ಕೃಷಿ ಸಚಿವ ಚೆಲುವರಾಯಸ್ವಾಮಿ ವಿರುದ್ಧ ಲಂಚದ ಪತ್ರ ಆರೋಪ – ಸಿಐಡಿ ತನಿಖೆ ನಡೆಸಲು ಸರ್ಕಾರ ತೀರ್ಮಾನ

ಕೃಷಿ ಸಚಿವ ಚೆಲುವರಾಯಸ್ವಾಮಿ ವಿರುದ್ಧ ಲಂಚದ ಪತ್ರ ಆರೋಪ – ಸಿಐಡಿ ತನಿಖೆ ನಡೆಸಲು ಸರ್ಕಾರ ತೀರ್ಮಾನ

ಕೃಷಿ ಸಚಿವ ಎನ್‌. ಚೆಲುವರಾಯ ಸ್ವಾಮಿ ಅವರು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಮಂಡ್ಯ ಜಿಲ್ಲೆ ಕೃಷಿ ಅಧಿಕಾರಿಗಳು ಬರೆದಿರುವ ಪತ್ರ ವೈರಲ್‌ ಆಗಿದೆ. ಈ ಪತ್ರ ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ಈ ಪತ್ರ ಅಸಲಿ ಪತ್ರ ಎಂದು ವಿರೋಧ ಪಕ್ಷ ನಾಯಕರು ವಾದಿಸುತ್ತಿದ್ದಾರೆ. ಸರ್ಕಾರ ಇದರಿಂದ ನುಣುಚಿಕೊಳ್ಳಲು ನಕಲಿ ಪತ್ರ ಎಂದು ಬಿಂಬಿಸುತ್ತಿದೆ ಎಂದು ವಾಗ್ದಾಳಿ ನಡೆಸಿದೆ. ಈ ಹಿನ್ನೆಲೆಯಲ್ಲಿ ಈ ಪ್ರಕರಣವನ್ನು ಸಿಐಡಿಗೆ ವಹಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಚೆಲುವರಾಯಸ್ವಾಮಿ ಅವರು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಬರೆದಿರುವ ಪತ್ರದ ಬಗ್ಗೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ ಪರಮೇಶ್ವರ್​ ಅವರು ಗೌಪ್ಯವಾಗಿ ಚರ್ಚೆ ಮಾಡಿದ್ದಾರೆ. ಈ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲು ನಿರ್ಧರಿಸಿದ್ದು, ಸರ್ಕಾರದಿಂದ ಅಧಿಕೃತ ಆದೇಶ ಹೊರಬೀಳುವುದೊಂದೇ ಬಾಕಿ ಇದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ರಾಹುಲ್‌ ಗಾಂಧಿಯನ್ನು ಮದುವೆಯಾಗಲು ನಾನು ರೆಡಿ! – ಆದರೆ ಒಂದು ಕಂಡೀಷನ್‌ ಇದೆ ಎಂದ ಖ್ಯಾತ ನಟಿ!

ಮಂಡ್ಯದ ಸಹಾಯಕ ಕೃಷಿ ನಿರ್ದೇಶಕರು ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ರಾಜ್ಯಪಾಲರಿಗೆ ದೂರು ನೀಡಿರುವ ಪತ್ರ ವೈರಲ್ ಆಗಿದ್ದು, ಇದು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ. ಈ ದೂರಿನ ಪತ್ರವನ್ನು ಹಿಡಿದುಕೊಂಡು ವಿರೋಧ ಪಕ್ಷ ಬಿಜೆಪಿ, ಸರ್ಕಾರದ ಮೇಲೆ ಮುಗಿಬಿದ್ದಿದೆ. ಆದ್ರೆ, ಇದನ್ನು ಆಡಳಿತರೂಢ ಕಾಂಗ್ರೆಸ್​ ನಾಯಕರು ಅಲ್ಲಗಳೆದಿದ್ದಾರೆ. ಹೀಗೆ ಈ ಪ್ರಕರಣ ರಾಜೀಯವಾಗಿ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಮಂಡ್ಯ ಕೃಷಿ ಇಲಾಖೆ ಜಂಟಿ ನಿರ್ದೇಶಕ V.S.ಅಶೋಕ್​​ ಅವರು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿಗೆ ದೂರು ನೀಡಿದ್ದು, ಈ ಕುರಿತು ತನಿಖೆ ಮಾಡುವಂತೆ ಮನವಿ ಮಾಡಿದ್ದಾರೆ. ಈ ದೂರಿನ ಮೇರೆ ಮಂಡ್ಯ ಪೊಲೀಸರು ತನಿಖೆ ಆರಂಭಸಿದ್ದಾರೆ. ಇದರ ಬೆನ್ನಲ್ಲೇ ಸರ್ಕಾರ ಈ ಪ್ರಕರಣದ ತನಿಖೆಗೆ ಸಿಐಡಿಗೆ ಹಸ್ತಾಂತರಿಸಲು ನಿರ್ಮಾನಿಸಿದೆ.

suddiyaana