ನಿರಂತರ ಮಳೆಗೆ ತತ್ತರಿಸಿದ ಹಿಮಾಚಲ ಪ್ರದೇಶ – ಆರ್ಥಿಕ ನೆರವು ಘೋಷಿಸಿದ ಛತ್ತೀಸ್‌ಗಢ ಸಿಎಂ

ನಿರಂತರ ಮಳೆಗೆ ತತ್ತರಿಸಿದ ಹಿಮಾಚಲ ಪ್ರದೇಶ – ಆರ್ಥಿಕ ನೆರವು ಘೋಷಿಸಿದ ಛತ್ತೀಸ್‌ಗಢ ಸಿಎಂ

ಉತ್ತರಾಖಂಡ್‌ ಹಾಗೂ ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದೆ. ರಣ ಮಳೆ ಸಾಕಷ್ಟು ಅವಾಂತರ ಸೃಷ್ಟಿಸಿದೆ. ಸಾಕಷ್ಟು ಹಾನಿ ಸಂಭವಿಸಿದೆ, ಜನರ ಬದುಕು ಮೂರಾಬಟ್ಟೆಯಾಗಿದೆ. ನಿರಂತರ ಮಳೆಗೆ ತತ್ತರಿಸಿದ ಹಿಮಾಚಲ ಪ್ರದೇಶಕ್ಕೆ ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್  ಅವರು ಆರ್ಥಿಕ ನೆರವು ನೀಡುವುದಾಗಿ ಘೋಷಿಸಿದ್ದಾರೆ.

ಇದನ್ನೂ ಓದಿ:ರಣಭೀಕರ ಮಳೆಗೆ ಕಂಗೆಟ್ಟ ಹಿಮಾಚಲ ಪ್ರದೇಶ – ಸಾವಿನ ಸಂಖ್ಯೆ 74ಕ್ಕೇರಿಕೆ, 10 ಸಾವಿರ ಕೋಟಿ ರೂಪಾಯಿ ನಷ್ಟ 

ಛತ್ತೀಸ್‌ಗಢ ಸಿಎಂ ಭೂಪೇಶ್ ಬಾಘೇಲ್ ಅವರು ಗುರುವಾರ (ಆಗಸ್ಟ್​ 17) ಹಿಮಾಚಲ ಪ್ರದೇಶದ ಕೌಂಟರ್‌ಪರ್ ಸುಖ್ವಿಂದರ್ ಸಿಂಗ್ ಸುಖು ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ, ಅಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಿದ್ದರು. ತದನಂತರ ಜನರಿಗೆ ಸಹಾಯ ನೀಡುವುದಾಗಿ ಭರವಸೆ ನೀಡಿದ್ದರು. ಛತ್ತೀಸ್‌ಗಢದ ಸಿಎಂ ಕೊಟ್ಟ ಮಾತಿನಂತೆ ಹಿಮಾಚಲ ಪ್ರದೇಶದ ಜನರಿಗೆ ಸಹಾಯ ಮಾಡಿದ್ದಾರೆ. ಹಿಮಾಚಲ ಪ್ರದೇಶಕ್ಕೆ 11 ಕೋಟಿ ರೂ. ಹಣವನ್ನು ಘೋಷಣೆ ಮಾಡಿದ್ದಾರೆ.

ವಿಪತ್ತಿನ ಸಂತ್ರಸ್ತರ ಪರಿಹಾರ ಮತ್ತು ಪುನರ್ವಸತಿಗಾಗಿ ಹಿಮಾಚಲ ಪ್ರದೇಶ ಸರ್ಕಾರಕ್ಕೆ ಛತ್ತೀಸ್‌ಗಢದ ಜನರ ಪರವಾಗಿ 11 ಕೋಟಿ ರೂ. ಆರ್ಥಿಕ ನೆರವನ್ನು ಬಿಡುಗಡೆಗೊಳಿಸಿದ್ದೇವೆ ಎಂದು ಸಿಎಂ ಹೇಳಿದ್ದಾರೆ.

ಕಳೆದ ಒಂದು ವಾರದಿಂದ ಹಿಮಾಚಲ ಪ್ರದೇಶದ ಗುಡ್ಡಗಾಡು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಶಿಮ್ಲಾ ಮತ್ತು ಇತರ ಜಿಲ್ಲೆಗಳಲ್ಲಿ ಭೂಕುಸಿತ ಉಂಟಾಗಿದೆ. ಮಳೆ ಸಂಬಂಧಿತ ಪ್ರಕರಣಗಳಲ್ಲಿ ಕಳೆದ ಒಂದು ವಾರದಲ್ಲಿ ಬರೋಬ್ಬರಿ 74 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

suddiyaana