ಚಂದ್ರನ ಅಂಗಳಕ್ಕೆ ಯಶಸ್ವಿಯಾಗಿ ಪಾದಸ್ಪರ್ಶ ಮಾಡಿದ ಚಂದ್ರಯಾನ -3 – ದಕ್ಷಿಣ ಧ್ರುವವನ್ನು ತಲುಪಿದ ಮೊದಲ ದೇಶ ಭಾರತ

ಚಂದ್ರನ ಅಂಗಳಕ್ಕೆ ಯಶಸ್ವಿಯಾಗಿ ಪಾದಸ್ಪರ್ಶ ಮಾಡಿದ ಚಂದ್ರಯಾನ -3 – ದಕ್ಷಿಣ ಧ್ರುವವನ್ನು ತಲುಪಿದ ಮೊದಲ ದೇಶ ಭಾರತ

ಕೋಟ್ಯಂತರ ಭಾರತೀಯರ ಕನಸು ನನಸಾಗಿದೆ. ಭಾರತೀಯ ಬಾಹ್ಯಾಕಾಶ ಸಂಸ್ಥೆ ಮಹತ್ವಾಕಾಂಕ್ಷಿ ಯೋಜನೆ ಚಂದ್ರಯಾನ -3 ಸಕ್ಸಸ್‌ ಕಂಡಿದೆ. ಜುಲೈ 14 ರಂದು ಉಡಾವಣೆಗೊಂಡ ಚಂದ್ರಯಾನ-3 ರ ಲ್ಯಾಂಡರ್ ಮಾಡ್ಯೂಲ್ (ಎಲ್‌ಎಂ) ಬುಧವಾರ ಸಂಜೆ ಸುಮಾರು 6.04 ಕ್ಕೆ ಚಂದ್ರನ ಮೇಲ್ಮೈಯಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್ ಮಾಡಿದ್ದು, ಈ ಮೂಲಕ ಇಡೀ ಜಗತ್ತು ತನ್ನತ್ತ ತಿರುಗಿ ನೋಡುವಂತೆ ಮಾಡಿದೆ.

ಜುಲೈ 14ರಂದು ಚಂದ್ರಯಾನ -3 ನೌಕೆಯನ್ನು ಶ್ರೀಹರಿಕೋಟದಿಂದ ಉಡಾವಣೆ ಮಾಡಲಾಗಿತ್ತು. ಆಗಸ್ಟ್ 5 ರಂದು, ಚಂದ್ರಯಾನ -3 ಚಂದ್ರನ ಕಕ್ಷೆಗೆ ಪ್ರವೇಶಿಸಿತು. ಆಗಸ್ಟ್ 6,9,14 ಮತ್ತು 16ರಂದು, ಆರ್ಬಿಟ್ ರಿಡಕ್ಷನ್‍ ಮನ್ಯೂವರ್ಸ್ ನಡೆಸಲಾಗಿತ್ತು. ಇದೀಗ ವಿಕ್ರಮ್‌ ಲ್ಯಾಂಡರ್‌ ಚಂದ್ರನ ಅಂಗಳದಲ್ಲಿ ಸ್ವಾಫ್ಟ್‌ ಲ್ಯಾಂಡ್‌ ಆಗಿದೆ.  ಚಂದ್ರನ ದಕ್ಷಿಣ ಧ್ರುವ ಪ್ರವೇಶಿಸಿದ ಮೊದಲ ದೇಶವಾಗಿ ಭಾರತ ಗುರುತಿಸಿಕೊಂಡಿದೆ.

ಚಂದ್ರಯಾನ -3 ವಿಕ್ರಮ ಲ್ಯಾಂಡರ್‌ ಲ್ಯಾಂಡಿಂಗ್‌ ಅನ್ನು ಪ್ರಧಾನಿ ನರೇಂದ್ರ ಮೋದಿ ಅವರು ವರ್ಷುವಲ್‌ ಮುಖಾಂತರ ದಕ್ಷಿಣ ಆಫ್ರಿಕಾದಿಂದಲೇ ವೀಕ್ಷಿಸಿದ್ದಾರೆ. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಇದೊಂದು ಐತಿಹಾಸಿಕ ಕ್ಷಣ. ಈಗ ಭಾರತ ಚಂದ್ರನ ಮೇಲಿದೆ. ಇಸ್ರೋ ವಿಜ್ಞಾನಿಗಳು ಇತಿಹಾಸ ಸೃಷ್ಟಿಸಿದ್ದಾರೆ. ಐತಿಹಾಸಿಕ ಕ್ಷಣಕ್ಕೆ ನಾವೆಲ್ಲರೂ ಸಾಕ್ಷಿಯಾಗಿದ್ದೇವೆ ಎಂದು ಹೇಳಿದ್ದಾರೆ.

suddiyaana