ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ – ಡಿ.ಕೆ ಶಿವಕುಮಾರ್‌ಗೆ ಸಿದ್ದು ಶುಭಾಶಯ

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ – ಡಿ.ಕೆ ಶಿವಕುಮಾರ್‌ಗೆ ಸಿದ್ದು ಶುಭಾಶಯ

ರಾಜಕಾರಣ ಅನ್ನೋದು ಎಲ್ಲರ ಕಣ್ಣಿಗೂ ಕಾಣುತ್ತಲೇ ಇರುತ್ತದೆ. ಇಲ್ಲಿ ಯಾರೂ ಶತ್ರುಗಳಿರಲ್ಲ. ಮಿತ್ರರೂ ಇರಲ್ಲ. ಅಧಿಕಾರ ಕೂಡಾ ಶಾಶ್ವತವಲ್ಲ ಅನ್ನೋದಕ್ಕೆ ಈಗ ನಡೆಯುತ್ತಿರುವ ಬೆಳವಣಿಗೆಗಳೇ ಸಾಕ್ಷಿ. ಅಂತೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಿಎಂ ಪಟ್ಟದಿಂದ ಇಳಿಯುತ್ತಾರೆ. ಸ್ವತಃ ಮುಖ್ಯಮಂತ್ರಿಗಳೇ ರಾಜೀನಾಮೆ ನೀಡುವುದಾಗಿ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ಇದನ್ನೂ ಓದಿ:ಸಿಎಂ ಸಿದ್ದರಾಮಯ್ಯ ಕಾಲಿಗೆ ಬಿದ್ದ ಡಿಕೆಶಿ – ಸಿದ್ದು ಆಶೀರ್ವಾದ, ಶಿವಕುಮಾರ್ ಕಣ್ಣೀರು

ಸಚಿವರ ಬ್ರೇಕ್ ಫಾಸ್ಟ್ ಸಭೆಯಲ್ಲಿ ಎರಡು ದಿನಗಳಿಂದ ನಡೆಯುತ್ತಿದ್ದ ರಾಜಕೀಯ ಹೈಡ್ರಾಮಕ್ಕೆ ತೆರೆಬಿದ್ದಿದೆ. ಸಿಎಂ ಸಿದ್ದರಾಮಯ್ಯ ತಮ್ಮ ರಾಜೀನಾಮೆ ಕುರಿತ ಅಂತಿಮ ನಿರ್ಧಾರವನ್ನು ಸ್ಪಷ್ಟಪಡಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅಧಿಕೃತವಾಗಿ ಘೋಷಣೆ ಮಾಡಿದರು. ಬ್ರೇಕ್ ಫಾಸ್ಟ್​ ಮೀಟಿಂಗ್ ನಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು ತಾವಾಗಿಯೇ ಪದತ್ಯಾಗ ಮಾಡಲಿರುವ ನಿರ್ಧಾರವನ್ನು ಅಧಿಕೃತವಾಗಿ ಸಚಿವರೆದುರು ಘೋಷಿಸಿದರು.

ಸಿಎಂ ಸಿದ್ದರಾಮಯ್ಯ ಮಧ್ಯಾಹ್ನ 3 ಗಂಟೆಗೆ ಲೋಕಭವನಕ್ಕೆ ತೆರಳಿ ಅಧಿಕೃತವಾಗಿ ರಾಜೀನಾಮೆ ಸಲ್ಲಿಸುವುದಾಗಿ ಹೇಳಿದರು. ರಾಜಭವನಕ್ಕೆ ತೆರಳಿ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಲಿದ್ದಾರೆ. ಒಂದು ವೇಳೆ ರಾಜ್ಯಪಾಲರು ಲಭ್ಯವಿಲ್ಲದಿದ್ದರೆ, ಅವರ ಕಾರ್ಯದರ್ಶಿಗೆ ಪತ್ರ ಹಸ್ತಾಂತರಿಸಲು ನಿರ್ಧರಿಸಿದ್ದಾರೆ. ಇದೇ ವೇಳೆ ಸಿಎಂ ಸಿದ್ದರಾಮಯ್ಯ ಅವರು ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿದರು. ರಾಜ್ಯಪಾಲರು ಇಲ್ವಂತಲ್ಲ, ಹೋಗ್ತೀನಿ ನೋಡೋಣ ಎಂದು ಹೇಳುವ ಮೂಲಕ, ತಮ್ಮ ನಿರ್ಧಾರ ಸ್ಪಷ್ಟವಾಗಿದೆ ಎಂದು ಸೂಚಿಸಿದರು. ರಾಜ್ಯಪಾಲರು ಇಂದೋರ್‌ನಲ್ಲಿದ್ದು, ಗುರುವಾರವೇ (ಇವತ್ತು) ಬೆಂಗಳೂರಿಗೆ ವಾಪಸ್ ಆಗುವ ನಿರೀಕ್ಷೆಯಿದೆ.

Sulekha

Leave a Reply

Your email address will not be published. Required fields are marked *