ಮೈತ್ರಿಗೆ ‘ಕೈ’ ಕೊಟ್ಟ ಸಿಪಿ ಯೋಗೇಶ್ವರ್ – ಕಾಂಗ್ರೆಸ್ ಅಭ್ಯರ್ಥಿಯಾಗಿ ಸೈನಿಕ ಕಣಕ್ಕೆ?
ಚನ್ನಪಟ್ಟಣ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ
ಚನ್ನಪಟ್ಟಣ ವಿಧಾನಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನಿಂದ ಸ್ಪರ್ಧಿಸಲು ಬಯಸಿದ್ದ ಸಿ ಪಿ ಯೋಗೇಶ್ವರ್ ತಮ್ಮ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಕಾಂಗ್ರೆಸ್ ಸೇರಿದ್ದಾರೆ. ಸಿ.ಪಿ. ಯೋಗೇಶ್ವರ್ ಬೆಳಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನಿವಾಸದಲ್ಲಿ ಕಾಣಿಸಿಕೊಂಡಿಸಿರುವುದು ಎಲ್ಲಾ ಊಹಾ ಪೋಹಗಳಿಗೆ ತೆರೆ ಎಳೆದಂತಾಗಿದೆ. ಆ ಮೂಲಕ, ಯೋಗೇಶ್ವರ್ ಅವರು ಬಿಜೆಪಿ ಬಿಟ್ಟು ‘ಕೈ’ ಹಿಡಿದಿದ್ದಾರೆ.
ಅಧಿಕೃತವಾಗಿ ಸಿಪಿವೈ ಕಾಂಗ್ರೆಸ್ ಸೇರಲಿದ್ದಾರೆ. ಶಿವಕುಮಾರ್ ಆವರು ತಮ್ಮ ಕಾರಿನಲ್ಲಿ ಯೋಗೇಶ್ವರ್ ಅವರನ್ನು ಕರೆದುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ಹೋಗಿದ್ರು. ಆ ಬಳಿಕ ಯೋಗೇಶ್ವರ್ ಅವರ ಕಾಂಗ್ರೆಸ್ ಸೇರ್ಪಡೆ ಘೋಷಣೆಯಾಗುವ ಸಾಧ್ಯತೆಯಿದೆ. ಮಾಜಿ ಸಚಿವ ಸಿ ಪಿ ಯೋಗೇಶ್ವರ್ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಹಾಗೂ ಮಾಜಿ ಸಂಸದ ಡಿ ಕೆ ಸುರೇಶ್ ಅವರ ಜತೆ ಸಿಎಂ ಸಿದ್ದರಾಮಯ್ಯ ಅವರನ್ನು “ಕಾವೇರಿ ನಿವಾಸದಲ್ಲಿ ಭೇಟಿ ಮಾಡಿದರು. ಸಚಿವರಾದ ಜಮೀರ್ ಅಹ್ಮದ್ ಖಾನ್, ಶಿವರಾಜ್ ತಂಗಡಗಿ, ಶಾಸಕ ಪೊನ್ನಣ್ಣ, ಯತೀಂದ್ರ ಸಿದ್ದರಾಮಯ್ಯ ಈ ವೇಳೆ ಹಾಜರಿದ್ದರು. ಸಿಪಿ ಯೋಗೇಶ್ವರ್ ನಡೆ ಚನ್ನಪಟ್ಟಣದ ರಾಜಕೀಯದಲ್ಲಿ ಹಲ್‌ಚಲ್ ಎಬ್ಬಿಸಿದೆ.