ಕಟೀಲ್ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ NSUI ಕಾರ್ಯಕರ್ತರು – ʼನಳಿನ್ ಹಠಾವೋ.. ದೇಶ್ ಬಚಾವೋ..ʼ ಎಂಬ ಘೋಷಣೆ ಕೂಗಿ ಆಕ್ರೋಶ
ಸಂಸದ ನಳಿನ್ ಕುಮಾರ್ ಕಟೀಲ್ ಅವರ ಮನೆಗೆ ಎನ್ಎಸ್ಯುಐ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಮುತ್ತಿಗೆಗೆ ಯತ್ನಿಸಿದ್ದ ಎನ್ಎಸ್ಯುಐ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ: ಹಾಸ್ಟೆಲ್ ಊಟ ಸೇವಿಸಿ ನೂರಾರು ವಿದ್ಯಾರ್ಥಿಗಳು ಅಸ್ವಸ್ಥ
ಕೇಂದ್ರದಿಂದ ರಾಜ್ಯಕ್ಕೆ ಅನುದಾನ ತಾರತಮ್ಯ ಹಿನ್ನೆಲೆಯಲ್ಲಿ ಭಾರತದ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (NSUI) ಕಾರ್ಯಕರ್ತರು ನಳಿನ್ ಕುಮಾರ್ ಕಟೀಲ್ ಮನೆಗೆ ನುಗ್ಗಲು ಯತ್ನಿಸಿದ್ದಾರೆ. ಮಂಗಳೂರಿನ ಉರ್ವದಲ್ಲಿರುವ ಅಶೋಕಾ ಅಪಾರ್ಟ್ ಮೆಂಟ್ ಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆ ʼನಳಿನ್ ಹಠಾವೋ.. ದೇಶ್ ಬಚಾವೋ..ʼ ಎಂಬ ಘೋಷಣೆ ಕೇಳಿಬಂದಿದೆ.
ಬಿಗಿ ಪೊಲೀಸ್ ಬಂದೋಬಸ್ತ್ ನಡುವೆಯೂ ಕಟೀಲ್ ಮನೆಗೆ ನುಗ್ಗಲು ಕಾರ್ಯಕರ್ತರು ಯತ್ನಿಸಿದ್ದಾರೆ. ಈ ವೇಳೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಎನ್ಎಸ್ಯುಐ ಕಾರ್ಯಕರ್ತರನ್ನು ತಡೆದು ವಶಕ್ಕೆ ಪಡೆದಿದ್ದಾರೆ. ಮಂಗಳೂರಿನ ಉರ್ವದಲ್ಲಿರುವ ಅಶೋಕಾ ಅಪಾರ್ಟ್ ಮೆಂಟ್ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.