ಕೊಳವೆ ಬಾವಿಗೆ ಬಿದ್ದ ಬಾಲಕ – ಕಾಲು ಅಲುಗಾಡಿಸುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆ

ಕೊಳವೆ ಬಾವಿಗೆ ಬಿದ್ದ ಬಾಲಕ – ಕಾಲು ಅಲುಗಾಡಿಸುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆ

2 ವರ್ಷದ ಬಾಲಕ ಕೊಳವೆ ಬಾವಿಗೆ ಬಿದ್ದಿರುವ ಘಟನೆ ವಿಜಯಪುರ  ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದಲ್ಲಿ ನಡೆದಿದೆ. ತೋಟದಲ್ಲಿ ಆಟವಾಡುತ್ತಿರುವ ವೇಳೆ ಮಗು ಕೊಳವೆ ಬಾವಿಗೆ ಬಿದ್ದಿದೆ.

ಬುಧವಾರ 2 ವರ್ಷದ ಸಾತ್ವಿಕ್‌ ತೋಟದಲ್ಲಿ ಆಟವಾಡುತ್ತಿದ್ದ 400 ಅಡಿ ಆಳದ ಕೊಳವೆಬಾವಿಗೆ ಬಿದ್ದಿದೆ. ಮಗುವಿನ ರಕ್ಷಣೆಗಾಗಿ ಅಹೋರಾತ್ರಿಯಿಂದಲೇ ಕಾರ್ಯಾಚರಣೆ ನಡೆಯುತ್ತಿದೆ. ಕ್ಯಾಮೆರಾದಲ್ಲಿ ಕಾಲು ಅಲುಗಾಡಿಸುತ್ತಿರುವ ದೃಶ್ಯ ಸೆರೆಯಾಗಿದೆ. ಬೆಳಗಾವಿ, ಕಲಬುರಗಿಯಿಂದ ಎಸ್‌ಡಿಆರ್‌ಎಫ್‌ (NDRF), ಹೈದರಾಬಾದ್‌ನಿಂದ ಎನ್‌ಡಿಆರ್‌ಎಫ್‌ (NDRF) ತಂಡ ರಾತ್ರಿಯೇ ಸ್ಥಳಕ್ಕೆ ಬಂದಿದೆ. ಸ್ಥಳೀಯ ಅಗ್ನಿಶಾಮಕ ಮತ್ತು ಪೊಲೀಸ್ ಸಿಬ್ಬಂದಿ ಜೊತೆಗೂಡಿದ್ದು ರಕ್ಷಣಾ ಕಾರ್ಯಾಚರಣೆ ವೇಗವಾಗಿ ನಡೆಸುತ್ತಿದೆ.

ಇದನ್ನೂ ಓದಿ: ಡೆಲ್ಲಿ ವಿರುದ್ಧ ಗೆದ್ದು ಬೀಗಿದ ಕೆಕೆಆರ್​ – ನೈಟ್‌ರೈಡರ್ಸ್‌ಗೆ 106 ರನ್‌ಗಳ ಭರ್ಜರಿ ಜಯ

20 ಅಡಿ ಆಳದಲ್ಲಿ ಬಾಲಕ ಸಿಲುಕಿದ್ದು ಕೊಳವೆಬಾವಿ ಪಕ್ಕದಲ್ಲಿ ಸಮಾನಾಂತರವಾಗಿ 2 ಜೆಸಿಬಿ ಬಳಸಿ ಗುಂಡಿಯನ್ನು ತೋಡಿ ಮಣ್ಣನ್ನು ಹೊರತೆಗೆದು ಮಗುವಿರುವ ಸ್ಥಳದ ಬಳಿಗೆ ರಕ್ಷಣಾ ತಂಡ ಸಮೀಪಿಸುತ್ತಿದೆ. ಕೊಳವೆ ಬಾವಿಗೆ ಕ್ಯಾಮೆರಾ ಇಳಿಬಿಟ್ಟು ಬಾಲಕನ ಚಲನವಲನ ಗಮನಿಸಲಾಗುತ್ತಿದೆ.  ಜಿಲ್ಲಾಡಳಿತ ಪೈಪ್‌ ಮೂಲಕ ಆಕ್ಸಿಜನ್‌ ಕಳುಹಿಸಿದ್ದು, ಕ್ಯಾಮೆರಾದಲ್ಲಿ ಕಾಲು ಅಲುಗಾಡಿಸುತ್ತಿರುವ ದೃಶ್ಯ ಸೆರೆಯಾಗಿದ್ದರಿಂದ ಬಿರುಸಿನಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಕಾರ್ಯಾಚರಣೆಗೆ ಬಂಡೆ ಕಲ್ಲುಗಳು ಅಡ್ಡಿಯಾಗುತ್ತಿದ್ದು, ಜಿಲ್ಲಾಧಿಕಾರಿ ಟಿ.ಭೂಬಾಲನ್, ಎಸ್ ಪಿ ಋಷಿಕೇಶ ಸೋನಾವಣೆ, ಉಪ ವಿಭಾಗಾಧಿಕಾರಿ ಅಬೀದ್ ಗದ್ಯಾಳ ಅವರು ಸ್ಥಳದಲ್ಲೇ ಬೀಡು ಬಿಟ್ಟು ಕಾರ್ಯಾಚರಣೆ ಗಮನಿಸುತ್ತಿದ್ದಾರೆ.

Shwetha M