ಚನ್ನಪಟ್ಟಣ ಅಚ್ಚರಿ ಅಭ್ಯರ್ಥಿ ದಚ್ಚುನಾ? – ಕಾಂಗ್ರೆಸ್ ನಿಂದ ರಾಜಕೀಯ ಎಂಟ್ರಿನಾ?
ಡಿಕೆ ಬ್ರದರ್ಸ್ ಮಾಸ್ಟರ್ ಪ್ಲ್ಯಾನ್ ಏನು?
ಹೆಚ್.ಡಿ ಕುಮಾರಸ್ವಾಮಿ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಪರಿಣಾಮ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಬೈ ಎಲೆಕ್ಷನ್ ನಡೆಯಲಿದೆ. ಹೀಗಾಗಿ ಚನ್ನಪಟ್ಟಣವನ್ನ ತೆಕ್ಕೆಗೆ ತೆಗೆದುಕೊಳ್ಳೋಕೆ ಮೂರೂ ಪಕ್ಷಗಳು ಈಗಾಗಲೇ ಕಸರತ್ತು ಆರಂಭಿಸಿವೆ. ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಪಕ್ಷದ ನಾಯಕರು ಕ್ಷೇತ್ರದ ಟಿಕೆಟ್ ಹಂಚಿಕೆ ವಿಚಾರವಾಗಿ ಮಾಸ್ಟರ್ಪ್ಲ್ಯಾನ್ ಮಾಡ್ತಿದ್ದಾರೆ. ಇದ್ರ ನಡುವೆ ಕಾಂಗ್ರೆಸ್ನಿಂದ ಡಿ.ಕೆ ಸುರೇಶ್ ಸ್ಪರ್ಧೆ ಮಾಡ್ತಾರೆ ಎಂಬ ಸುದ್ದಿ ಹರಿದಾಡಿತ್ತು. ಬಟ್ ಇದನ್ನ ನಿರಾಕರಿಸಿದ್ದ ಡಿಕೆ ಬ್ರದರ್ ಚನ್ನಪಟ್ಟಣದಿಂದ ಅಚ್ಚರಿಯ ಅಭ್ಯರ್ಥಿಯನ್ನ ಕಣಕ್ಕಿಳಿಸೋದಾಗಿ ಹೇಳಿದ್ರು. ಬಟ್ ಈಗ ಆ ಅಚ್ಚರಿ ಅಭ್ಯರ್ಥಿ ಯಾರು ಅನ್ನೋ ಬಗ್ಗೆ ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ನಟ ದರ್ಶನ್ರನ್ನ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಪ್ಲ್ಯಾನ್ ಮಾಡಿತ್ತು ಎಂದಿದ್ದಾರೆ. ಈ ಮೂಲಕ ಚನ್ನಪಟ್ಟಣದಿಂದ ದರ್ಶನ್ ಕಣಕ್ಕಿಳಿಸಲು ಡಿಕೆ ಬ್ರದರ್ಸ್ ಸಿದ್ಧತೆ ನಡೆಸಿದ್ರಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ.
ಇದನ್ನೂ ಓದಿ: ಗಿಲ್ & ಆವೇಶ್ ಬೆಂಚ್ ಗಷ್ಟೇ ಸೀಮಿತ – ಭಾರತಕ್ಕೆ ಇಬ್ಬರು ಪ್ಲೇಯರ್ಸ್ ವಾಪಸ್
ಕಾಂಗ್ರೆಸ್ ಅಭ್ಯರ್ಥಿಯಾಗ್ತಿದ್ರಾ ದರ್ಶನ್?
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ ಮತ್ತು ಗ್ಯಾಂಗ್ ಜೈಲುಪಾಲಾಗಿರುವ ಹೊತ್ತಲ್ಲೇ ಶಾಕಿಂಗ್ ಸುದ್ದಿಯೊಂದು ಹೊರ ಬಿದ್ದಿದೆ. ಈ ಬಗ್ಗೆ ಮಾತನಾಡಿರುವ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ನಿಂದ ಅಚ್ಚರಿ ಅಭ್ಯರ್ಥಿ ಹಾಕುತ್ತೇವೆ ಎಂದು ಈ ಹಿಂದೆ ಡಿ.ಕೆ.ಸುರೇಶ್ ಹೇಳಿದ್ದರು. ಆದರೆ ಆ ಅಚ್ಚರಿ ಅಭ್ಯರ್ಥಿ ಈಗ ಜೈಲುಪಾಲಾಗಿದ್ದಾರೆ. ನಟರೊಬ್ಬರು ಕಾಂಗ್ರೆಸ್ ಪರವಾಗಿ ಹೆಚ್ಚು ಪ್ರಚಾರ ಮಾಡಿದ್ದರು. ಅವರನ್ನು ಕಾಂಗ್ರೆಸ್ಗೆ ಸೇರಿಸಿಕೊಂಡು ಚುನಾವಣೆಗೆ ನಿಲ್ಲಿಸಲು ಡಿಕೆ ಬ್ರದರ್ಸ್ ಪ್ಲಾನ್ ಮಾಡಿದ್ದ. ಆ ವ್ಯಕ್ತಿ ಯಾರು ಅಂತಾ ನೀವೇ ಊಹಿಸಿಕೊಳ್ಳಿ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ಮತ್ತು ಗ್ಯಾಂಗ್ ಸದ್ಯ ಕಂಬಿ ಎಣಿಸುತ್ತಿದ್ದಾರೆ. ತನಿಖೆ ಚುರುಕುಗೊಳಿಸಿರುವ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯಗಳನ್ನು ಕಲೆಹಾಕುತ್ತಿದ್ದಾರೆ. ಬಂಧಿತ ಆರೋಪಿಗಳಿಗೆ ಡ್ರಿಲ್ ಮಾಡುತ್ತಿದ್ದಾರೆ. ಹೀಗಾಗಿ ಸಿ.