ತವರು ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದು ಬಂಪರ್ ಗಿಫ್ಟ್ – ಮೈಸೂರಿನ ಚಾಮುಂಡಿ ಬೆಟ್ಟ ಅಭಿವೃದ್ಧಿಗೆ ಪ್ರಾಧಿಕಾರ ರಚನೆ

ತವರು ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದು ಬಂಪರ್ ಗಿಫ್ಟ್ – ಮೈಸೂರಿನ ಚಾಮುಂಡಿ ಬೆಟ್ಟ ಅಭಿವೃದ್ಧಿಗೆ ಪ್ರಾಧಿಕಾರ ರಚನೆ

ರಾಜ್ಯ ಸರ್ಕಾರದ 2023-24ನೇ ಸಾಲಿನ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಜಿಲ್ಲೆಗೆ ಬಂಪರ್ ಕೊಡುಗೆ ನೀಡಿದ್ದಾರೆ. ನಾಡದೇವತೆ ಮೈಸೂರಿನ ಚಾಮುಂಡಿ ಬೆಟ್ಟ ಅಭಿವೃದ್ಧಿಗೆ, ಚಾಮುಂಡೇಶ್ವರಿ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಸಿದ್ದರಾಮಯ್ಯ ಅಸ್ತು ಎಂದಿದ್ದಾರೆ. ಮೈಸೂರಿನ ಚಾಮುಂಡೇಶ್ವರಿ ದೇವಾಲಯಕ್ಕೆ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಹೀಗಾಗಿ ಭಕ್ತಾದಿಗಳಿಗೆ ಅಗತ್ಯ ಮೂಲ ಸೌಲಭ್ಯವನ್ನು ಕಲ್ಪಿಸುವ ಸಲುವಾಗಿ ಮತ್ತು ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕೈಗೊಳ್ಳುವ ದೃಷ್ಟಿಯಿಂದ ಚಾಮುಂಡೇಶ್ವರಿ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ರಚಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ:ಬಜೆಟ್‌ನಲ್ಲಿ ಬೆಂಗಳೂರಿಗೆ ಬಂಪರ್‌ ಗಿಫ್ಟ್‌ – ಆರೋಗ್ಯ ವಲಯಕ್ಕೂ ಹೆಚ್ಚಿನ ಆದ್ಯತೆ 

ಚಾಮುಂಡೇಶ್ವರಿ ದೇವಿ ಸನ್ನಿಧಾನ ಅಭಿವೃದ್ಧಿಗೆ ಹಾಗೂ ವಿವಿಧ ಮೂಲ ಸೌಕರ್ಯ ಒದಗಿಸಲು ಕೇಂದ್ರ ಪ್ರವಾಸೋದ್ಯಮ ಮಂತ್ರಾಲಯವು ಪ್ರಸಾದ್ ಯೋಜನೆಯಡಿ 45.70 ಕೋಟಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಿತ್ತು.  ಇನ್ನು ರಾಜ್ಯದಲ್ಲಿ ದೇವಾಲಯಗಳ ನಿರ್ಮಾಣಕ್ಕೆ ಹೊರ ರಾಜ್ಯಗಳ ಶಿಲ್ಪಿಗಳ ಮೇಲೆ ಅವಲಂಬಿತರಾಗಿದ್ದು, ನಮ್ಮ ರಾಜ್ಯದಲ್ಲಿಯೂ ದೇವಾಲಯಗಳ ನಿರ್ಮಾಣಕ್ಕಾಗಿ ನುರಿತ ಶಿಲ್ಪಿಗಳನ್ನು ತಯಾರಿಸಲು ಕೋಲಾರ ಜಿಲ್ಲೆಯಲ್ಲಿ ಶಿಲ್ಪಕಲಾ ತರಬೇತಿ ಕೇಂದ್ರವನ್ನು ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

suddiyaana