ರಾಹುಲ್‌ ಗಾಂಧಿ ಜೊತೆ ಸಿಎಂ, ಡಿಸಿಎಂ ಲಂಚ್‌ ಮೀಟಿಂಗ್‌! – ಸಂಪುಟ ಪುನರ್ ರಚನೆಗೆ ಸಿಗುತ್ತಾ ಗ್ರೀನ್ ಸಿಗ್ನಲ್?

ರಾಹುಲ್‌ ಗಾಂಧಿ ಜೊತೆ ಸಿಎಂ, ಡಿಸಿಎಂ ಲಂಚ್‌ ಮೀಟಿಂಗ್‌! – ಸಂಪುಟ ಪುನರ್ ರಚನೆಗೆ ಸಿಗುತ್ತಾ ಗ್ರೀನ್ ಸಿಗ್ನಲ್?

ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗುತ್ತಿದೆ. ನವೆಂಬರ್‌ನಿಂದಲೂ ಗದ್ದುಗೆ ಗುದ್ದಾಟ ನಡೆಯುತ್ತಿದೆ. ಇದೀಗ ರಾಹುಲ್‌ ಗಾಂಧಿ ಮೈಸೂರಿಗೆ ಆಗಮಿಸುತ್ತಿದ್ದು, ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಭೇಟಿ ಮಾಡುತ್ತಿದ್ದಾರೆ. ಇದು ಭಾರಿ ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ: ರಾತ್ರಿ ಲೇಟ್‌ ಆಗಿ ಊಟ ಮಾಡ್ತೀರಾ? – ಹೊಟ್ಟೆ ಮಾತ್ರವಲ್ಲ.. ಹೃದಯಕ್ಕೂ ಡೇಂಜರ್!‌  

ಕರ್ನಾಟಕದಲ್ಲಿ ಸಿಎಂ ಬದಲಾವಣೆ ಕೂಗು ಜೋರಾಗಿದೆ. ಒಂದ್ಕಡೆ ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ನಾಯಕರ ಮಾತೇ ನನಗೆ ಶಾಸನ ಎನ್ನುತ್ತಿದ್ದಾರೆ. ಮತ್ತೊಂದ್ಕಡೆ ಡಿಸಿಎಂ ಡಿಕೆ ಶಿವಕುಮಾರ್ ಕೊಟ್ಟ ಮಾತು ನೆನಪಿಸುತ್ತಿದ್ದಾರೆ. ಇಂದು ರಾಹುಲ್‌ ಗಾಂಧಿ  ಮೈಸೂರಿಗೆ ಬರಲಿದ್ದು, ಈ ವೇಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ರಾಹುಲ್ ಗಾಂಧಿಯನ್ನ ಭೇಟಿ ಮಾಡುತ್ತಿದ್ದಾರೆ.

ಲೋಕಸಭಾ ವಿಪಕ್ಷ ನಾಯಕ ಹಾಗೂ ಎಐಸಿಸಿ ವರಿಷ್ಠ ನಾಯಕ ರಾಹುಲ್ ಗಾಂಧಿ ಕೇರಳದ ವಯನಾಡಿಗೆ ತೆರಳಲಿದ್ದಾರೆ. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ, ವಿಶೇಷ ವಿಮಾನದ ಮೂಲಕ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ವಯನಾಡಿಗೆ ಪ್ರಯಾಣ ಬೆಳೆಸಲಿದ್ದಾರೆ.  ರಾಹುಲ್‌ ಗಾಂಧಿ ಮಧ್ಯಾಹ್ನ 2:20ಕ್ಕೆ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಕೂಡ ಮಧ್ಯಾಹ್ನ 1:30ಕ್ಕೆ ಮೈಸೂರಿಗೆ ಆಗಮಿಸಲಿದ್ದು, ವಯನಾಡಿಗೆ ರಾಹುಲ್ ಗಾಂಧಿ ತೆರಳುವ ಮುಂಚೆಯೇ, ಮೂವರು ನಾಯಕರು ಲಂಚ್ ಮೀಟಿಂಗ್ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಇದೀಗ ರಾಹುಲ್ ಜೊತೆಗಿನ ಸಿಎಂ, ಡಿಸಿಎಂ ಲಂಚ್ ಮೀಟಿಂಗ್ ಸಹಜವಾಗಿ ಕುತೂಹಲ ಕೆರಳಿಸಿದೆ.

Shwetha M