ಲಾರಿ ಡಿಕ್ಕಿಯಾಗಿ ಒಂದೇ ಬೈಕ್‌ನಲ್ಲಿದ್ದ ನಾಲ್ವರ ಅಂತ್ಯ – 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಚಿಕ್ಕಬಳ್ಳಾಪುರದ ಅಜ್ಜವಾರ ಗೇಟ್ ಬಳಿ ಟಿಪ್ಪರ್ ಲಾರಿ ಡಿಕ್ಕಿಯಾಗಿ ಬೈಕ್ನಲ್ಲಿ ತೆರಳುತ್ತಿದ್ದ ನಾಲ್ವರು ಸಾವಿಗೀಡಾದ ಬಗ್ಗೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಅಲ್ಲದೆ, ಮೃತರ ಕುಟುಂಬದವರಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡಲು ತಕ್ಷಣವೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಶಾಸಕ ಪ್ರದೀಪ್ ಈಶ್ವರ್ ಅವರು ಘಟನೆ ಬಗ್ಗೆ ಸಿಎಂಗೆ ಮಾಹಿತಿ ನೀಡಿದ್ದರು.
ಟಿಪ್ಪರ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ದಾರುಣ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗೇಟ್ ಬಳಿ k ಗುರುವಾರ ನಡೆದಿದೆ. ಮೃತರ ಕುಟುಂಬದ ಸದಸ್ಯರಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಅಪಘಾತದಲ್ಲಿ ಅಜ್ಜವಾರ ಗ್ರಾಮದ ಅಣ್ಣ ತಮ್ಮಂದಿರಾದ ನರಸಿಂಹಮೂರ್ತಿ, ನಂದೀಶ್, ಅರುಣ್, ಮನೋಜ್ ಎಂಬವರು ಮೃತಪಟ್ಟಿದ್ದಾರೆ. ಕ್ರಿಸ್ಮಸ್ ಹಬ್ಬದ ಹಿನ್ನೆಲೆಯಲ್ಲಿ ಈ ನಾಲ್ವರು ಚಿಕ್ಕಬಳ್ಳಾಪುರ ನಗರದ ಚರ್ಚ್‌ಗಳಿಗೆ ಭೇಟಿ ನೀಡಿ ಮರಳಿ ಸ್ವಗ್ರಾಮದತ್ತ ಬರುತ್ತಿದ್ದಾಗ ದುರ್ಘಟನೆ ಸಂಭವಿಸಿದೆ.

ಇದನ್ನೂ ಓದಿ: ಚಿತ್ರದುರ್ಗ ಬಸ್ ದುರಂತ – ಗಂಭೀರವಾಗಿ ಗಾಯಗೊಂಡಿದ್ದ ಬಸ್ ಚಾಲಕ ರಫೀಕ್ ಸಾವು
ನರಸಿಂಹಮೂರ್ತಿಗೆ ಸೇರಿದ ಸಿಟಿ 100 ಬೈಕಿನಲ್ಲಿ ನಾಲ್ವರು ಹೊರಟಿದ್ದು, ಕೆಲ ನಿಮಿಷಗಳಲ್ಲಿ ಅಜ್ಜವಾರ ಗ್ರಾಮಕ್ಕೆ ಹೈವೇಯಿಂದ ಬಲ ತಿರುವು ಪಡೆದುಕೊಳ್ಳಬೇಕಿತ್ತು. ಅಷ್ಟರಲ್ಲೇ ಟಿಪ್ಪರ್ ಲಾರಿ ಅಡ್ಡ ಬಂದಿದ್ದು, ಮುಖಾಮುಖಿ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ನಾಲ್ವರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದು, ಬೈಕ್ ನಜ್ಜುಗುಜ್ಜಾಗಿದೆ. ಅಪಘಾತದ ವಿಚಾರ ತಿಳಿದ ಚಿಕ್ಕಬಳ್ಳಾಪುರ ಪೊಲೀಸರು ಸ್ಥಳ ಪರಿಶೀಲಿಸಿ, ಮೃತ ದೇಹಗಳನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಿದ್ದಾರೆ. ಘಟನೆ ಬಳಿಕ ಟಿಪ್ಪರ್ ಚಾಲಕ ಪರಾರಿಯಾಗಿದ್ದು, ಸದ್ಯ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಟಿಪ್ಪರ್ ವಶಕ್ಕೆ ಪಡೆದು, ಚಾಲಕನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ನೋಡಿರಿ

