800 ಪಬ್ಲಿಕ್ ಸ್ಕೂಲ್.. ಕನ್ನಡ ಶಾಲೆ ಕಥೆಯೇನು? ಮಕ್ಕಳಿಗೆ Social Media ಬ್ಯಾನ್!
‘ಗ್ಯಾರಂಟಿ’ಗೆ ಮತ್ತೆ ‘ಶಕ್ತಿ’ ಕೊಟ್ಟ ಸಿದ್ದು

ಗ್ಯಾರಂಟಿ ಯೋಜನೆಗಳ ಹೊರೆ ನಡುವೆಯೇ ರಾಜ್ಯ ಸರ್ಕಾರ ಬಜೆಟ್ ಮಂಡನೆ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದಾಖಲೆಯ 17ನೇ ಬಜೆಟ್ ಇದು. 4.48 ಸಾವಿರ ಕೋಟಿ ರೂ ಗಾತ್ರದ ಬಜೆಟ್ ಇದಾಗಿದ್ದು, ಕಳೆದ ವರ್ಷಕ್ಕಿಂತ 40 ಸಾವಿರ ಕೋಟಿ ಬಜೆಟ್ ಗಾತ್ರ ಹೆಚ್ಚಿದೆ. ಹಾಗಿದ್ರೆ ಯಾವೆಲ್ಲಾಕ್ಷೇತ್ರಕ್ಕೆ ಏನೆಲ್ಲಾ ಸಿಕ್ಕಿದೆ ಅನ್ನೋದ್ದನ್ನ ನೋಡೋಣ.
ಉದ್ಯೋಗಿಗಳಿಗೆ ಬಂಪರ್, 56 ಸಾವಿರ ಉದ್ಯೋಗ ಭರ್ತಿ
ರಾಜ್ಯದಲ್ಲಿ ನಿರುದ್ಯೋಗಿಗಳಿಗೆ ಈ ಬಾರಿ ಬಜೆಟ್ನಲ್ಲಿ ಸಿಹಿ ಸುದ್ದಿ ಸಿಕ್ಕಿದೆ. 56 ಸಾವಿರ ಉದ್ಯೋಗ ಭರ್ತಿ ಮಾಡಲಾಗುತ್ತೆ ಎಂದು ಘೋಷಣೆ ಮಾಡಿದ್ದಾರೆ. ಇದು ಅದೆಷ್ಟೋ ನಿರುದ್ಯೋಗಿಗಳಿಗೆ ದೊಡ್ಡ ರಿಲೀಫ್ ಸಿಕ್ಕಿದೆ.
800 ಕರ್ನಾಟಕ ಪಬ್ಲಿಕ್ ಶಾಲೆ ಘೋಷಣೆ
ರಾಜ್ಯದ 2026-27ನೇ ಸಾಲಿನ ಬಜೆಟ್ನಲ್ಲಿ ಶಿಕ್ಷಣ ಇಲಾಖೆಗೂ ಹೆಚ್ಚಿನ ಆದ್ಯತೆ ನೀಡಲಾಗಿದೆ. ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿ ಒತ್ತು ನೀಡುವ ಉದ್ದೇಶದಿಂದ 800 ಕರ್ನಾಟಕ ಪಬ್ಲಿಕ್ ಶಾಲೆ ಘೋಷಣೆ ಮಾಡಲಾಗಿದೆ. ಇದು ಮಕ್ಕಳ ಉನ್ನತ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಲಾಗಿದೆ.
16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬ್ಯಾನ್
ಹದಿನಾರು ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ, ಹೆಚ್ಚುತ್ತಿರುವ ಮೊಬೈಲ್ ಬಳಕೆ ಮಕ್ಕಳ ಮೇಲೆ ಪರಿಣಾಮ ಬೀರುತ್ತಿರುವ ಹಿನ್ನಲೆಯಲ್ಲಿ ಹಾಗೂ ಅಡ್ಡಪರಿಣಾಮ ತಡೆಗಟ್ಟುವ ಹಿನ್ನೆಲೆಯಲ್ಲಿ 16 ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆಯನ್ನು ನಿಷೇಧ ಮಾಡಲಾಗಿದೆ. ವಿದ್ಯಾರ್ಥಿಗಳಲ್ಲಿ ಒತ್ತಡ ನಿವಾರಿಸಿ ಮಾನಸಿಕ ಆರೋಗ್ಯವನ್ನು ಸುಧಾರಿಸಲು 204 ಬಿ ಆರ್ ಸಿ ಕೇಂದ್ರಗಳಲ್ಲಿ ಓರ್ವ ಅರ್ಹ ಮಾನಸಿಕ ಆರೋಗ್ಯ ಸಲಹೆಗಾರ ನೇಮಕ ಮಾಡಲಾಗುವುದು ಎಂದು ಬಜೆಟ್ನಲ್ಲಿ ಸಿಎಂ ಘೋಷಿಸಿದ್ದಾರೆ.
