ರಾಜ್ಯದಲ್ಲಿ ಇನ್ನೆರಡು ದಿನ ಮಳೆ ಸಾಧ್ಯತೆ – 4 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಇನ್ನೆರಡು ದಿನ ಮಳೆ ಸಾಧ್ಯತೆ – 4 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಕಳೆದ ವಾರದಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಇದೀಗ ಹವಾಮಾನ ಇಲಾಖೆ ರಾಜ್ಯದ ನಾಲ್ಕು ಜಿಲ್ಲೆಗಳಿಗೆ ಶನಿವಾರ ಹಾಗೂ 10 ಜಿಲ್ಲೆಗಳಿಗೆ ಭಾನುವಾರ ಯೆಲ್ಲೋ ಅಲರ್ಟ್ ಘೋಷಿಸಿದೆ.

ಕಲಬುರಗಿ, ಯಾದಗಿರಿ, ಮೈಸೂರು ಮತ್ತು ರಾಯಚೂರು ಜಿಲ್ಲೆಗಳಲ್ಲಿ ಏಪ್ರಿಲ್ 29 ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಅದೇ ರೀತಿ ಏಪ್ರಿಲ್ 30 ರಂದು ಕರ್ನಾಟಕದ 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ತುಮಕೂರು, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಬಳ್ಳಾರಿ, ದಾವಣಗೆರೆ, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಭಾನುವಾರದಂದು  ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ ಅಂತಾ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ:ದೇಶದ ಹಲವೆಡೆ ಭಾರಿ ಮಳೆ – ಸಿಡಿಲು ಬಡಿದು 14 ಮಂದಿ ಸಾವು

ಇನ್ನು ಕರಾವಳಿಯ ಎಲ್ಲ ಜಿಲ್ಲೆಗಳಲ್ಲಿ ಮುಂದಿನ ಒಂದೆರಡು ದಿನಗಳ ಕಾಲ ಗುಡುಗು ಸಹಿತ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶನಿವಾರ ಬೆಂಗಳೂರಿನಲ್ಲೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ತುಂತುತು ಮಳೆಯಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಅವಧಿಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯೂ ಇದೆ. ಈ ವೇಳೆ ಆಕಾಶದಲ್ಲಿ ಸಾಮಾನ್ಯವಾಗಿ ಮೋಡ ಆವರಿಸಿರುತ್ತದೆ. ಗಂಟೆಗೆ 30-40 ಕಿಮೀ ವೇಗದಲ್ಲಿ ಬಲವಾದ ಗಾಳಿ ಬೀಸುತ್ತದೆ ಎಂದು ಐಎಂಡಿ ತಿಳಿಸಿದೆ.

suddiyaana