ದಾವಣಗೆರೆ ನಗರದಲ್ಲಿ ನಾಳೆ ಯಾವ್ಯಾವ ವಾಹನಗಳ ಸಂಚಾರಕ್ಕೆ ನಿಷೇಧ – ಪರ್ಯಾಯ ಮಾರ್ಗಗಳೇನು..?

ದಾವಣಗೆರೆ ನಗರದಲ್ಲಿ ನಾಳೆ ಯಾವ್ಯಾವ ವಾಹನಗಳ ಸಂಚಾರಕ್ಕೆ ನಿಷೇಧ – ಪರ್ಯಾಯ ಮಾರ್ಗಗಳೇನು..?

ವಿಧಾನಸಭಾ ಚುನಾವಣಾ ಹೊಸ್ತಿಲಿನಲ್ಲಿ ಬಿಜೆಪಿ ಆರಂಭಿಸಿದ್ದ ವಿಜಯಸಂಕಲ್ಪ ಯಾತ್ರೆಯ ಸಮಾರೋಪ ಸಮಾರಂಭ ನಾಳೆ ದಾವಣಗೆರೆಯಲ್ಲಿ ನಡೆಯಲಿದೆ. ಸಮಾರೋಪ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಲಿದ್ದಾರೆ. ಹೀಗಾಗಿ ಜಿಲ್ಲೆಯಲ್ಲಿ ಎಲ್ಲಾ ಸಿದ್ಧತೆಗಳನ್ನ ಮಾಡಿಕೊಳ್ಳಲಾಗಿದ್ದು, ಟ್ರಾಫಿಕ್ ಪೊಲೀಸರು ಕೂಡ ಅಲರ್ಟ್ ಆಗಿದ್ದಾರೆ. ಸಮಾರಂಭ ನಡೆಯುವ ಸ್ಥಳದ ಸುತ್ತಮುತ್ತ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.

ದಾವಣಗೆರೆ ನಗರದಲ್ಲಿ ಎಲ್ಲಾ ಖಾಸಗಿ ಮತ್ತು ಕೆಎಸ್​ಆರ್‌ಟಿಸಿ ಬಸ್‌ಗಳ ಬಸ್‌ ನಿಲ್ದಾಣಗಳನ್ನು ತಾತ್ಕಾಲಿಕವಾಗಿ ನಗರದ ಹೊರವಲಯಕ್ಕೆ ಸ್ಥಳಾಂತರಿಸಲಾಗಿದೆ. ಹಾಗೇ 25-03-2023ರಂದು ಎಲ್ಲಾ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಪ್ರಧಾನ ಮಂತ್ರಿ ಭಾಗವಹಿಸುವ ಕಾರ್ಯಕ್ರಮ ನಡೆಯುವ ಸ್ಥಳದಿಂದ 2 ಕಿ.ಮೀ ವ್ಯಾಪ್ತಿಯ ಸುತ್ತಳತೆಯಲ್ಲಿ ಯಾವುದೇ ರೀತಿಯ ಡ್ರೋನ್ ಹಾರಾಟವನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಹೆಜ್ಜೆ ಹೆಜ್ಜೆಗೂ ಪೊಲೀಸರನ್ನು ನಿಯೋಜಿಸಲಾಗಿದೆ. ವಿವಿಧ ಜಿಲ್ಲೆಯಿಂದ 10 ಲಕ್ಷ ಜನ ಸೇರುವ ನಿರೀಕ್ಷೆ ಇದೆ. ದಿನಾಂಕ 25-03-2023ರಂದು ಇತರೆ ಜಿಲ್ಲೆಗಳಿಂದ ಕಾರ್ಯಕ್ರಮಕ್ಕೆ ಬರುವ ವಾಹನಗಳ ಪಾರ್ಕಿಂಗ್ ಸ್ಥಳಗಳ ವಿವರ ಈ ರೀತಿ ಇದೆ.

ಇದನ್ನೂ ಓದಿ : ದಾವಣಗೆರೆಯ ದಶದಿಕ್ಕುಗಳೂ ಕೇಸರಿಮಯ – ಮೋದಿ ಸ್ವಾಗತಕ್ಕೆ ಸಜ್ಜಾಯ್ತು ಬೆಣ್ಣೆನಗರಿ!