ಬೆಂಗಳೂರಲ್ಲಿ ವೈಟ್ ಟಾಪಿಂಗ್ಗೆ 1700 ಕೋಟಿ
ಬೆಂಗಳೂರಲ್ಲಿ ವೈಟ್ ಟಾಪಿಂಗ್ಗೆ 1700 ಕೋಟಿ ಅನುದಾನ ನೀಡಲಾಗಿದೆ. 158 ಕಿ.ಮೀ ವೈಟ್ ಟಾಪಿಂಗ್ ಘೋಷಣೆ ಮಾಡಿದ್ದು, ವಾಹನ ಸವಾರರಿಗೆ ಅನುಕೂಲವಾಗಲಿದೆ. ಜೊತೆಗೆ ಗುಂಡಿ ರಸ್ತೆಗಳಿಗೆ ಮುಕ್ತಿ ಸಿಗಲಿದೆ.
ಗೃಹಲಕ್ಷ್ಮೀಯರಿಗೆ 28,608 ಕೋಟಿ ಘೋಷಣೆ
ರಾಜ್ಯದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಮತ್ತೊಂದು ಗುಡ್ ನ್ಯೂಸ್ ನೀಡಿದೆ. ಗೃಹಲಕ್ಷ್ಮೀಯರಿಗೆ 28,608 ಕೋಟಿ ಘೋಷಣೆ ಮಾಡಲಾಗಿದೆ. ಇದು ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಲಿದೆ.
ಶಕ್ತಿ ಯೋಜನೆಗೆ ಈ ವರ್ಷ 5300 ಕೋಟಿ ಮೀಸಲು!
ರಾಜ್ಯದ ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಗೆ ಈ ವರ್ಷ 5,300 ಕೋಟಿ ಮೀಸಲು ಮಾಡಲಾಗಿದೆ. ಈಗಾಗಲೇ ಶಕ್ತಿ ಯೋಜನೆ ಭಾರೀ ಯಶಸ್ವಿಯಾಗಿದೆ. ಸುಮಾರು 684 ಕೋಟಿ ಟ್ರಿಪ್ ಗಳಲ್ಲಿ ಮಹಿಳೆಯರು ಪ್ರಯಾಣದ ಸೌಲಭ್ಯ ಪಡೆದಿದ್ದಾರೆ.
ಯು.ಆರ್ ಅನಂತ ಮೂರ್ತಿ ಹೆಸರಿನಲ್ಲಿ ಅಧ್ಯಯನ ಪೀಠ
ಯು.ಆರ್ ಅನಂತ ಮೂರ್ತಿ ಹೆಸರಿನಲ್ಲಿ ಅಧ್ಯಯನ ಪೀಠ ತೆರೆಯಲಾಗುತ್ತದೆ, ಕುವೆಂಪು ವಿವಿಯಲ್ಲಿ ಅಧ್ಯಯನ ಪೀಠ ಸ್ಥಾಪನೆ ಮಾಡಲಾಗುವುದು ಎಂದು 2026-27ನೇ ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಿಸಿದ್ದಾರೆ.
ಕೋಟಿ ರೂ. ವೆಚ್ಚದಲ್ಲಿ ನೂತನ 10 GTTC ಕೇಂದ್ರಗಳ ಸ್ಥಾಪನೆ
60 ಕೋಟಿ ರೂ. ವೆಚ್ಚದಲ್ಲಿ ನೂತನ10 GTTC ಕೇಂದ್ರಗಳ ಸ್ಥಾಪನೆ ಮಾಡಲಾಗುತ್ತದೆ, ಕಾರ್ಮಿಕರ ಮಕ್ಕಳಿಗಾಗಿ ನೂತನ 62 ವಸತಿ ಶ್ರಮಿಕ ಶಾಲೆ ಆರಂಭಿಸಲಾಗುತ್ತದೆ. ಒಟ್ಟು 104 ಶಾಲೆಗಳ ಆರಂಭಕ್ಕೆ ಆದ್ಯತೆ ನೀಡಲಾಗುತ್ತದೆ. ಹುಬ್ಬಳ್ಳಿ-ಧಾರವಾಡ ನಗರದಲ್ಲಿ ಕೌಶಲ್ಯ ತರಬೇತಿ ಅಕಾಡೆಮಿ ತೆರೆಯಲಾಗುತ್ತದೆ. 200 ಕೋಟಿ ರೂಪಾಯಿ ವೆಚ್ಚದಲ್ಲಿ ಅಕಾಡೆಮಿ ಸ್ಥಾಪನೆ ಮಾಡಲಾಗುತ್ತದೆ. ಕಾರ್ಮಿಕರ ವಿಮಾ ಸೊಸೈಟಿಯಿಂದ ಹುಬ್ಬಳ್ಳಿ, ಇಂದಿರಾನಗರ , ಮೈಸೂರು, ದೊಡ್ಡ ಬಳ್ಳಾಪುರದಲ್ಲಿ ಪ್ಯಾರಾ ಮೆಡಿಕಲ್ ಕೋರ್ಸ್ ಆರಂಭಿಸಲಾಗುತ್ತದೆ ಎಂದು ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಿಸಿದ್ದಾರೆ.
