ಚಾರ್‌ ಧಾಮ್ ಯಾತ್ರೆಯಲ್ಲಿ ಭಕ್ತರ ಸಂಖ್ಯೆ ದುಪ್ಪಟ್ಟು – ದೇಗುಲಗಳ ಬಳಿ ವಿಡಿಯೋ, ರೀಲ್ಸ್ ಗೆ ನಿಷೇಧ

ಚಾರ್‌ ಧಾಮ್ ಯಾತ್ರೆಯಲ್ಲಿ ಭಕ್ತರ ಸಂಖ್ಯೆ ದುಪ್ಪಟ್ಟು – ದೇಗುಲಗಳ ಬಳಿ ವಿಡಿಯೋ, ರೀಲ್ಸ್ ಗೆ ನಿಷೇಧ

ಚಾರ್ ಧಾಮ್ ಯಾತ್ರೆ ಈಗಾಗಲೇ ಆರಂಭವಾಗಿದೆ. ನಿತ್ಯ ಲಕ್ಷಾಂತರ ಮಂದಿ ಭಕ್ತರು ದೇಗುಲಗಳಿಗೆ ಬರುತ್ತಿದ್ದಾರೆ. ಚಾರ್ ಧಾಮ್ ದೇವಾಲಯಗಳಲ್ಲಿ ಭಕ್ತ ಸಂಖ್ಯೆ ದಿನ ದಿನಕ್ಕೂ ಹೆಚ್ಚುತ್ತಿದೆ. ದೇಗುಲಗಳಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗಿರುವ ಕಾರಣ ದೇಗುಲದ ಮುಂದೆ ಯಾರು ರೀಲ್ಸ್‌, ವಿಡಿಯೋ ಮಾಡುವಂತಿಲ್ಲ ಹಾಗೇ, ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಉತ್ತರಾಖಂಡ ಸರ್ಕಾರ ನಿರ್ಧರಿಸಿದೆ.

ಇದನ್ನೂ ಓದಿ: ಕ್ರಿಕೆಟ್ ನಿಂದ ದೂರವಾಗ್ತಾರಾ ಕಿಂಗ್? – ನಿವೃತ್ತಿ ಬಳಿಕ ನನ್ನ ನೋಡಲ್ಲ ಎಂದಿದ್ದೇಕೆ?

ಹೌದು, ಚಾರ್​ ಧಾಮ್ ಯಾತ್ರೆ ಈಗಾಗಲೇ ಶುರುವಾಗಿದೆ. ದೇಗುಲಗಳಲ್ಲಿ ಭಕ್ತಸಾಗರವೇ ಹರಿದುಬರುತ್ತಿದೆ. ದೇವಸ್ಥಾನಗಳಲ್ಲಿ ಭಕ್ತರ ಸಂಖ್ಯೆ ಹೆಚ್ಚಿರುವ ಕಾರಣ ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ 50 ಮೀಟರ್​ ವ್ಯಾಪ್ತಿಯಲ್ಲಿ ಯಾರೂ ರೀಲ್ಸ್​ಗಳನ್ನು ಮಾಡುವಂತಿಲ್ಲ ಎನ್ನುವ ಕಠಿಣ ನಿಯಮವನ್ನು ಜಾರಿಗೆ ತರಲಾಗಿದೆ. ಕೇದಾರನಾಥ, ಬದರಿನಾಥ್, ಯಮುನೋತ್ರಿ ಮತ್ತು ಗಂಗೋತ್ರಿಯಲ್ಲಿ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ನಿರ್ಧರಿಸಿದೆ.

ಹರಿದ್ವಾರ ಮತ್ತು ರಿಷಿಕೇಶದಲ್ಲಿ ಆಫ್‌ಲೈನ್ ನೋಂದಣಿ ಮೇ 19 (ಭಾನುವಾರ)ದವರೆಗೆ ಮುಚ್ಚಿರುತ್ತದೆ ಎಂದು ಮುಖ್ಯ ಕಾರ್ಯದರ್ಶಿ ರಾಧಾ ರತುರಿ ತಿಳಿಸಿದ್ದಾರೆ. ದೇವಾಲಯಗಳ 50 ಮೀಟರ್ ವ್ಯಾಪ್ತಿಯಲ್ಲಿ ವಿಡಿಯೋಗ್ರಫಿ ಮತ್ತು ಸಾಮಾಜಿಕ ಮಾಧ್ಯಮ ರೀಲ್‌ಗಳ ಮೇಕಿಂಗ್ ಮೇಲೆ ನಿಷೇಧ ಹೇರಲಾಗಿದೆ.

Shwetha M