ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಘೋಷಣೆ
ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ. ನವೆಂಬರ್ 13 ರಂದು ಮೂರು ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ.
ಇದನ್ನೂ ಓದಿ: ಭಾರತ ಮತ್ತು ನ್ಯೂಝಿಲೆಂಡ್ ನಡುವಿನ ಟೆಸ್ಟ್ ಸರಣಿಗೆ ಕೌಂಟ್‌ಡೌನ್ – ಮೊದಲ ಪಂದ್ಯ ಮಳೆಗೆ ಆಹುತಿ?
ದೆಹಲಿಯ ವಿಜ್ಞಾನ ಭವನದಲ್ಲಿ ಇಂದು (ಅಕ್ಟೋಬರ್ 15) ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ಎರಡು ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದರು. ಇದೇ ವೇಳೆ ಕರ್ನಾಟಕದ ಶಿಗ್ಗಾಂವಿ(ಹಾವೇರಿ), ಚನ್ನಪಟ್ಟಣ)ರಾಮನಗರ) ಮತ್ತು ಸಂಡೂರು(ಬಳ್ಳಾರಿ ಜಿಲ್ಲೆ) ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಗೆ ದಿನಾಂಕ ಪ್ರಕಟಿಸಿದ್ದು, ನವೆಂಬರ್ 13ರಂದು ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಇನ್ನು ನವೆಂಬರ್ 23ರಂದು ಈ ಮೂರು ಕ್ಷೇತ್ರಗಳ ಮತ ಎಣಿಕೆ ನಡೆಯಲಿದೆ.
ಸಂಸದರಾಗಿ ಆಯ್ಕೆಯಾಗಿರುವ ಹೆಚ್ಡಿ ಕುಮಾರಸ್ವಾಮಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಚನ್ನಪಟ್ಟಣ ಕ್ಷೇತ್ರ ತೆರವಾಗಿದ್ದರೆ, ಬಸವರಾಜ ಬೊಮ್ಮಾಯಿ ರಾಜೀನಾಮೆಯಿಂದ ಶಿಗ್ಗಾಂವಿ (ಹಾವೇರಿ ಜಿಲ್ಲೆ) ವಿಧಾನಸಭಾ ಕ್ಷೇತ್ರ ತೆರವಾಗಿದೆ. ಇನ್ನು ಇ.ತುಕಾರಾಂ ರಾಜೀನಾಮೆಯಿಂದ ತೆರವಾಗಿರುವ ಸಂಡೂರು ಕ್ಷೇತ್ರಕ್ಕೆ ಇದೀಗ ಉಪಚುನಾವಣೆಗೆ ದಿನಾಂಕ ಫಿಕ್ಸ್ ಆಗಿದೆ.