ಚೀನಾದಲ್ಲಿ ಮತ್ತೆ ಪ್ರಬಲ ಭೂಕಂಪನ – ದೆಹಲಿಯಲ್ಲೂ ಕಂಪಿಸಿದ ಭೂಮಿ!

ಚೀನಾದಲ್ಲಿ ಮತ್ತೆ ಪ್ರಬಲ ಭೂಕಂಪನ – ದೆಹಲಿಯಲ್ಲೂ ಕಂಪಿಸಿದ ಭೂಮಿ!

ಚೀನಾದಲ್ಲಿ ಪದೇ ಪದೆ ಭೂಕಂಪನ ಸಂಭವಿಸುತ್ತಲೇ ಇದೆ. ಸೋಮವಾರ ಬೆಳಿಗ್ಗೆ ಈಶಾನ್ಯ ಚೀನಾದ ಗುಡ್ಡಗಾಡು ಹಾಗೂ ಪರ್ವತ ಶ್ರೇಣಿಯಲ್ಲಿ ಭೂಕಂಪ ಸಂಭವಿಸಿತ್ತು. ಈ ಅವಘಡದಲ್ಲಿ 47 ಮಂದಿ ಜೀವಂತ ಸಮಾಧಿಯಾಗಿದ್ದಾರೆ. 200ಕ್ಕೂ ಹೆಚ್ಚು ಮಂದಿಯನ್ನು ತುರ್ತಾಗಿ ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿತ್ತು. ಈ ಘಟನೆ ಸಂಭವಿಸಿದ ಕೆಲವೇ ಗಂಟೆಗಳಲ್ಲಿ ಚೀನಾದ ದಕ್ಷಿಣ ಕ್ಸಿನ್‌ಜಿಯಾಂಗ್‌ನಲ್ಲಿ ಕೂಡ ಭೂಮಿ ಕಂಪಿಸಿದೆ.

ಇದನ್ನೂ ಓದಿ: ಅಯೋಧ್ಯೆಯಲ್ಲಿ ಹರಿದುಬಂತು ಭಕ್ತಸಾಗರ – ರಾಮನ ದರ್ಶನಕ್ಕೆ ನೂಕುನುಗ್ಗಲು

ಹೌದು, ಚೀನಾದ ದಕ್ಷಿಣ ಕ್ಸಿನ್‌ಜಿಯಾಂಗ್‌ನಲ್ಲಿ ಸೋಮವಾರ ತಡರಾತ್ರಿ 7.2 ತೀವ್ರತೆಯ ಪ್ರಬಲ ಭೂಕಂಪನ ಸಂಭವಿಸಿದೆ. ದೆಹಲಿಯಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ. ಸದ್ಯ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ. ಆಸ್ತಿಪಾಸ್ತಿ ಹಾನಿಯಾದ ಬಗ್ಗೆಯೂ ವರದಿಯಾಗಿಲ್ಲ ಎಂದು ಮೂಲಗಳು ಹೇಳಿವೆ.

ರಿಕ್ಟರ್‌ ಮಾಪಕದಲ್ಲಿ ಭೂಕಂಪನ ತೀವ್ರತೆ 7.2 ಎಂದು ಗುರುತಿಸಲಾಗಿದ್ದು, ಸುಮಾರು 80 ಕಿಮೀ ಆಳದಲ್ಲಿ ಭೂಕಂಪನದ ಕೇಂದ್ರಬಿಂದು ಪತ್ತೆಯಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರವು ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.

ಇದೇ ಜನವರಿ 11ರಂದು ಅಫ್ಘಾನಿಸ್ತಾನದಲ್ಲಿ 6.1 ತೀವ್ರತೆ ಭೂಕಂಪ ಸಂಭವಿಸಿದ ನಂತರ ದೆಹಲಿ ಮತ್ತು ಎನ್‌ಸಿಆರ್‌ನಲ್ಲಿ ಲಘು ಭೂಕಂಪ ಸಂಭವಿಸಿದ್ದವು. ಕಾಬೂಲ್‌ನಿಂದ ಈಶಾನ್ಯಕ್ಕೆ 241 ಕಿಮೀ ದೂರದಲ್ಲಿ ಕೇಂದ್ರ ಬಿಂದು ಪತ್ತೆಯಾಗಿತ್ತು. ಪಾಕಿಸ್ತಾನದಲ್ಲೂ ಭೂಮಿ ಕಂಪಿಸಿದ ಅನುಭವವಾಗಿತ್ತು ಎಂದು ವರದಿಯಾಗಿದೆ.

Shwetha M