ವೈಎಸ್ ವಿ ದತ್ತ ವಿರುದ್ಧ 41 ಚೆಕ್ ಬೌನ್ಸ್ ಪ್ರಕರಣ – ಜೀವರಾಜ್ ಬಳಿ ₹8 ಲಕ್ಷ ಸಾಲ!
ಕಡೂರು ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ವೈಎಸ್ವಿ ದತ್ತ (JDS Candidate YSV Datta) ವಿರುದ್ಧ 41 ಚೆಕ್ ಬೌನ್ಸ್ ಪ್ರಕರಣಗಳು (Cheque Bounce Cases) ದಾಖಲಾಗಿವೆ ಎಂಬ ಮಾಹಿತಿ ಹೊರಬಿದ್ದಿದೆ. ಚುನಾವಣಾ ಅಧಿಕಾರಿಗಳಿಗೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. 2014 ರಿಂದ 2023ರ ವರೆಗೆ ರಾಜ್ಯ ಹೊರರಾಜ್ಯಗಳಲ್ಲಿ 41 ಚೆಕ್ಬೌನ್ಸ್ ಪ್ರಕರಣಗಳು ದಾಖಲಾಗಿವೆ. ಇನ್ ಸ್ಟ್ರುಮೆಂಟ್ಸ್ (NI)ಕಾಯ್ದೆ 1881 ಕಲಂ 138ರ ಅಡಿಯಲ್ಲಿ ಪ್ರಕರಣಗಳು ದಾಖಲಾಗಿವೆ. ಶೃಂಗೇರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜೀವರಾಜ್ (Jeevaraj, BJP Candidate) ಬಳಿ 8 ಲಕ್ಷ ಸಾಲವನ್ನು ಪಡೆದುಕೊಂಡಿರುವುದಾಗಿ ತಿಳಿಸಿದ್ದಾರೆ.
ಇದನ್ನೂ ಓದಿ : ಕೊನೇ ಕ್ಷಣದಲ್ಲಿ ಮುಳಬಾಗಿಲು ಕ್ಷೇತ್ರದ ‘ಕೈ’ ಅಭ್ಯರ್ಥಿ ಬದಲು – ಕೊತ್ತನೂರು ಮಂಜುನಾಥ್ ಹಠಕ್ಕೆ ಮಣಿದ್ರಾ ನಾಯಕರು?
ವೈಎಸ್ವಿ ದತ್ತ ಅವರು 2022-23 ರಲ್ಲಿ 8 ಲಕ್ಷದ 15 ಸಾವಿರ ಆದಾಯ ಹೊಂದಿದ್ದಾರೆ. 17.89 ಲಕ್ಷ ಮೌಲ್ಯದ ಚರಾಸ್ತಿ, 2.94 ಕೋಟಿ ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ. ಒಟ್ಟು 93.19 ಲಕ್ಷ ಸಾಲ ಪಡೆದುಕೊಂಡಿದ್ದಾರೆ. ಕೆಲ ತಿಂಗಳ ಹಿಂದೆ ವೈಎಸ್ವಿ ದತ್ತ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ರು. ಆದರೆ ಕಡೂರು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ತಪ್ಪಿದ ಹಿನ್ನೆಲೆ ಮತ್ತೆ ಜೆಡಿಎಸ್ಗೆ ಘರ್ ವಾಪ್ಸಿ ಆಗಿದ್ದರು. ಈಗ ಜೆಡಿಎಸ್ ಟಿಕೆಟ್ ಪಡೆದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.