ಸಚಿವ ಡಿ ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರ! – ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ!

ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ತೀವ್ರ ನಿಗಾ ಘಟಕದಲ್ಲಿ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಮುಂದುವರಿಯುತ್ತಿದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ರಿಷಭ್ ಪಂತ್‌ಗೆ ಬೆರಳು ತೋರಿಸಿದ ರಾಜಸ್ಥಾನ್ ರಾಯಲ್ಸ್‌ನ ನಾಂಡ್ರೆಗೆ ಬಿಗ್ ಶಾಕ್ – 35,700 ರೂ. ದಂಡ
ಕಳೆದ ಒಂದು ತಿಂಗಳಿನಿಂದ ಡಿ ಸುಧಾಕರ್ ಮೊಣಕಾಲಿನ ಆಪರೇಶನ್‌ಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ ಮೊಣಕಾಲ ಶಸ್ತ್ರಚಿಕಿತ್ಸೆ ಬಳಿಕ ಶ್ವಾಸಕೋಶದ ಸೋಂಕು ಉಲ್ಬಣಿಸಿತ್ತು. ಹೀಗಾಗಿ ಮಣಿಪಾಲದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ಚಿಕಿತ್ಸೆ ಪಡೆಯುತ್ತಿರುವ ಡಿ ಸುಧಾಕರ್ ಆರೋಗ್ಯ ಆರೋಗ್ಯ ಮತ್ತಷ್ಟು ಕ್ಷೀಣಿಸಿದೆ. ಮಣಿಪಾಲ್ ಆಸ್ಪತ್ರೆಯಿಂದ ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿಲ್ಲ ಎಂದು ವರದಿಯಾಗಿದೆ. ಸದ್ಯ ತೀವ್ರ ನಿಗಾ ಘಟಕದಲ್ಲಿ ಸಚಿವ ಡಿ ಸುಧಾಕರ್‌ಗೆ ಚಿಕಿತ್ಸೆ ನೀಡಲಾಗುತ್ತಿದೆ.
ಶ್ವಾಸಕೋಶ ಕಸಿ ನಡೆಸಲು ವೈದ್ಯರು ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.ಡಿ ಸುಧಾಕರ್ ಅವರಿಗೆ ಲಂಗ್ಸ್ ಟ್ರಾನ್ಸ್ ಪ್ಲಾಂಟೇಷನ್ ಸರ್ಜರಿ ಮಾಡಲು ವೈದ್ಯರು ಸಿದ್ದತೆ ಮಾಡಿಕೊಂಡಿದ್ದಾರೆ ಎಂದು ವರದಿ ಆಗಿದೆ. ಡಾ.ವೆಂಕಟಗಿರಿ ನೇತೃತ್ವದಲ್ಲಿ ಶ್ವಾಸಕೋಶ ಕಸಿ ಸರ್ಜರಿ ನಡೆಯಲಿದೆ.
ಹಿರಿಯೂರು ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಡಿ ಸುಧಾಕರ್ ಮೂರು ಬಾರಿ ಹಿರಿಯೂರಿನಿಂದ ಗೆದ್ದು ಬಂದಿದ್ದಾರೆ. 2004ರಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದರು.

ನೋಡಿರಿ

