ಕಾಫಿನಾಡಿನಲ್ಲಿ ಹುಲಿ ಕಳೆಬರಹ ಪತ್ತೆ – ಆಕಸ್ಮಿಕ ಸಾವ? ಊರಿನವರೇ ವಿಷವಿಟ್ರಾ? ,

ಜಿಲ್ಲೆಯ ತರೀಕೆರೆ ತಾಲೂಕಿನ ಹೆಬ್ಬೆ ವನ್ಯಜೀವಿ ವಲಯದ ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅರಣ್ಯ ಇಲಾಖೆ ಹಾಗೂ ಹುಲಿ ಗಣತಿ ಸಿಬ್ಬಂದಿ ಗಸ್ತು ತಿರುಗುತ್ತಿದ್ದಾಗ ಗಂಗೆಗಿರಿ ಮೀಸಲು ಅರಣ್ಯ ಪ್ರದೇಶ, ಶಿರಗೋಳ ಗ್ರಾಮದ ಭಾಗದಲ್ಲಿ ಭಾರೀ ಗಾತ್ರದ ಹುಲಿ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಎನ್‌ಟಿಸಿಎ ಮಾರ್ಗಸೂಚಿಯಂತೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಭದ್ರಾ ಹುಲಿ ಸಂರಕ್ಷಿತ ಚಿಕ್ಕಮಗಳೂರು ಕ್ಷೇತ್ರ ನಿರ್ದೇಶಕರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ ಎಂಟರಿಂದ ಹತ್ತು ವರ್ಷದ ಹುಲಿ ಮೃತಪಟ್ಟಿರುವುದು ಗೊತ್ತಾಗಿದೆ.
ಇದನ್ನೂ ಓದಿ: ಬಿಜೆಪಿ ಕಾರ್ಯಕರ್ತೆ ಬಟ್ಟೆ ಬಿಚ್ಚಿ ಹಲ್ಲೆ ನಡೆಸಿದ್ರಾ ಪೊಲೀಸರು? – ಕಡೆಗೂ ಬಯಲಾಯ್ತು ಅಸಲಿ ವಿಚಾರ!
ಮೇಲ್ನೋಟಕ್ಕೆ ಹುಲಿಗಳು ಗುದ್ದಾಡಿಕೊಂಡು ಸಾವನ್ನಪ್ಪಿರುವುದಾಗಿ ಕಂಡುಬಂದಿದೆ. ಹುಲಿ ಕಳೇಬರವನ್ನು ಎನ್‌ಟಿಸಿಎ ಸದಸ್ಯರ ಸಮ್ಮುಖದಲ್ಲಿ ಪಶು ವೈದ್ಯಾಧಿಕಾರಿಗಳು ಮರಣೋತ್ತರ ಪರೀಕ್ಷೆ ನಡೆಸಿ ಮಾದರಿಗಳನ್ನು ಸಂಗ್ರಹಿಸಿದ್ದಾರೆ. ಹೆಚ್ಚಿನ ತನಿಖೆಗಾಗಿ ಮಾದರಿ ಪರೀಕ್ಷಾ ಸಂಸ್ಥೆಗಳಿಗೆ ಕಳುಹಿಸಲು ತೀರ್ಮಾನಿಸಿ ಕಳೇಬರವನ್ನು ಸುಟ್ಟು ಹಾಕಲಾಗಿದೆ. ಹೆಬ್ಬೆ ವಲಯದ ಗಂಗೆಗಿರಿಯ ಶಿರಗುಳ ಮೀಸಲು ಅರಣ್ಯದಲ್ಲಿ ತನ್ನ ಪ್ರದೇಶಕ್ಕಾಗಿ ಎರಡು ಹುಲಿಗಳು ದೊಡ್ಡಮಟ್ಟದಲ್ಲಿ ಕಾದಾಟ ನಡೆಸಿದೆ. ಈ ವೇಳೆ ಘಟನೆ ನಡೆದಿದೆ. ಸ್ಥಳಕ್ಕೆ ಉಪ ಅರಣ್ಯ ಸಂರಕ್ಷಣಾ ಅಧಿಕಾರಿ ಪುಲ್ಕಿತ್ ಮೀನಾ ಭೇಟಿ ನೀಡಿ, ಹುಲಿ ಸಂರಕ್ಷಣಾ ಪ್ರಾಧಿಕಾರದ ನಿಯಮಾನುಸಾರ ಮರಣೋತ್ತರ ಪರೀಕ್ಷೆಗೆ ಆದೇಶ ನೀಡಿದರು.

ನೋಡಿರಿ