ಚಿಕ್ಕಮಗಳೂರು, ಶಿವಮೊಗ್ಗ, ಭದ್ರಾವತಿ, ಬೀರೂರು, ಕಡೂರು, ಶೃಂಗೇರಿ, ಬೆಂಗಳೂರು, ಕೋಲಾರ, ತುಮಕೂರು,ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಮಂಗಳೂರು ಜಿಲ್ಲೆಗಳಿಂದ ಬಾಡಾ ಕ್ರಾಸ್‌ನಿಂದ ದಾವಣಗೆರೆ ನಗರಕ್ಕೆ ಪ್ರವೇಶ ಮಾಡುವ ವಾಹನಗಳಿಗೆ ಎಪಿಎಂಸಿ ಮತ್ತು ಚಿಕ್ಕನಹಳ್ಳಿಗಳಲ್ಲಿ ಪಾರ್ಕಿಂಗ್ ಮಾಡಲು ವ್ಯವಸ್ಥೆ ಇರುತ್ತದೆ.

ಚನ್ನಗಿರಿ, ಶಿವಮೊಗ್ಗ, ಭದ್ರಾವತಿ, ಬೀರೂರು, ಕಡೂರು, ಮಂಗಳೂರು ಕಡೆಯಿಂದ ಹದಡಿ ರಸ್ತೆ ಮೂಲಕ ದಾವಣಗೆರೆ ನಗರಕ್ಕೆ ಪ್ರವೇಶ ಮಾಡುವ ವಾಹನಗಳನ್ನು ಡಿಆರ್‌ಎಂ ಸೈನ್ಸ್ ಕಾಲೇಜ್, ಹೈಸ್ಕೂಲ್ ಮೈದಾನ, ಯು.ಬಿ.ಡಿ. ಇಂಜಿನಿಯರಿಂಗ್ ಕಾಲೇಜ್ ಮೈದಾನದಲ್ಲಿ ಪಾರ್ಕಿಂಗ್ ಮಾಡಲು ವ್ಯವಸ್ಥೆ ಇರುತ್ತದೆ.

ಹುಬ್ಬಳ್ಳಿ, ದಾರಾವಾಡ, ಬೆಳಗಾವಿ, ಗದಗ, ಹಾವೇರಿ, ಹರಿಹರ ಕಡೆಯಿಂದ ಬೈಪಾಸ್ ರಸ್ತೆ ಮುಖಾಂತರ ಹಳೆ ಕುಂದುವಾಡ ಕಡೆಯಿಂದ ಬರುವ ವಾಹನಗಳನ್ನು ಕುಂದುವಾಡ ಕೆರೆ ಹತ್ತಿರದ ಜಾಗದಲ್ಲಿ ಪಾರ್ಕಿಂಗ್ ಮಾಡಲು ವ್ಯವಸ್ಥೆ ಇರುತ್ತದೆ.

ಹರಪನಹಳ್ಳಿ-ಬಳ್ಳಾರಿ ವಿಜಯನಗರ ಕೊಪ್ಪಳ, ವಿಜಯಪುರ, ರಾಯಚೂರು, ಬೀದರ್, ಕಲ್ಬುರ್ಗಿ, ಗದಗ, ಯಾದಗಿರಿ,ಹೊಸಪೇಟೆ ಕಡೆಯಿಂದ ಬರುವ ವಾಹನಗಳು ಕೊಂಡಜ್ಜಿ, ಆವರಗೊಳ್ಳ ಮುಖಾಂತರ ಕಾರ್ಯಕ್ರಮ ಸ್ಥಳಕ್ಕೆ ಪ್ರವೇಶ ಬರುವ ವಾಹನಗಳನ್ನು ಕೇಂದ್ರೀಯಾ ವಿದ್ಯಾಲಯದ ಜಾಗದಲ್ಲಿ ಪಾರ್ಕಿಂಗ್ ಮಾಡಲು ವ್ಯವಸ್ಥೆ ಇರುತ್ತದೆ.

ಚಳ್ಳಕೆರೆ, ಮೊಳಕಾಲ್ಕೂರು, ಕೂಡ್ಲಿಗಿ ಜಿಲ್ಲೆಗಳಿಂದ ಜಗಳೂರು ರಸ್ತೆ ಮೂಲಕ ಬರುವ ವಾಹನಗಳನ್ನು ಬಡಗಿ ಕೃಷ್ಣಪ್ಪ ಲೇಔಟ್‌ನಲ್ಲಿ ಪಾರ್ಕಿಂಗ್ ಮಾಡಲು ವ್ಯವಸ್ಥೆ ಮಾಡಲಾಗಿದೆ.

suddiyaana