ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ – ಮಂಗಳೂರಿನ 5 ಠಾಣಾ ವ್ಯಾಪ್ತಿಯಲ್ಲಿ ಸೆಕ್ಷನ್ 144

ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ – ಮಂಗಳೂರಿನ 5 ಠಾಣಾ ವ್ಯಾಪ್ತಿಯಲ್ಲಿ ಸೆಕ್ಷನ್ 144

ಮಂಗಳೂರು: ಬಿಜೆಪಿ – ಕಾಂಗ್ರೆಸ್ ಕಾರ್ಯಕರ್ತರ ನಡುವೆ ಬುಧವಾರ ತಡರಾತ್ರಿ ಮೂಡುಶೆಡ್ಡೆಯಲ್ಲಿ ಮಾರಾಮಾರಿ ನಡೆದಿದೆ. ಈ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಬೊಮ್ಮನ್ ಮತ್ತು ಬೆಳ್ಳಿಗೆ ಮರೆಯಲಾರದ ಉಡುಗೊರೆ – ಧೋನಿಯಿಂದ ಜೆರ್ಸಿ ಗಿಫ್ಟ್

ಬುಧವಾರ ತಡರಾತ್ರಿ ಕಾಂಗ್ರೆಸ್  ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದ್ದು, ಕಲ್ಲು ತೂರಾಟ ನಡೆದಿದೆ. ಮೂಡುಬಿದಿರೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಅವರ ಕಾರಿನ ಮೇಲೂ ಕಲ್ಲು ತೂರಾಟ ನಡೆದಿದೆ. ಈ ಹಿನ್ನೆಲೆ ಬಜ್ಪೆ, ಕಾವೂರು, ಮೂಡುಬಿದಿರೆ, ಸುರತ್ಕಲ್ ಮತ್ತು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ 14 ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ ಎಂದು ಡಿಸಿಪಿ ಅಂಶುಕುಮಾರ್ ತಿಳಿಸಿದ್ದಾರೆ.

ಬುಧವಾರ ತಡರಾತ್ರಿ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿದೆ. ಈ ಘಟನೆಯಲ್ಲಿ ಪೊಲೀಸರು ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ. ಇದೀಗ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್ ಜೈನ್ ತಿಳಿಸಿದ್ದಾರೆ.

suddiyaana