ದಾಂಪತ್ಯ ಜೀವನಕ್ಕೆ ಕಾಲಿಟ್ಟ ಚೈತ್ರಾ ಕುಂದಾಪುರ – ಶ್ರೀಕಾಂತ್ ಕಶ್ಯಪ್ ಯಾರು?

ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕುಂದಾಪುರ ಸಪ್ತಪದಿ ತುಳಿದಿದ್ದಾರೆ. ಕಾಲೇಜು ದಿನಗಳಿಂದ ಪ್ರೀತಿಸಿದ್ದ ಶ್ರೀಕಾಂತ್ ಕಶ್ಯಪ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಇದನ್ನೂ ಓದಿ: ಆಪರೇಷನ್ ಸಿಂಧೂರಗೆ ಪ್ರತಿಯಾಗಿ ಭಾರತದ ಮೇಲೆ ದಾಳಿ – ಪಾಕ್ ನ 3 ಯುದ್ಧ ವಿಮಾನ, 50 ಮಿಸೈಲ್ ಢಮಾರ್!
ಉಡುಪಿಯ ಹಿರಿಯಡ್ಕದ ನಿವಾಸಿ ಶ್ರೀಕಾಂತ್ ಕಶ್ಯಪ್ ಅವರನ್ನ ಕಳೆದ 12 ವರ್ಷಗಳಿಂದ ಚೈತ್ರಾ ಕುಂದಾಪುರ ಪ್ರೀತಿಸುತ್ತಿದ್ದರು. ಇದೀಗ ಗುರುಹಿರಿಯರ ಸಮ್ಮತಿಯೊಂದಿಗೆ ಪ್ರೀತಿಸಿದ ಹುಡುಗನೊಂದಿಗೆ ಸರಳ ವಿವಾಹವಾಗಿದ್ದಾರೆ. ಕುಟುಂಬಕ್ಕೆ ಆಪ್ತರಾದ 100 ಜನರಿಗೆ ಮಾತ್ರ ಮದುವೆಗೆ ಆಹ್ವಾನ ನೀಡಲಾಗಿತ್ತು. ವೈದಿಕ ಶಾಸ್ತ್ರದಂತೆ ಮದುವೆ ಕಾರ್ಯಕ್ರಮ ನಡೆದಿದೆ. ಈ ಸಂಭ್ರಮದಲ್ಲಿ ಬಿಗ್ ಬಾಸ್ ಸ್ಪರ್ಧಿಗಳಾದ ರಜತ್, ಗೋಲ್ಡ್ ಸುರೇಶ್ ಭಾಗಿಯಾಗಿ ನವದಂಪತಿಗೆ ಶುಭಹಾರೈಸಿದ್ದಾರೆ
ಕಾಲೇಜಿನಲ್ಲಿ ಓದುತ್ತಿದ್ದಾಗ ಚೈತ್ರಾಗೆ ಶ್ರೀಕಾಂತ್ ಕಶ್ಯಪ್ ಪರಿಚಯವಾಗಿತ್ತು. ಜಗಳದಿಂದ ಶುರುವಾದ ಸ್ನೇಹ ಈಗ ಮದುವೆಗೆ ಮುನ್ನುಡಿ ಬರೆದಿದೆ. ಆ್ಯನಿಮೇಷನ್ ಕೋರ್ಸ್ ಮಾಡಿರುವ ಶ್ರೀಕಾಂತ್ ಕಶ್ಯಪ್ ಸುದ್ದಿವಾಹಿನಿವೊಂದರಲ್ಲಿ ಚೈತ್ರಾ ಜೊತೆ ಕೆಲಸ ಮಾಡಿದ್ದರು. ಇದೀಗ ಜ್ಯೋತಿಷ್ಯ, ವಾಸ್ತು, ಪೌರೋಹಿತ್ಯದ ಕೆಲಸದಲ್ಲಿ ಶ್ರೀಕಾಂತ್ ತೊಡಗಿಸಿಕೊಂಡಿದ್ದಾರೆ.

ನೋಡಿರಿ

