ಸಿದ್ದು, ಡಿಕೆಶಿ ಪ್ರಮಾಣ ವಚನಕ್ಕೆ ವರುಣ ಅಡ್ಡಿ ಸಾಧ್ಯತೆ – ಬೆಂಗಳೂರಲ್ಲಿ ಗುಡುಗು ಸಹಿತ ಮಳೆ ಆತಂಕ

ಸಿದ್ದು, ಡಿಕೆಶಿ ಪ್ರಮಾಣ ವಚನಕ್ಕೆ ವರುಣ ಅಡ್ಡಿ ಸಾಧ್ಯತೆ – ಬೆಂಗಳೂರಲ್ಲಿ ಗುಡುಗು ಸಹಿತ ಮಳೆ ಆತಂಕ

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಶನಿವಾರ ಮಧ್ಯಾಹ್ನ ಎರಡನೇ ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಉಪ ಮುಖ್ಯಮಂತ್ರಿಯಾಗಿ  ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಆದರೆ ಈ ಸಮಾರಂಭಕ್ಕೆ ವರುಣ ಅಡ್ಡಿಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: ಲೋಕಸಭಾ ಚುನಾವಣೆಯಲ್ಲಿ ಜೋಶಿಗೆ ಶೆಟ್ಟರ್ ಸವಾಲ್..? – ಏನಿದು ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್?

ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಸಿಎಂ ಮತ್ತು ಡಿಸಿಎಂ ಪ್ರಮಾಣ ವಚನಕ್ಕೆ ಭರದ ಸಿದ್ಧತೆ ನಡೆಯುತ್ತಿದೆ. ಆದರೆ, ಶನಿವಾರದ ಈ ಪ್ರಮಾಣ ವಚನ ಸಂಭ್ರಮಕ್ಕೆ ವರುಣ ತಣ್ಣೀರೆರಚುವ ಸಾಧ್ಯತೆ ಇದೆ. ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಮೇ 20 ರಿಂದ 5 ದಿನಗಳ ಕಾಲ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮೇ 20 ರಿಂದ ಮುಂದಿನ ಐದು ದಿನಗಳ ಕಾಲ ದಕ್ಷಿಣ ಕರ್ನಾಟಕದ ಕೆಲವು ಭಾಗಗಳಲ್ಲಿ ಮಿಂಚು ಮತ್ತು ವೇಗವಾದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಮೇ 21 ಮತ್ತು 22 ರಂದು ಬೆಂಗಳೂರಿನ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಮತ್ತು ಮೋಡ ಕವಿದಿರುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

suddiyaana