ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ  – ನೋಡು ನೋಡುತ್ತಿದ್ದಂತೆ ಕಾರಿನೊಳಗಿದ್ದ ವ್ಯಕ್ತಿ ಭಸ್ಮ!

 ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ  – ನೋಡು ನೋಡುತ್ತಿದ್ದಂತೆ ಕಾರಿನೊಳಗಿದ್ದ ವ್ಯಕ್ತಿ ಭಸ್ಮ!

 ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ  ಕಾಣಿಸಿಕೊಂಡು ಚಾಲಕ ಕಾರಿನ ಒಳಗೇ ಸಜೀವ ದಹನವಾಗಿರುವ ಭೀಕರ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ  ತಾಲೂಕಿನಲ್ಲಿ ಸಂಭವಿಸಿದೆ. ತಾಲೂಕಿನ ಅಚೆಪಲ್ಲಿ ಗ್ರಾಮದ ಬಳಿ ಈ ದುರ್ಘಟನೆ ನಡೆದಿದ್ದು, ಪೆನುಮಲೆ ಗ್ರಾಮದ ನಿವಾಸಿ ಉದಯ್ ಕುಮಾರ್ (70) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಇರಾನ್‌ – ಇಸ್ರೇಲ್‌ ಯುದ್ದ ಎಫೆಕ್ಟ್!‌  – ಬೆಂಗಳೂರಿಗೆ ಆಗಮಿಸಬೇಕಿದ್ದ 9, ನಿರ್ಗಮಿಸಬೇಕಿದ್ದ 10 ವಿಮಾನಗಳು ರದ್ದು

ಉದಯ್ ಕುಮಾರ್ ಅವರು ತಮ್ಮ ಕಾರಿನಲ್ಲಿ ಸಂಚರಿಸುತ್ತಿದ್ದಾಗ ಅಚೆಪಲ್ಲಿ ಗ್ರಾಮದ ಬಳಿ ವಾಹನದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲಿ ಬೆಂಕಿ ಇಡೀ ಕಾರನ್ನು ಆವರಿಸಿಕೊಂಡಿದ್ದು, ಚಾಲಕನಿಗೆ ಹೊರಬರಲು ಸಾಧ್ಯವಾಗದೆ ಕಾರಿನ ಒಳಗೇ ಸಿಲುಕಿಕೊಂಡಿದ್ದಾರೆ. ಪರಿಣಾಮವಾಗಿ ಅವರು ಸ್ಥಳದಲ್ಲೇ ಸಜೀವ ದಹನವಾಗಿದ್ದಾರೆ.

ಕಾರಿನಲ್ಲಿ ಸಂಭವಿಸಿದ ಶಾರ್ಟ್ ಸರ್ಕ್ಯೂಟ್  ಬೆಂಕಿ ಅವಘಡಕ್ಕೆ ಪ್ರಾಥಮಿಕ ಕಾರಣವಿರಬಹುದು ಎಂದು ಶಂಕಿಸಲಾಗಿದೆ. ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನಿಸಿದರೂ ಸಹ ಚಾಲಕನನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಘಟನಾ ಸ್ಥಳಕ್ಕೆ ಬಾಗೇಪಲ್ಲಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

Kishor KV

Leave a Reply

Your email address will not be published. Required fields are marked *