ಭಾರತಕ್ಕೂ ಕೊರೊನಾ ಭೀತಿ – ಪರಿಸ್ಥಿತಿ ಎದುರಿಸಲು ಸಜ್ಜಾದ ಕೇಂದ್ರ ಆರೋಗ್ಯ ಇಲಾಖೆ

ಭಾರತಕ್ಕೂ ಕೊರೊನಾ ಭೀತಿ – ಪರಿಸ್ಥಿತಿ ಎದುರಿಸಲು ಸಜ್ಜಾದ ಕೇಂದ್ರ ಆರೋಗ್ಯ ಇಲಾಖೆ

ಮೂರು ವರ್ಷಗಳ ಕಾಲ ಇಡೀ ಜಗತ್ತನ್ನೇ ತನ್ನ ಕಪಿಮುಷ್ಠಿಯಲ್ಲಿಟ್ಟುಕೊಂಡು, ಲಕ್ಷಾಂತರ ಮಂದಿಯ ಜೀವ ಕಸಿದಿದ್ದ ಕೊರೊನಾದ ಕರಾಳ ಕಾರ್ಮೋಡ ಈಗ ಮತ್ತೆ ಆವರಿಸಿದೆ. ಶತಮಾನದ ಭಯಾನಕ ವೈರಸ್ ಚೀನಾದಲ್ಲಿ  ಮತ್ತೆ ತಾಂಡವವಾಡುತ್ತಿದ್ದು, ಇಡೀ ಜಗತ್ತಿಗೆ ಕಂಟಕವಾಗಿದೆ. ಮುಂದಿನ 90 ದಿನಗಳಲ್ಲಿ ಚೀನಾದ ಶೇಕಡಾ 60ರಷ್ಟು ಭಾಗ ಕೊರೊನಾ ಪೀಡಿತವಾಗಲಿದೆ. ಜಗತ್ತಿನ ಶೇಕಡಾ 10ರಷ್ಟು ಭಾಗದಲ್ಲಿ ವೈರಸ್ ಮತ್ತೆ ಭಾರಿ ಪ್ರಮಾಣದಲ್ಲಿ ಹರಡಲಿದೆ. ಈಗಾಗ್ಲೇ ಅಮೆರಿಕ, ಜಪಾನ್, ದಕ್ಷಿಣ ಕೊರಿಯಾ, ಬ್ರೆಜಿಲ್​ನಲ್ಲಿ ಕೊರಾನಾ ಕೇಸ್​​ ದಿನಕಳೆದಂತೆ ಹೆಚ್ಚಳವಾಗುತ್ತಲೇ ಇದೆ. ಇದೀಗ ಭಾರತಕ್ಕೂ ಕೊರೊನಾ ಭೀತಿ ಎದುರಾಗಿದೆ. ಹೀಗಾಗಿ ಸರ್ಕಾರ ಕೂಡ ಫುಲ್ ಅಲರ್ಟ್ ಆಗಿದ್ದು, ಕೇಂದ್ರ ಆರೋಗ್ಯ ಇಲಾಖೆ ಇಂದು ಮಹತ್ವದ ಸಭೆ ನಡೆಸಿದೆ. ಈ ವೇಳೆ ಕೆಲ ಪ್ರಮುಖ ವಿಚಾರಗಳ ಬಗ್ಗೆ ಗಂಭೀರ ಚರ್ಚೆ ನಡೆದಿದೆ.

ಇದನ್ನೂ ಓದಿ :  ಮತ್ತೆ ಕೋವಿಡ್ ಕಾಟ..! ಬೆಂಗಳೂರಿನಲ್ಲಿ ಮಾಸ್ಕ್ ಕಡ್ಡಾಯ?- ಬಿಬಿಎಂಪಿಯಿಂದ ಚಿಂತನೆ

ಚೀನಾ ಜೊತೆಗೆ ಜಪಾನ್, ಅಮೆರಿಕ, ಕೊರಿಯಾ ಮತ್ತು ಬ್ರೆಜಿಲ್ ದೇಶಗಳಲ್ಲಿಯೂ ಕೊರೊನಾ ಸೋಂಕು ವ್ಯಾಪಿಸಿದೆ. ಈ ಹಿನ್ನೆಲೆಯಲ್ಲಿ ಜಿನೋಮ್ ಸೀಕ್ವೆನ್ಸಿಂಗ್ ಬಗ್ಗೆ ಭಾರತ ಸರ್ಕಾರ ತೆಗೆದುಕೊಂಡಿರುವ ನಿರ್ಧಾರವು ಮಹತ್ವ ಪಡೆದಿದೆ. ಜಿನೋಮ್ ಸೀಕ್ವೆನ್ಸಿಂಗ್​ ಪ್ರಮಾಣವು ಹೆಚ್ಚಾದರೆ ಮಾತ್ರ ದೇಶದಲ್ಲಿ ಹರಡುತ್ತಿರುವ ಹೊಸ ರೂಪಾಂತರಿಗಳನ್ನು ಪತ್ತೆ ಮಾಡಲು ಹಾಗೂ ಸಮುದಾಯ ಆರೋಗ್ಯಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ಸಕಾಲದಲ್ಲಿ ತೆಗೆದುಕೊಳ್ಳಲು ಸಾಧ್ಯವಾಗುತ್ತದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್ ಭೂಷಣ್ ರಾಜ್ಯಗಳಿಗೆ ಬರೆದಿರುವ ಪತ್ರದಲ್ಲಿ ಹೇಳಿದ್ದಾರೆ. ಕೊವಿಡ್ ತಪಾಸಣೆಯನ್ನು ಹೆಚ್ಚಿಸಬೇಕು. ಪಾಸಿಟಿವ್ ಬಂದ ಎಲ್ಲ ಮಾದರಿಗಳನ್ನೂ ಜಿನೋಮ್ ಸೀಕ್ವೆನ್ಸಿಂಗ್​ಗಾಗಿ ಇನ್​ಸಾಕಾಗ್ ಪ್ರಯೋಗಾಲಯಗಳಿಗೆ ಕಡ್ಡಾಯವಾಗಿ ಕಳುಹಿಸಿಕೊಡಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಚೀನಾ ಸೇರಿದಂತೆ ವಿಶ್ವದ ಇತರ ದೇಶಗಳ ಕೊವಿಡ್ ಸೋಂಕು ಪ್ರಕರಣಗಳ ಅಂಕಿಅಂಶ ಮತ್ತು ಆರೋಗ್ಯ ಪರಿಸ್ಥಿತಿಯನ್ನು ಗಮನಿಸಲು ಕೇಂದ್ರ ಸರ್ಕಾರವು ಆಂತರಿಕ ಕಾರ್ಯಪಡೆಯೊಂದನ್ನು ರಚಿಸಿದೆ. ಈ ಸಮಿತಿಯಲ್ಲಿ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳಿದ್ದು, ಭಾರತದ ಮೇಲಿನ ಪರಿಣಾಮ ಮತ್ತು ಸ್ಥಳೀಯವಾಗಿ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳ ಬಗ್ಗೆ ಕಣ್ಗಾವಲು ಇರಿಸಲು, ತುರ್ತು ನಿರ್ಧಾರ ತೆಗೆದುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ.

suddiyaana