ಬೆಂಗಳೂರಲ್ಲಿ ಸ್ತನ, ಗರ್ಭಕೋಶ ಕ್ಯಾನ್ಸರ್ ಲಸಿಕಾ ಕೇಂದ್ರ ಸ್ಥಾಪನೆ
ಬೆಂಗಳೂರಲ್ಲಿ ಸ್ತನ, ಗರ್ಭಕೋಶ ಕ್ಯಾನ್ಸರ್ ಲಸಿಕಾ ಕೇಂದ್ರ ಸ್ಥಾಪನೆ ಮಾಡುವುದಾಗಿ ರಾಯಚೂರು, ಬಾಗಲಕೋಟೆ, ವಿಜಯಪುರ, ಬೀದರ್, ಕೊಪ್ಪಳ ಚಿತ್ರದುರ್ಗ, ಮಂಡ್ಯ, ಭದ್ರಾವತಿ, ಕೆಜಿಎಫ್‌ನಲ್ಲಿ ESI ಆಸ್ಪತ್ರೆ ಉನ್ನತೀಕರಣಗೊಳಿಸುವುದಾಗಿ ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಿಸಿದ್ದಾರೆ.
ಬೀದಿ ನಾಯಿಗಳ ಸಮಸ್ಯೆಗೆ ಪರಿಹಾರ!
ರಾಜ್ಯದಲ್ಲಿ ಬೀದಿ ನಾಯಿಗಳ ಸಮಸ್ಯೆಗೆ ಪರಿಹಾರ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಬೆಂಗಳೂರು ಹಾಗೂ ಬೀದರ್ ನಲ್ಲಿ ಶ್ವಾನ ಸಂತಾನ ನಿಯಂತ್ರಣ ತರಬೇತಿ ಕೇಂದ್ರ ಸ್ಥಾಪನೆ ಮಾಡಲು ಸರ್ಕಾರ ಘೋಷಣೆ ಮಾಡಿದೆ.
ಮೈಸೂರನ್ನ ರಾಜ್ಯದ ಎರಡನೇ IT ಸಿಟಿಯಾಗಿ ನಿರ್ಮಾಣ!
ಮೈಸೂರನ್ನ ರಾಜ್ಯದ ಎರಡನೇ IT ಸಿಟಿಯಾಗಿ ನಿರ್ಮಾಣ ಮಾಡಲು ಈ ಬಾರಿ ಬಜೆಟ್ನಲ್ಲಿ ತೀರ್ಮಾನ ಮಾಡಲಾಗಿದೆ. ಬೆಂಗಳೂರಿನ ದಟ್ಟಣೆ ಕಡಿಮೆ ಮಾಡಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಬೆಂಗಳೂರಿಗೆ ಹಿಂದಿನ ಅನುದಾನವನ್ನೇ ಸರ್ಕಾರ ಮುಂದುವರೆಸಿದೆ. ಏಳು ಸಾವಿರ ಕೋಟಿ ಅನುದಾನವನ್ನೇ ಮುಂದುವರೆಸಿದ್ದಾರೆ. ಜಿಬಿಎ ಎಲೆಕ್ಷನ್ ನತ್ತ ಸರ್ಕಾರದ ಚಿತ್ತ ಎನ್ನಲಾಗಿತ್ತು, ಜೊತೆಗೆ ಎಂಟು ಸಾವಿರ ಕೋಟಿ ಕೊಡಿ ಎಂದು ಮನವಿ ಮಾಡಲಾಗಿತ್ತು. ಆದರೆ 7 ಸಾವಿರ ಕೋಟಿ ಅಷ್ಟೇ ಮೀಸಲಿಡಲಾಗಿದೆ.

ನೋಡಿರಿ

