ಹಸು ಕೆಚ್ಚಲು ಕೊಯ್ದವ ಯಾರು? – ಮಾನಸಿಕ ಅಸ್ವಸ್ಥ ಆಗಿರಲು ಸಾಧ್ಯವೇ?
ಸಿಟ್ಟಿಗೆದ್ದ ಚೈತ್ರ ಕುಂದಾಪುರ!!
ಚಾಮರಾಜಪೇಟೆಯ ಓಲ್ಡ್ ಪೆನ್ಷನ್ ಮೊಹಲ್ಲಾದ ವಿನಾಯಕನಗರದಲ್ಲಿ ಹಸುಗಳ ಕೆಚ್ಚಲು ಕೊಯ್ದು ಕ್ರೌರ್ಯ ಮೆರೆಯಲಾಗಿದೆ. ಇದೇ ನೀಚ ನೋಡಿ ಹಸುವಿನ ಹೆಚ್ಚಲು ಕೊಯ್ದವನು.. ಕಾಟನ್ ಪೇಟೆ ಪೊಲೀಸರು ಈತನನ್ನ ಬಂಧಿಸಿದ್ದಾರೆ. ಇವ್ನ್ ಹೆಸರು ಸೈಯದ್ ನಸ್ರು.. 30 ವರ್ಷ.. ಬಿಹಾರದ ಚಂಪರಣ್ ಮೂಲದ ಆರೋಪಿ ಸೈಯದ್ ನಸ್ರು, ಕೃತ್ಯ ನಡೆದ ಸ್ಥಳದಿಂದ 50 ಮೀಟರ್ ಅಂತರದಲ್ಲಿರುವ ಪ್ಲ್ಯಾಸ್ಟಿಕ್, ಬಟ್ಟೆ ಹೊಲಿಯುವ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದನು ಎಂದು ತಿಳಿದುಬಂದಿದೆ.
ಮಾನಸಿಕ ಅಸ್ವಸ್ಥ ಆಗಿರಲು ಸಾಧ್ಯವೇ?
ಕುಡಿದ ಮತ್ತಿನಲ್ಲಿ ಕೃತ್ಯ ಎಸಗಿರುವುದಾಗಿ ಆರೋಪಿ ಸೈಯದ್ ನಸ್ರು ಪೊಲೀಸರ ಮುಂದೆ ಬಾಯಿ ಬಿಟ್ಟಿದ್ದಾನೆ. ಪೊಲೀಸರು ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ಜನವರಿ 24ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಹಸುವಿನ ಮಾಲೀಕ ಕರ್ಣ ಮಾತನಾಡಿ, ಆರೋಪಿ ಹುಚ್ಚ ಎಂದು ಈಗ ಹೇಳುತ್ತಿದ್ದಾರೆ. ಹುಚ್ಚ ಈ ರೀತಿ ಮಾಡುವುದಕ್ಕೆ ಸಾಧ್ಯನಾ? ಚಾಮರಾಜಪೇಟೆಯ ಪಶು ಆಸ್ಪತ್ರೆಯನ್ನು ಕಬ್ಜಾ ಮಾಡಲು ಮುಂದಾಗಿದ್ದರು. ಈ ವೇಳೆ ನಾನು ಮತ್ತು ಸುತ್ತಮುತ್ತಲಿನ ಹಸುಗಳ ಮಾಲೀಕರು ಹಸುಗಳೊಂದಿಗೆ ಆಸ್ಪತ್ರೆ ಮುಂದೆ ಪ್ರತಿಭಟನೆ ಮಾಡಿದ್ವಿ. ಹೀಗಾಗಿ ಯಾರೋ ಕಿಡಿಗೇಡಿಗಳು ಈ ರೀತಿ ಮಾಡಿದ್ದಾರೆ ಎಂದು ಹಸುಗಳ ಮಾಲೀಕ ಕರ್ಣ ಆರೋಪಿಸಿದ್ದಾರೆ. ಇವರ ಹೇಳಿಕೆ ನೋಡಿದ್ರೆ. ಅವನು ಮಾನಸಿಕ ಅಸ್ವಸ್ಥ ಆಗಿರೋಕೆ ಸಾಧ್ಯವಿಲ್ಲ. ಹುಚ್ಚನ್ನ ಯಾಕೆ ಅಂಗಡಿಯಲ್ಲಿ ಕೆಲಸಕ್ಕೆ ಇಟ್ಟುಕೊಳ್ಳುತ್ತಿದ್ದರು ಅನ್ನೋ ಪ್ರಶ್ನೆಗಳು ಎದ್ದಿವೆ.
