ಚಿಕ್ಕಮಗಳೂರಿನ ಪ್ರವಾಸಿಗರಿಗೆ ಬಿಗ್‌ ಶಾಕ್‌! – ಇನ್ಮುಂದೆ ಈ ಸ್ಥಳಗಳಲ್ಲಿ 3 ಗಂಟೆಗಿಂತ ಹೆಚ್ಚು ಸಮಯ ಕಳೆಯುವಂತಿಲ್ಲ!

ಚಿಕ್ಕಮಗಳೂರಿನ ಪ್ರವಾಸಿಗರಿಗೆ ಬಿಗ್‌ ಶಾಕ್‌! – ಇನ್ಮುಂದೆ ಈ ಸ್ಥಳಗಳಲ್ಲಿ 3 ಗಂಟೆಗಿಂತ ಹೆಚ್ಚು ಸಮಯ ಕಳೆಯುವಂತಿಲ್ಲ!

ಕರ್ನಾಟಕ ರಾಜ್ಯದ ಚಿಕ್ಕಮಗಳೂರು ಒಂದು ರಮಣೀಯ ಗಿರಿಧಾಮವಾಗಿದೆ. ಪ್ರಕೃತಿ ಸೌಂದರ್ಯದೊಂದಿಗೆ ಪ್ರವಾಸಿ ತಾಣಗಳನ್ನು ನೋಡಬೇಕೆಂದರೆ ಚಿಕ್ಕಮಗಳೂರಿಗೆ ಹೋಗಬೇಕು. ಆದ್ರೀಗ ಪ್ರವಾಸಿಗರಿಗೆ ಶಾಕಿಂಗ್‌ ಸುದ್ದಿಯೊಂದಿದೆ. ಇನ್ಮುಂದೆ ಚಿಕ್ಕಮಗಳೂರಿನ ಈ ಸ್ಥಳದಲ್ಲಿ ಮೂರು ಗಂಟೆಗಿಂತ ಹೆಚ್ಚು ಸಮಯ ಕಳೆಯುವಂತಿಲ್ಲ. ಕಾಫಿನಾಡು ಚಿಕ್ಕಮಗಳೂರಿನ ಪ್ರಸಿದ್ಧ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಹೊಸ ನಿಯಮ ಜಾರಿ ಮಾಡಲಾಗಿದೆ.

ಇದನ್ನೂ ಓದಿ: ಸಿಲಿಕಾನ್‌ ಸಿಟಿಯಲ್ಲಿ ಬೊಲೆರೊ ಭಯ! – ಬೆಂಗಳೂರಿನಲ್ಲಿ ಅನುಮಾನಾಸ್ಪದವಾಗಿ ವಾಹನ ಓಡಾಟ

ಬೆಂಗಳೂರಿನಿಂದ ಚಿಕ್ಕಮಗಳೂರು ಸುಮಾರು 250 ರಿಂದ 265 ಕಿ.ಮೀ ದೂರದಲ್ಲಿದ್ದು, ಚಿಕ್ಕಮಗಳೂರಿನಲ್ಲಿ ನೋಡಬೇಕಾದ ಸಾಕಷ್ಟು ಪ್ರವಾಸಿ ಆಕರ್ಷಣೆಗಳಿವೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನ, ಮಾಣಿಕ್ಯಧಾರ ಜಲಪಾತ, ಕಲ್ಹಟ್ಟಿ ಜಲಪಾತ, ಮುಳ್ಳಯ್ಯನಗಿರಿ, ಹೆಬ್ಬೆ ಜಲಪಾತ, ಬಾಬಾ ಬುಡನ್‌ಗಿರಿ, ಕೆಮ್ಮಣ್ಣುಗುಂಡಿ, ಭದ್ರಾ ವನ್ಯಜೀವಿ ಧಾಮ, ಕಾಫಿ ವಸ್ತು ಸಂಗ್ರಹಾಲಯ, ಕದಂಬಿ ಜಲಪಾತ, ಝಡ್ ಪಾಯಿಂಟ್ ಸೇರಿದಂತೆ ಇನ್ನು ಹಲವಾರು ಪ್ರವಾಸಿ ತಾಣಗಳು ಪ್ರವಾಸಿಗರ ಕಣ್ಮನಸೆಳೆಯುವಂತಿವೆ. ಆದ್ರೀಗ ಪ್ರಸಿದ್ದ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಹೊಸ ನಿಯಮ ಜಾರಿ ಮಾಡಲಾಗಿದೆ. ಚಂದ್ರದ್ರೋಣ ಪರ್ವತದ ಸಾಲಿನಲ್ಲಿರುವ ವಿಶ್ವ ಪ್ರಸಿದ್ಧ ಎತ್ತರದ ಶಿಖರ ಮುಳ್ಳಯ್ಯನಗಿರಿ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಹೊಸ ರೂಲ್ಸ್ ಮಾಡಲಾಗಿದೆ.

