ಮನಮೋಹನ್ ಸಿಂಗ್ ಸ್ಮಾರಕ ನಿರ್ಮಾಣ – ಭೂಮಿ ನೀಡಲು ಕೇಂದ್ರ ಸರ್ಕಾರ ಒಪ್ಪಿಗೆ
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಗುರುವಾರ ರಾತ್ರಿ ನಿಧನರಾಗಿದ್ದಾರೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ. ಇದೀಗ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಸ್ಮಾರಕ ನಿರ್ಮಾಣಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.
ಇದನ್ನೂ ಓದಿ: ಭಾರತವಿಲ್ಲದೇ ಬದುಕುತ್ತಾ ಬಾಂಗ್ಲಾ? – ಪಾಕ್‌ನಂತೆ ಬಿಕ್ಷಾ ಪಾತ್ರೆ ಹಿಡಿಯುತ್ತಾ?
ಕ್ಯಾಬಿನೆಟ್ ಸಭೆಯಲ್ಲಿ ಸ್ಮಾರಕಕ್ಕೆ ಜಾಗ ನೀಡಲು ಒಪ್ಪಿಗೆ ಸೂಚಿಸಲಾಗಿದೆ. ಈ ಸಂಬಂಧ ಕೇಂದ್ರ ಗೃಹ ಸಚಿವಾಲಯದಿಂದ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದೆ.
ಮನಮೋಹನ್ ಸಿಂಗ್ ನಿಧನ ಹಿನ್ನೆಲೆ ಶುಕ್ರವಾರ ಎಐಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಭೆ ನಡೆಸಲಾಗಿತ್ತು. ಸಭೆಯಲ್ಲಿ ಸಿಂಗ್ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಇದೇ ಸಭೆಯಲ್ಲಿ ದೆಹಲಿಯಲ್ಲಿ ಮನಮೋಹನ್ ಸಿಂಗ್ ಸ್ಮಾರಕ ನಿರ್ಮಾಣಕ್ಕೆ ಸ್ಥಳಾವಕಾಶ ಕೋರಲು ನಿರ್ಧರಿಸಲಾಗಿತ್ತು. ಅದರಂತೆ ಸ್ಮಾರಕಕ್ಕೆ ಸ್ಥಳ ನೀಡುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ಸರ್ಕಾರಕ್ಕೆ ಪತ್ರ ಬರೆದಿದ್ದರು. ಪತ್ರಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಕೇಂದ್ರ ಸರ್ಕಾರ ಸ್ಮಾರಕ ನಿರ್ಮಾಣಕ್ಕೆ ಒಪ್ಪಿಗೆ ಸೂಚಿಸಿದೆ.
ವಯೋಸಹಜ ಅನಾರೋಗ್ಯ ಕಾರಣದಿಂದ ಕೊನೆಯುಸಿರೆಳೆದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತಿಮ ಸಂಸ್ಕಾರ ಇಂದು ನಡೆಯಲಿದೆ. ದೆಹಲಿಯಲ್ಲಿರುವ ನಿಗಮ್ ಬೋಧ ಘಾಟ್‌ನಲ್ಲಿ ಬೆಳಗ್ಗೆ 11:45 ಕ್ಕೆ ಅವರ ಅಂತ್ಯಕ್ರಿಯೆ ನಡೆಯಲಿದೆ.