ಘಟನೆ ಆಗಿದ್ದು ಹೇಗೆ ಅನ್ನೋದನ್ನ ನೋಡೋದಾದ್ರೆ.. ಚಾಮರಾಜಪೇಟೆಯ ಓಲ್ಡ್ ಪೆನ್ಷನ್ ಮೊಹಲ್ಲಾದ ವಿನಾಯಕನಗರ ನಿವಾಸಿ ಕರ್ಣ ಎಂಬುವರು ಕಳೆದ ಹಲವು ವರ್ಷಗಳಿಂದ ಇಲ್ಲಿ ಹಸು ಸಾಕುತ್ತಿದ್ದಾರೆ. ಶನಿವಾರ ತಡರಾತ್ರಿ ಯಾರೋ ಕಿಡಿಗೇಡಿಗಳು ಮೂರು ಹಸುಗಳ ಕೆಚ್ಚಲನ್ನು ಕತ್ತರಿಸಿ, ಕಾಲಿಗೆ ಮಚ್ಚಿನಿಂದ ಹಲ್ಲೆ ಮಾಡಿ ವಿಕೃತಿ ಮೆರೆದಿದ್ದರು. ಹಸುಗಳ ಮಾಲೀಕ ಕರ್ಣ ಕಾಟನ್ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರು ಆಧರಿಸಿ ಪ್ರರಕಣ ದಾಖಲಿಸಿಕೊಂಡ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿ, ವಿಚಾರಣೆ ನಡೆಸಿದ್ದಾರೆ. ಚಿಕ್ಕಪೇಟೆ ಉಪ ವಿಭಾಗದ ಎಸಿಪಿ ರಮೇಶ್ ನೇತೃತ್ವದಲ್ಲಿ 20ಕ್ಕೂ ಹೆಚ್ಚು ಪೊಲೀಸರು ತನಿಖೆ ನಡೆಸಿದ್ದಾರೆ.
ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿ
ಹಸುಗಳಿಗೆ ಚಾಮರಾಜಪೇಟೆ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಹಸುಗಳು ಕ್ಷೇಮವಾಗಿವೆ. ಆದರೆ, ಇನ್ನೂ ಎರಡು ವಾರ ಗಾಯ ಮಾಸಲು ಸಮಯಬೇಕಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಹಿಂದೂ ಪರ ಸಂಘಟನೆ ಮುಖಂಡರು, ವಿಪಕ್ಷ ನಾಯಕ ಆರ್ ಅಶೋಕ್, ಸಂಸದ ಪಿಸಿ ಮೋಹನ್, ಎಂಎಲ್ಸಿ ರವಿಕುಮಾರ್ ಸ್ಥಳಕ್ಕೆ ಭೇಟಿ ನೀಡಿ, ಮಾಲೀಕ ಕರ್ಣನಿಗೆ ಸಾಂತ್ವನ ಹೇಳಿದ್ದರು. ಘಟನೆಯನ್ನು ಖಂಡಿಸಿದ ನಾಯಕರು, ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ವಿಪಕ್ಷ ನಾಯಕ ಆರ್. ಅಶೋಕ್ ವೈಯುಕ್ತಿಕವಾಗಿ ಒಂದು ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದರು.
ಸಿಟ್ಟಿಗೆದ್ದ ಚೈತ್ರ ಕುಂದಾಪುರ!!