ಮುಳ್ಳಯ್ಯನಗಿರಿಯಲ್ಲಿ ಕಾಲ ಕಳೆಯಲು ಪ್ರವಾಸಿಗರಿಗೆ ಮೂರು ಗಂಟೆಗಳ ಸಮಯ ನಿಗದಿ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಹಾಗೇ ಮುಳ್ಳಯ್ಯನಗಿರಿ ,ಸೀತಾಳಯ್ಯನಗಿರಿ ಭಾಗದಲ್ಲಿ ಅಡುಗೆ ಮಾಡುವುದು ಹಾಗೂ ಪ್ಲಾಸ್ಟಿಕ್ ಬಳಕೆ ನಿಷೇಧಿಸಲಾಗಿದೆ. ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ತೆರಳದಂತೆ ಪ್ರವಾಸೋದ್ಯಮ ಇಲಾಖೆ ಸೂಚನ ಫಲಕಗಳ ಅಳವಡಿಸಿದೆ. ಇನ್ನು ಪ್ರವಾಸಿಗರು ಝರಿ ಫಾಲ್ಸ್ ಗೆ ಕಾಲ್ನಡಿಗೆಯಲ್ಲಿ ತೆರಳಲು ಅನುಮತಿ ನೀಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ನಾಗರಾಜ್ ವರು ಆದೇಶ ಹೊರಡಿಸಿದ್ದಾರೆ.

ಚಂದ್ರದ್ರೋಣ ಪರ್ವತದ ಸಾಲಿನ ಮುಳ್ಳಯ್ಯನಗಿರಿ ಸೇರಿದಂತೆ ಸೀತಾಳಯ್ಯನಗಿರಿ, ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ, ಗಾಳಿಕೆರೆ ಹೊನ್ನಮ್ಮನ ಹಳ್ಳಕ್ಕೆ ಪ್ರವಾಸಿಗರ ದಂಡೇ ಹರಿದು ಬರುತ್ತೆ. ನಿತ್ಯವೂ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ. ಅದರಲ್ಲೂ ಈಗ ಸ್ಕೂಲ್ ಹಾಲಿಡೇಸ್ ಇರುವುರಿದ ಪೋಷಕರು ಮಕ್ಕಳ ಸಮೇತ ಪ್ರವಾಸಕ್ಕೆ ಆಗಮಿಸುತ್ತಾರೆ. ಹೀಗಾಗಿ ಮತ್ತಷ್ಟು ಜನ ದಟ್ಟಣೆ ಹೆಚ್ಚಾಗುವ ಸಾಧ್ಯತೆಗಳಿವೆ. ಹಾಗೇ ಮುಂಜಾಗ್ರತಾ ಕ್ರಮವಾಗಿ ಯಾವುದೇ ಅಹಿತಕ ಘಟನೆಗಳು ನಡೆಯದಂತೆ, ಅಲ್ಲದೇ ಹೆಚ್ಚು ಹೊತ್ತು ಮೋಜು ಮಸ್ತಿಗೆ ಜಿಲ್ಲಾಡಳಿ ಬ್ರೇಕ್ ಹಾಕಿದೆ.

Shwetha M