5 ತಿಂಗಳ ಹಿಂದೆಯಷ್ಟೇ ಮದುವೆಯಾದ ನವವಿವಾಹಿತೆ ಕಿರುಕುಳಕ್ಕೆ ಬಲಿ?

5 ತಿಂಗಳ ಹಿಂದೆಯಷ್ಟೇ ಮದುವೆಯಾದ ನವವಿವಾಹಿತೆ ಕಿರುಕುಳಕ್ಕೆ ಬಲಿ?

ಅನುಮಾನಾಸ್ಪದ ರೀತಿಯಲ್ಲಿ ನವವಿವಾಹಿತೆ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಹೊನ್ನೇನಹಳ್ಳಿಯಲ್ಲಿ ನಡೆದಿದೆ. ರೂಪಾ (30) ಮೃತ ಯುವತಿಯಾಗಿದ್ದು, ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. 5 ತಿಂಗಳ ಹಿಂದೆಯಷ್ಟೇ ಮುನಿರಾಜು ಜತೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ನಿವಾಸಿ ರೂಪಾ ಮದುವೆಯಾಗಿತ್ತು. ಪತಿಯ ಅನುಮಾನದ ಭೂತಕ್ಕೆ ರೂಪಾ ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದ್ದು, ಮೃತದೇಹವನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ.

ಇದನ್ನೂ ಓದಿ: ಹೆಂಡತಿನ ಕೊಂ*ದು ಮಗು ಜೊತೆ ಬಾವಿಗೆ ಹಾರಿದ ಗಂಡ – ಕೂಡಲೇ ಬಾವಿಗೆ ಜಿಗಿದು ಮಗುವನ್ನ ರಕ್ಷಿಸಿದ ಸ್ಥಳೀಯರು

ಇನ್ನು ಅನುಮಾನಾಸ್ಪದ ರೀತಿಯಲ್ಲಿ ಮನೆ ಮಗಳ ಸಾವಿನಿಂದ ಕಂಗಾಲಾಗಿರುವ ರೂಪಾ ಕುಟುಂಬಸ್ಥರು, ಆಕೆಯ ಪತಿ ಮುನಿರಾಜು ವಿರುದ್ಧ ಕೊಲೆ ಆರೋಪ ಮಾಡಿದ್ದಾರೆ. ಶವಾಗಾರದ ಬಳಿ ಮುನಿರಾಜು ತಾಯಿಗೆ ಮೃತ ರೂಪಾ ಸಂಬಂಧಿಕರು ಹಿಡಿಶಾಪವನ್ನೂ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದು, ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ

ಇದನ್ನೂ ಓದಿ: ಗಾಂಜಾ ಸೇವನೆ  ಆರೋಪ, ಖಾಕಿ ಕಿರುಕುಳ – ಮರ್ಯಾದೆಗೆ ಅಂಜಿ ವಿದ್ಯಾರ್ಥಿ ಆತ್ಮಹತ್ಯೆ

ರೂಪಾರದ್ದು ಆತ್ಮಹತ್ಯೆಯಾ ಅಥವಾ ಆಕೆಯ ಕುಟುಂಬಸ್ಥರು ದೂರಿರುವಂತೆ ಕೊಲೆಯಾ ಎಂಬುದು ಪೊಲೀಸ್​​ ತನಿಖೆಯಿಂದ ಬಹಿರಂಗಗೊಳ್ಳಬೇಕಿದೆ.

Kishor KV