ರಾಜ್ಯದಲ್ಲಿ ಹೆಚ್ಚಾಯ್ತು ಬಾಲ್ಯವಿವಾಹ ಪ್ರಕರಣ – ಜನ ಎಚ್ಚೆತ್ತುಕೊಳ್ಳುವುದು ಯಾವಾಗ?

ರಾಜ್ಯದಲ್ಲಿ ಹೆಚ್ಚಾಯ್ತು ಬಾಲ್ಯವಿವಾಹ ಪ್ರಕರಣ – ಜನ ಎಚ್ಚೆತ್ತುಕೊಳ್ಳುವುದು ಯಾವಾಗ?

ಬೆಂಗಳೂರು: ದೇಶದಲ್ಲಿ ಬಾಲ್ಯ ವಿವಾಹವನ್ನು ನಿಷೇಧ ಮಾಡಿದ್ದರೂ ಕೂಡಾ ಕರ್ನಾಟಕದಲ್ಲಿ ಮಾತ್ರ ಬಾಲ್ಯ ವಿವಾಹ ನಡೆಯುತ್ತಲೇ ಇದೆ. ಆದರೆ, ಈ ಬಾರಿ ಬಾಲ್ಯವಿವಾಹ ಪ್ರಕರಣಗಳು ಹೆಚ್ಚು ದಾಖಲಾಗಿವೆ ಎಂಬ ಆತಂಕಕಾರಿ ವರದಿ ಹೊರಬಿದ್ದಿದೆ. ರಾಜ್ಯ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಬಾಲ್ಯ ವಿವಾಹಗಳ ಪ್ರಕರಣಗಳು ಹೆಚ್ಚು ದಾಖಲಾಗಿರುವ ಬಗ್ಗೆ ವರದಿಯೊಂದು ಬಿಡುಗಡೆಯಾಗಿದೆ. 2021-22 ರ ಸಾಲಿನಲ್ಲಿ ಬರೋಬ್ಬರಿ 2,819 ಬಾಲ್ಯವಿವಾಹ ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಮಕ್ಕಳ ಆಯೋಗದಿಂದ 2,401 ಪ್ರಕರಣಗಳನ್ನ ತಡೆಹಿಡಿದಿದ್ದು, 418 ವಿವಾಹಗಳು ನಡೆದಿವೆ. ಇದರಲ್ಲಿ 389 ಪ್ರಕರಣಗಳಲ್ಲಿ ಎಫ್ಐಆರ್ ದಾಖಲಾಗಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದ್ರೆ ಈ ವರ್ಷ 150 ಕೇಸ್‌ಗಳು ಕಡಿಮೆಯಾಗಿದೆ.

ಇದನ್ನೂ ಓದಿ:   ಭಕ್ತರಿಗೆ ಸಿದ್ದೇಶ್ವರ ಶ್ರೀಗಳ ಚಿತಾಭಸ್ಮವನ್ನು ನೀಡುವುದಿಲ್ಲ- ಬಸವಲಿಂಗ ಸ್ವಾಮೀಜಿ ಸ್ಪಷ್ಟನೆ

ಬಾಲ್ಯವಿವಾಹ ತಡೆಯಲು ಎಷ್ಟೇ ಪ್ರಯತ್ನ ಪಟ್ಟರೂ ಕೂಡಾ ಗ್ರಾಮೀಣ ಭಾಗದಲ್ಲಿ ಬಾಲ್ಯ ವಿವಾಹಗಳು ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಹೀಗಾಗಿ ಮಕ್ಕಳ ಹಕ್ಕುಗಳ ರಕ್ಷಣ ಆಯೋಗ ಬಾಲ್ಯ ವಿವಾಹ ತಡೆಯಲು ವಿನೂತನ ಕ್ರಮ ಜಾರಿಗೆ ಮುಂದಾಗಿದೆ. ವಿವಾಹ ನೋಂದಣಿ ಕ್ರಮವನ್ನ ಈ ವರ್ಷದಿಂದ ಅಧಿಕಾರಿಗಳು ಜಾರಿ ಮಾಡುತ್ತಿದ್ದಾರೆ. ಇದರಿಂದ ಬಾಲ್ಯ ವಿವಾಹ ಪ್ರಕರಣಗಳ ಸಂಖ್ಯೆಯನ್ನ ಕಡಿಮೆ ಮಾಡಲು ಅಧಿಕಾರಿಗಳು ಮುಂದಾಗಿದ್ದಾರೆ.

2021-22ರಲ್ಲಿ 2819 ಬಾಲ್ಯ ವಿವಾಹಗಳು ನಡೆದಿವೆ. 2020-21ರಲ್ಲಿ 3007, 2019-20ರಲ್ಲಿ 1779, 2018-19ರಲ್ಲಿ 1394, 2017-18ರಲ್ಲಿ 1353 ಬಾಲ್ಯ ವಿವಾಹಗಳು ನಡೆದಿವೆ. ಇನ್ನು ರಾಜ್ಯದ 12 ಜಿಲ್ಲೆಗಳಲ್ಲಿ ಬಾಲ್ಯ ವಿವಾಹಗಳು ಹೆಚ್ಚಾಗಿ ನಡೆಯುತ್ತಿವೆ. ನಂಬರ್ ಒನ್ ಸ್ಥಾನದಲ್ಲಿ ಮೈಸೂರು ಜಿಲ್ಲೆ ಇದ್ದು, ಬೆಳಗಾವಿ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಕಲಬುರ್ಗಿ, ಹಾಸನ, ಮಂಡ್ಯ, ರಾಯಚೂರು, ತುಮಕೂರು, ಯಾದಗಿರಿಯಲ್ಲಿಯು ಬಾಲ್ಯ ವಿವಾಹ ಪ್ರಕರಣ ಹೆಚ್ಚಾಗಿವೆ.

suddiyaana