ಮುರುಘಾಶ್ರೀಗೆ ಮತ್ತೆ ಬಂಧನದ ಭೀತಿ! – ಎರಡನೇ ಪ್ರಕರಣದಲ್ಲಿ ವಾರೆಂಟ್ ಜಾರಿ ಮಾಡಿದ ಕೋರ್ಟ್!
ಮೊದಲನೇ ಪೋಕ್ಸೋ ಪ್ರಕರಣದಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿರುವ ಚಿತ್ರದುರ್ಗದ ಮುರುಘಾಶ್ರೀಗೆ 2ನೇ ಪ್ರಕರಣ ಮತ್ತೆ ಬಂಧನದ ಭೀತಿ ಎದುರಾಗಿದೆ. ಪೋಕ್ಸೋ ಕೇಸಿನಲ್ಲಿ ಶ್ರೀಗಳಿಗೆ ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿ ಮಾಡಿದೆ.
ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣದಲ್ಲಿ ಮುರುಘಾ ಮಠದ ಶಿವಮೂರ್ತಿ ಶರಣರನ್ನು ಬಂಧಿಸಲಾಗಿತ್ತು. ಮುರುಘಾ ಶ್ರೀ ವಿರುದ್ಧ ಎರಡು ಪೋಕ್ಸೋ ಪ್ರಕರಣ ದಾಖಲಾಗಿತ್ತು. ಕಳೆದ 13 ತಿಂಗಳಿನಿಂದ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿತ್ತು. ನ.16 ರಂದು ಮೊದಲನೇ ಪೋಕ್ಸೋ ಪ್ರಕರಣದಲ್ಲಿ ಜಾಮೀನು ಮೂಲಕ ಹೊರ ಬಂದಿದ್ದರು. ಆದರೆಇದೀಗ 2ನೇ ಕೇಸಿನಲ್ಲಿ ಬಂಧಿಸುವಂತೆ ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ ಆದೇಶ ಮಾಡಿದೆ. ಈ ಮೂಲಕ ಕೇವಲ ನಾಲ್ಕೇ ದಿನಕ್ಕೆ ಶ್ರೀಗಳಿಗೆ ಮತ್ತೆ ಬಂಧನದ ಭೀತಿ ಶುರುವಾಗಿದೆ.
ಇದನ್ನೂ ಓದಿ: ಚಿತ್ರದುರ್ಗ ಜೈಲಿನಿಂದ ಮುರುಘಾ ಶ್ರೀ ಬಿಡುಗಡೆ – ಮುರುಘಾ ಶ್ರೀಗೆ ಕೋರ್ಟ್ ವಿಧಿಸಿದ 7 ಷರತ್ತುಗಳೇನು?
ಇತ್ತೀಚೆಗೆ ಪ್ರಕರಣವೊಂದಕ್ಕೆ ಹೈಕೋರ್ಟ್ ಜಾಮೀನು ನೀಡಿತ್ತು. ಈ ಹಿನ್ನೆಲೆಯಲ್ಲಿ ಶ್ರೀಗಳು ಜೈಲಿನಿಂದ ಹೊರಬಂದಿದ್ದರು. ಆದರೆ ಇದಕ್ಕೆ ಸರ್ಕಾರಿ ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದರು. 2ನೇ ಪೋಕ್ಸೋ ಕೇಸಲ್ಲಿ ಬಂಧನ ವಾರೆಂಟ್ ಕೋರಿ ಸರ್ಕಾರಿ ವಕೀಲ ಜಗದೀಶ್ ಕೋರ್ಟ್ ಗೆ ಮನವಿ ಮಾಡಿದ್ದರು. ಇದಕ್ಕೆ ಮುರುಘಾ ಶ್ರೀ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
1ನೇ ಪೊಕ್ಸೋ ಕೇಸಲ್ಲಿ ಹೈಕೋರ್ಟ್ ನಿಂದ ಷರತ್ತುಬದ್ಧ ಜಾಮೀನು ಹಿನ್ನೆಲೆಯಲ್ಲಿ ಮುರುಘಾಶ್ರೀ ಚಿತ್ರದುರ್ಗ ಜಿಲ್ಲೆ ಪ್ರವೇಶಿಸುವಂತಿಲ್ಲ. ಮುರುಘಾಶ್ರೀ ಮತ್ತೆ ಬಂಧನದ ಅಗತ್ಯವಿಲ್ಲ. ಬಂಧನ ವಾರೆಂಟ್ ಹೈಕೋರ್ಟ್ ಆದೇಶ ಉಲ್ಲಂಘನೆ ಆಗುತ್ತದೆಂದು ಮುರುಘಾಶ್ರೀ ಪರ ವಕೀಲ ಉಮೇಶ್ ವಾದಿಸಿದ್ದಾರೆ. ಸದ್ಯ ಎರಡೂ ಕಡೆಯ ವಾದ ಆಲಿಸಿರುವ ಚಿತ್ರದುರ್ಗ 2ನೇ ಅಪರ ಜಿಲ್ಲಾ & ಸತ್ರ ನ್ಯಾಯಾಲಯ ಇಂದು ಆದೇಶ ನೀಡಿದೆ. ಈ ಮೂಲಕ 2ನೇ ಪ್ರಕರಣದಲ್ಲಿ ನಿರ್ಧಾರ ಪ್ರಕಟಿಸಿದೆ.
ಕೇರಳದ ಪ್ರಕರಣವೊಂದರ ಉಲ್ಲೇಖದನ್ವಯ ಅರೆಸ್ಟ್ ವಾರೆಂಟ್ ಜಾರಿ ಮಾಡುವಂತೆ ಕೋರ್ಟ್ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರಿಗೆ ಖಡಕ್ ಸೂಚನೆ ನೀಡಿದೆ.