ಚನ್ನಪಟ್ಟಣ ಉಪಚುನಾವಣೆ ಅಭ್ಯರ್ಥಿ ಆಯ್ಕೆಗೆ ದೆಹಲಿಯಲ್ಲಿ ಕಸರತ್ತು – ಟಿಕೆಟ್‌ ಗೊಂದಲಕ್ಕೆ ಇಂದೇ ತೆರೆ?

ಚನ್ನಪಟ್ಟಣ ಉಪಚುನಾವಣೆ ಅಭ್ಯರ್ಥಿ ಆಯ್ಕೆಗೆ ದೆಹಲಿಯಲ್ಲಿ ಕಸರತ್ತು – ಟಿಕೆಟ್‌ ಗೊಂದಲಕ್ಕೆ ಇಂದೇ ತೆರೆ?

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆಯ ಕಾವು ಜೋರಾಗಿದೆ. ಬಿಜೆಪಿ ಜೆಡಿಎಸ್‌ ನಾಯಕರ ಮಧ್ಯೆ ಟಿಕೆಟ್‌ಗಾಗಿ ಫೈಟ್‌ ಶುರುವಾಗಿದೆ. ಟಿಕೆಟ್‌  ಗೊಂದಲಕ್ಕೆ ಸೋಮವಾರ ಬಿಜೆಪಿ ಹೈಕಮಾಂಡ್‌ ತೆರೆ ಎಳೆಯುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ದಿನಕ್ಕೆ ಒಂದು ಬಾರಿಯೂ ಕೂದಲು ಬಾಚೋದಿಲ್ವಾ? – ತಲೆಯಲ್ಲಿರುವ ಕೂದಲು ಖಾಲಿಯಾಗೋ‌ ಮೊದಲು ಈ ವಿಚಾರ ತಿಳ್ಕೊಳಿ!

ಲೋಕಸಭೆ ಚುನಾವಣೆಯ ಬಳಿಕ ಹೆಚ್‌ಡಿ ಕುಮಾರಸ್ವಾಮಿ ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ರು.. ಇದೀಗ ಸಿ.ಪಿ ಯೋಗೀಶ್ವರ್‌ ಚೆನ್ನಪಟ್ಟಣ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿ ಆಗಿದ್ದಾರೆ. ಇತ್ತ ಜೆಡಿಎಸ್‌ನಿಂದ ನಿಖಿಲ್‌ ಕುಮಾರಸ್ವಾಮಿ ಹೆಸರು ಕೂಡ ಕೇಳಿ ಬರುತ್ತಿದೆ.. ಸೋಮವಾರ ದೆಹಲಿಯಲ್ಲಿ ಚನ್ನಪಟ್ಟಣ ಉಪಚುನಾವಣೆ ಮೈತ್ರಿ ಅಭ್ಯರ್ಥಿ ಆಯ್ಕೆ ಸಂಬಂಧ ಸಭೆ ನಡೆಯಲಿದೆ. ಅಧ್ಯಕ್ಷ ಜಿ.ಪಿ.ನಡ್ಡಾ ನೇತೃತ್ವದಲ್ಲಿ ನಡೆಯುವ ಸಭೆ ಮಾಜಿ ಸಚಿವ ಸಿಪಿ ಯೋಗೇಶ್ವರ್‌  ಅವರಿಗೆ ಬಿಜೆಪಿ ಹೈಕಮಾಂಡ್‌ ಬುಲಾವ್‌ ನೀಡಿದೆ.

ಸಿಪಿವೈಗೆ ಟಿಕೆಟ್ ನೀಡಿ ಡಿಸಿಎಂ ಡಿಕೆ ಶಿವಕುಮಾರ್‌  ಠಕ್ಕರ್ ಕೊಡಲು ಬಿಜೆಪಿ ಹೈಕಮಾಂಡ್ ತಂತ್ರಗಾರಿಕೆ ನಡೆಸಿದೆ ಎನ್ನಲಾಗಿದೆ. ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರು ಕೆಲ ಷರತ್ತುಗಳ ಮೇಲೆ ಸಿಪಿವೈಗೆ ಟಿಕೆಟ್‌ ಸಿಗುವ ಸಾಧ್ಯತೆಯಿದೆ. ಉಪಚುನಾವಣೆಯಲ್ಲಿ ಸಿಪಿವೈ,  ವಿಧಾನಸಭಾ ಚುನಾವಣೆಯಲ್ಲಿ ನಿಖಿಲ್‌ಗೆ ಅವಕಾಶ ಸಿಗಬಹುದು ಎನ್ನಲಾಗುತ್ತಿದೆ.

ಉಪಚುನಾವಣೆಯಲ್ಲಿ ಟಿಕೆಟ್ ಸಿಗದಿದ್ದರೆ ಸ್ವತಂತ್ರ ಸ್ಪರ್ಧೆ ಬಗ್ಗೆ ಅಭಿಪ್ರಾಯ ಸಂಗ್ರಹಿಸಲು ಸಮಾವೇಶ ನಡೆಸಲು ಸಿಪಿವೈ ಮುಂದಾಗಿದ್ದರು. ಸಿಪಿವೈ ಬಂಡಾಯಕ್ಕೂ ಮುನ್ನ ಎಚ್ಚೆತ್ತ ಬಿಜೆಪಿ ಹೈಕಮಾಂಡ್‌ ದೆಹಲಿಗೆ ಬರುವಂತೆ ಸೂಚನೆ ನೀಡಿದೆ.

Shwetha M