ಚೀನಾದಲ್ಲಿ ನ್ಯುಮೋನಿಯಾ ಹೆಚ್ಚಾಗಲು ಯಾವುದೇ ನಿಗೂಢ ವೈರಸ್‌ ಪ್ರಭಾವ ಕಾರಣವಲ್ಲ –  WHO ಸ್ಪಷ್ಟನೆ

ಚೀನಾದಲ್ಲಿ ನ್ಯುಮೋನಿಯಾ ಹೆಚ್ಚಾಗಲು ಯಾವುದೇ ನಿಗೂಢ ವೈರಸ್‌ ಪ್ರಭಾವ ಕಾರಣವಲ್ಲ –  WHO ಸ್ಪಷ್ಟನೆ

ಕೊರೊನಾ ತವರು ಚೀನಾದಲ್ಲಿ ನಿಗೂಢ ವೈರಸ್‌ ಒಂದು ಪತ್ತೆಯಾಗಿದೆ. ಇದರಿಂದಾಗಿ ಮಕ್ಕಳು ಉಸಿರಾಟದ ತೊಂದರೆಗೆ ಒಳಗಾಗುತ್ತಿದ್ದಾರೆ ಎಂದು ವರದಿಯಾಗಿತ್ತು. ಈ ಬೆನ್ನಲ್ಲೇ ವಿಶ್ವ ಆರೋಗ್ಯ ಸಂಸ್ಥೆ ಮಹತ್ವದ ಮಾಹಿತಿಯೊಂದನ್ನು ಹಂಚಿಕೊಂಡಿದೆ. ಚೀನಾದಲ್ಲಿ ನ್ಯುಮೋನಿಯಾ ಪ್ರಕರಣಗಳು ಹೆಚ್ಚಳವಾಗುತ್ತಿದೆ. ಆದರೆ ಈ ಪ್ರಕರಣಗಳ ಹೆಚ್ಚಳದ ಹಿಂದೆ ಯಾವುದೇ ವೈರಸ್​ಗಳು ಪ್ರಭಾವ ಬೀರುತ್ತಿಲ್ಲ ಎಂದು ತಿಳಿಸಿದೆ.

ಅಕ್ಟೋಬರ್ ನಿಂದ ಚೀನಾದಲ್ಲಿ ನ್ಯುಮೋನಿಯಾ ಹಾಗೂ ಉಸಿರಾಟಕ್ಕೆ ಸಂಬಂಧಿಸಿದ ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗುತ್ತಿರುವ ಮಕ್ಕಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಚೀನಾದ ವುಹಾನ್​ನಲ್ಲಿ ಕೊರೊನಾ ವೈರಸ್​ ಉಲ್ಬಣಗೊಂಡು ಮೂರು ವರ್ಷಗಳು ಕಳೆದಿವೆ. ಇದೀಗ ಚೀನಾದಲ್ಲಿ ಕೋವಿಡ್ ಮಾದರಿಯ ಯಾವುದೇ ವೈರಸ್ ಪತ್ತೆಯಾಗಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.

ಇದನ್ನೂ ಓದಿ: ಭಾರತೀಯ ನೌಕಾಪಡೆ ಮಾಜಿ ಸಿಬ್ಬಂದಿಯ ಮರಣದಂಡನೆಗೆ ವಿರೋಧ – ಭಾರತದ ಮನವಿ ಸ್ವೀಕರಿಸಿದ ಕತಾರ್

ಈಶಾನ್ಯಕ್ಕೆ 500 ಮೈಲುಗಳಷ್ಟು ದೂರದಲ್ಲಿರುವ ಬೀಜಿಂಗ್ ಮತ್ತು ಲಿಯಾನಿಂಗ್‌ನಲ್ಲಿರುವ ಆಸ್ಪತ್ರೆಗಳಿಗೆ ಹೆಚ್ಚಿನ ಸಂಖ್ಯೆಯ ಮಕ್ಕಳನ್ನು ದಾಖಲಿಸಲಾಗುತ್ತಿದೆ. ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ, ನ್ಯುಮೋನಿಯಾ ಏಕಾಏಕಿ ಹೆಚ್ಚಿದ ಕಾರಣ ಶಾಲೆಗಳನ್ನು ಮುಚ್ಚಲಾಗಿದೆ ಎಂದು ವರದಿಯಾಗಿದೆ. ವಿಶ್ವ ಆರೋಗ್ಯ ಸಂಸ್ಥೆಯು ಚೀನಾದ ಮಕ್ಕಳಲ್ಲಿ ಹೆಚ್ಚುತ್ತಿರುವ ಉಸಿರಾಟ ಸಮಸ್ಯೆಗೆ ಸಂಬಂಧಿಸಿದಂತೆ ನಿಗಾ ಇಡುತ್ತಿದೆ. ಎಂದು ಚೀನಾ ಹೇಳಿರುವುದಾಗಿ ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.

ಈ ನಿಗೂಢ ನ್ಯುಮೋನಿಯಾದಿಂದ ಬಳಲುತ್ತಿರುವ ಮಕ್ಕಳಲ್ಲಿ ಶ್ವಾಸಕೋಶದಲ್ಲಿ ಊತ ಮತ್ತು ಅಧಿಕ ಜ್ವರ ಸೇರಿದಂತೆ ಅಸಾಮಾನ್ಯ ಲಕ್ಷಣಗಳು ಕಂಡುಬರುತ್ತಿವೆ. ಕೆಮ್ಮು ಮತ್ತು ಜ್ವರ, ಆರ್‌ಎಸ್‌ವಿ ಮತ್ತು ಉಸಿರಾಟದ ಕಾಯಿಲೆಗಳಿಗೆ ಸಂಬಂಧಿಸಿದ ಇತರ ಲಕ್ಷಣಗಳು ಆ ಮಕ್ಕಳಲ್ಲಿ ಕಂಡುಬರುತ್ತಿಲ್ಲ.

ಈ ಕಾಯಿಲೆ ಯಾವಾಗ ಆರಂಭವಾಯಿತು ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಮೈಕೋಪ್ಲಾಸ್ಮಾ ನ್ಯುಮೋನಿಯಾ ಅಥವಾ ವಾಕಿಂಗ್ ನ್ಯುಮೋನಿಯಾ ಇರಬಹುದು ಎಂದು ವೈದ್ಯರು ಅಂದಾಜಿಸಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆ ಕೂಡ ಈ ಬಗ್ಗೆ ಕಳವಳ ವ್ಯಕ್ತಪಡಿಸಿ ಹೇಳಿಕೆ ನೀಡಿದ್ದು, ಜನರು ಜಾಗರೂಕರಾಗಿರಲು ಸೂಚಿಸಿದೆ. ಇದರೊಂದಿಗೆ, ವಿಶ್ವ ಆರೋಗ್ಯ ಸಂಸ್ಥೆಯು ಮಕ್ಕಳಲ್ಲಿ ಹರಡುವ ಈ ರೋಗದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನೀಡುವಂತೆ ಚೀನಾದ ಆರೋಗ್ಯ ಅಧಿಕಾರಿಗಳನ್ನು ಕೇಳಿದೆ.

Shwetha M