ಪಿ ಯೋಗೇಶ್ವರ್ ಹೇಳಿದ ಆ ನಟ ದರ್ಶನ್ ಅವ್ರೇ ಎನ್ನಲಾಗುತ್ತಿದೆ. ಹಾಗೇ ಟಿಕೆಟ್ ಬಗ್ಗೆ ಮಾತನಾಡಿರುವ ಯೋಗೇಶ್ವರ್, ರಾಮನಗರ ನಾಲ್ಕು ಕ್ಷೇತ್ರಗಳ ಪೈಕಿ ಚನ್ನಪಟ್ಟಣದಲ್ಲಿ ಬಿಜೆಪಿಗೆ ಅಸ್ತಿತ್ವ ಇದೆ. ಇಲ್ಲಿ ಬಿಜೆಪಿಗೆ ಹೆಚ್ಚು ಬಲ ಇದೆ. ಕನಕಪುರ, ರಾಮನಗರ, ಮಾಗಡಿಯಲ್ಲಿ ಜೆಡಿಎಸ್ ಗೆ ಶಕ್ತಿ ಇದೆ. ಆದರೆ ಪಕ್ಷದ ವರಿಷ್ಠರು ಏನು ತೀರ್ಮಾನ ಮಾಡ್ತಾರೆ ನೋಡೋಣ. ವಸ್ತುಸ್ಥಿತಿ ಏನಿದೆ ಅನ್ನೋದನ್ನ ನಾನು ಹೇಳಿದ್ದೇನೆ. ಎರಡೂ ಪಕ್ಷಗಳು ಸೇರಿ ಚುನಾವಣೆ ಎದುರಿಸುತ್ತೇವೆ. ಎನ್‌ಡಿಎ ಅಭ್ಯರ್ಥಿ ಯಾರೇ ಆದರೂ ನಾವು ಕೆಲಸ ಮಾಡುತ್ತೇವೆ. ಲೋಕಸಭಾ ಚುನಾವಣೆಯಲ್ಲಿ ಜೊತೆಯಾಗಿ ಕೆಲಸ ಮಾಡಿ ಸಕ್ಸಸ್ ಸಿಕ್ಕಿದೆ. ಹಾಗಾಗಿ ಯಾವುದೇ ಗೊಂದಲ ಇಲ್ಲದೇ ಈ ಚುನಾವಣೆಯಲ್ಲೂ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದಿದ್ದಾರೆ.
ಸದ್ಯ ಚನ್ನಪಟ್ಟಣ ಕ್ಷೇತ್ರಕ್ಕೆ ಆರು ತಿಂಗಳ ಒಳಗೆ ಉಪಚುನಾವಣೆ ನಡೆಯಲಿದೆ. ಒಕ್ಕಲಿಗ ಭದ್ರಕೋಟೆಯಲ್ಲಿ ಮೇಲುಗೈ ಸಾಧಿಸಲು ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ದೇವೇಗೌಡರ ಕುಟುಂಬದ ನಡುವೆ ಮತ್ತೊಂದು ಪ್ರತಿಷ್ಠೆಯ ಕದನ ನಡೆಯಲಿದೆ. ಈ ಹಿಂದೆ ಜೆಡಿಎಸ್ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಹಾಗೇ ಕಾಂಗ್ರೆಸ್ನಿಂದ ಲೋಕಸಭಾ ಚುನಾವಣೆಯಲ್ಲಿ ಸೋಲು ಕಂಡಿರುವ ಡಿ.ಕೆ ಸುರೇಶ್ ಕಣಕ್ಕಿಳಿಯುತ್ತಾರೆ ಎನ್ನಲಾಗಿತ್ತು. ಬಟ್ ಈಗ ಅಭ್ಯರ್ಥಿ ವಿಚಾರದಲ್ಲಿ ದರ್ಶನ್ ಹೆಸರು ಥಳಕು ಹಾಕಿಕೊಂಡಿದೆ. ರಾಜಕೀಯ ವಲಯದಲ್ಲಿ ಮತ್ತೊಂದು ಕದನಕ್ಕೆ ಕಾರಣವಾಗಿದೆ. ದರ್ಶನ್ ಇರುವ ಪೊಲೀಸ್ ಠಾಣೆ ಸುತ್ತಾ ಶಾಮಿಯಾನ ಹಾಕಿ ಮುಚ್ಚಲಾಗಿದೆ. ಕೊಲೆ ಪ್ರಕರಣದ ಆರೋಪಿಗೆ ಈ ರೀತಿ ರಕ್ಷಣೆ ನೀಡುತ್ತಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಇದೀಗ ರಾಜಕೀಯ ನಾಯಕರೂ ಕೂಡ ಪೊಲೀಸರ ನಡೆಯನ್ನ ಪ್ರಶ್ನಿಸಿದ್ದಾರೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ದರ್ಶನ್ ಹಿಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕೆ ಈ ರೀತಿ ರಕ್ಷಿಸುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಈ ಮೂಲಕ ದರ್ಶನ್ ಕೇಸ್ ಭಾರೀ ಸಂಚಲನ ಮೂಡಿಸಿದೆ.