ದಂಡ ಮತ್ತು ಜೈಲು ಶಿಕ್ಷೆ ಸೇರಿದಂತೆ ತೀವ್ರ ಪರಿಣಾಮಗಳಿಗೆ ಕಾರಣವಾಗಬಹುದು ಎಂದು ಎಚ್ಚರಿಕೆ ನೀಡಿದೆ.

ಇದೀಗ ಕೇಂದ್ರ ಸರ್ಕಾರದ ಈ ಆದೇಶವನ್ನು ಪಾಲಿಸುವುದಕ್ಕಾಗಿ, ‘ನಾವು ಭಾರತದಲ್ಲಿ ಮಾತ್ರ ಈ ಖಾತೆಗಳು ಮತ್ತು ಪೋಸ್ಟ್‌ಗಳಿಗೆ ನಿರ್ಬಂಧ ವಿಧಿಸುತ್ತೇವೆ. ಆದರೆ, ಈ ಕ್ರಮವನ್ನು ನಾವು ಒಪ್ಪುವುದಿಲ್ಲ ಮತ್ತು ಈ ಪೋಸ್ಟ್‌ಗಳಿಗೂ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ವಿಸ್ತರಿಸಬೇಕು’ ಎಂದು ಎಕ್ಸ್ ತನ್ನ ಪೋಸ್ಟ್‌ನಲ್ಲಿ ತಿಳಿಸಿದೆ.

ಭಾರತ ಸರ್ಕಾರದ ಯಾವುದೇ ಖಾತೆಗಳು ಅಥವಾ ಪೋಸ್ಟ್‌ಗಳನ್ನು ನಿರ್ಬಂಧಿಸುವ ಆದೇಶವನ್ನು ಪ್ರಶ್ನಿಸುವ ರಿಟ್ ಮೇಲ್ಮನವಿ ಬಾಕಿ ಉಳಿದಿದೆ ಮತ್ತು ಪಾರದರ್ಶಕತೆಯನ್ನು ಹೆಚ್ಚಿಸಲು ಸರ್ಕಾರದ ಈ ಆದೇಶವನ್ನು ಸಾರ್ವಜನಿಕಗೊಳಿಸುವಂತೆ ಎಕ್ಸ್ ಕರೆ ನೀಡಿದೆ.

Shwetha M