ಕಾಫಿ ನಾಡಿನಲ್ಲಿ ಕಾಡ್ಗಿಚ್ಚು – ಬೆಂಕಿ ನಂದಿಸಲು ಹೋದ ಅರಣ್ಯ ಇಲಾಖೆ ಸಿಬ್ಬಂದಿ ಬೈಕ್ ಗಳು ಭಸ್ಮ

ಕಾಫಿ ನಾಡಿನಲ್ಲಿ ಕಾಡ್ಗಿಚ್ಚು – ಬೆಂಕಿ ನಂದಿಸಲು ಹೋದ ಅರಣ್ಯ ಇಲಾಖೆ ಸಿಬ್ಬಂದಿ ಬೈಕ್ ಗಳು ಭಸ್ಮ

ಚಿಕ್ಕಮಗಳೂರು: ಕಳೆದ ಕೆಲವು ದಿನಗಳಿಂದ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಾಡ್ಗಿಚ್ಚು ವ್ಯಾಪಕವಾಗಿ ಹರಡುತ್ತಿದೆ. ಇದರಿಂದಾಗಿ ನೂರಾರು ಎಕರೆ ಅರಣ್ಯ ಪ್ರದೇಶಗಳು ಸುಟ್ಟು ಭಸ್ಮವಾಗುತ್ತಿದೆ. ಇಂದು ಸಿಂದಿಗೆರೆ ಗ್ರಾಮದ ಅರಣ್ಯ ವ್ಯಾಪ್ತಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ನಂದಿಸಲು ಬಂದ ಅರಣ್ಯ ಇಲಾಖೆ ಸಿಬ್ಬಂದಿ ಬೈಕ್ ಬೆಂಕಿಯ ಕೆನ್ನಾಲಗೆಗೆ ಸಿಲುಕಿ ಸಂಪೂರ್ಣ ಭಸ್ಮವಾಗಿದೆ.

ಇದನ್ನೂ ಓದಿ : ಹೋಳಿ ಹಬ್ಬದಂದೇ ಇಡೀ ಮಸೀದಿಗೆ ಕಪ್ಪು ಟಾರ್ಪಲ್ – ಪೊಲೀಸರೇ ಸೂಚನೆ ಕೊಟ್ಟಿದ್ದೇಕೆ..?

ಸಿಂದಿಗೆರೆ ಗ್ರಾಮದ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮಾಹಿತಿ ತಿಳಿದು ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಈ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಮೂರು ಬೈಕ್​ಗಳನ್ನು ರಸ್ತೆ ಪಕ್ಕದಲ್ಲಿ ನಿಲ್ಲಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಬೆಂಕಿ ಬಿದ್ದ ವ್ಯಾಪ್ತಿಯಲ್ಲಿ ಗಾಳಿ ಜೋರಾಗಿ ಬೀಸಿದ ಪರಿಣಾಮ ಬೆಂಕಿ ಮತ್ತಷ್ಟು ಹೆಚ್ಚಾಗಿದೆ. ಈ ವೇಳೆ ಬೆಂಕಿಯ ಕಿಡಿ ಅರಣ್ಯ ಇಲಾಖೆ ಸಿಬ್ಬಂದಿಯ ಬೈಕ್​ಗಳಿಗೆ ತಗುಲಿದೆ. ಇದರಿಂದಾಗಿ ಮೂರು ಬೈಕ್ ಗಳು ಸಂಪೂರ್ಣ ಭಸ್ಮವಾಗಿವೆ.

ಕಳೆದ ಕೆಲವು ದಿನಗಳಿಂದ ಚಾರ್ಮಾಡಿ ಘಾಟ್ ನ ಅಲೇಕಾನ್ ಅರಣ್ಯ, ದೇವರಮನೆ, ಬಲ್ಲಾಳರಾಯನ ದುರ್ಗ ಭಾಗದಲ್ಲಿ ಕಾಡ್ಗಿಚ್ಚು ಕಾಣಿಸಿಕೊಳ್ಳುತ್ತಿದೆ.

suddiyaana