ಇಂದು ಹಸುವಿನ ಮೇಲೆ ದಾಳಿ ಮಾಡಿರೋನು ನಾಳೆ ಮನುಷ್ಯರ ಮೇಲು ದಾಳಿ ಮಾಡಬಹುದು ಎಂದು ಈ ಘಟನೆ ಬಗ್ಗೆ ಬಿಗ್ ಬಾಸ್ ಸ್ಪರ್ಧಿ ಚೈತ್ರಾ ಕುಂದಾಪುರ ಆತಂಕ ವ್ಯಕ್ತಪಡಿಸಿದ್ದಾರೆ. ಚೈತ್ರಾ ಕುಂದಾಪುರ ಅವರು ನಾಯಿ, ಬೆಕ್ಕುಗಳಿಗೆ ಏನಾದರೂ ಅದರೆ ಧ್ವನಿ ಎತ್ತುವ ಪ್ರಾಣಿದಯಾ ಸಂಘ ಈಗ ಎಲ್ಲಿದೆ? ನಿಮ್ಮ ಪ್ರಾಣಿಗಳ ವಿಭಾಗದಲ್ಲಿ ಹಸುಗಳು ಬರುವುದಿಲ್ವಾ ಎಂದು ಪ್ರಶ್ನಿಸಿದ್ದಾರೆ. ಹಸುಗಳಿಗಾಗಿ ಪ್ರಾಣಿದಯಾ ಸಂಘಗಳು ಧ್ವನಿ ಎತ್ತೋದಿಲ್ವಾ? ಬಿಹಾರದ ವ್ಯಕ್ತಿ ಬಂದು ಇಲ್ಲಿ ಬಂದು ಹಸುಗಳ ಮೇಲೆ ಕ್ರೌರ್ಯ ಮೆರೆದಿದ್ದಾನೆ. ಇಂತ ಘಟನೆ ಮರುಕಳಿಸದ ರೀತಿ ಸರ್ಕಾರ ಕಠಿಣ ಕ್ರಮ ಕೈಗೊಳ್ಳ ಬೇಕು ಎಂದು ಹೇಳಿದ್ದಾರೆ. ಗೋವುವನ್ನು ನಾವು ಹಸು ಅಂತ ನೋಡಲ್ಲ ಮಾತೆ ಅಂತ ಪೂಜೋ ಮಾಡ್ತೀವಿ. ಕುಡಿದ ಮತ್ತಿನಲ್ಲಿ ಮಾಡಿರೋದು ಅನ್ನೋ ಮಾತು ಕೇಳಿ ಬರ್ತಿದೆ. ಅದು ಉದ್ದೇಶ ಊರ್ವಕವಾಗಿ ಮಾಡಿರುವಂತ ವಿಕೃತಿ ಕೆಲಸ. ಬೇಸರದ ವಿಚಾರದ ಅಂದರೆ ಬಿಎನ್ ಎಸ್ ಆಕ್ಟ್ ಅಡಿಯಲ್ಲಿ ಕೇಸ್ ಹಾಕಿದ್ದಾರೆ. ಇದರ ಜೊತೆಗೆ ಹಿಂದುಗಳ ಧಾರ್ಮಿಕ ಭಾವನೆಗೆ ಧಕ್ಕೆ ಮಾಡಿರುವ ಪ್ರಕರಣವನ್ನು ದಾಖಲಿಸ ಬೇಕು ಎಂದಿದ್ದಾರೆ. ಇದು ಖಂಡಿತ ಚಿಕ್ಕ ಘಟನೆ ಅಲ್ಲ ಏನೋ ಸಂದೇಶ ಕೊಡ್ತಿದ್ದಾರೆ ಅನ್ಸುತ್ತೆ ಎಂದಿದ್ದಾರೆ. ಒಟ್ನಲ್ಲಿ ಈ ಘಟನೆ ಮನುಕುಲವನ್ನೇ ಬೆಚ್ಚಿ ಬೀಳಿಸಿದ್ದು, ಮನುಷ್ಯನ ನೀಚ ತನವನ್ನ ಎತ್ತಿ ತೋರಿಸುತ್ತಿದೆ.. ತಾಯಿಯ ಎದೆ ಹಾಲು ಕುಡಿದವರು ಯಾವತ್ತು ಹೀಗೆ ಮಾಡಲ್ಲ..