ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ – ಗ್ರಾಮಪಂಚಾಯತ್ ಮಟ್ಟದಲ್ಲಿ ಉತ್ತಮ ಶಾಲೆಗಳ ಅಭಿವೃದ್ಧಿ

ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ – ಗ್ರಾಮಪಂಚಾಯತ್ ಮಟ್ಟದಲ್ಲಿ ಉತ್ತಮ ಶಾಲೆಗಳ ಅಭಿವೃದ್ಧಿ

ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ 15ನೇ ಬಾರಿಗೆ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ತಮ್ಮ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಗ್ಯಾರಂಟಿಗಳ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಗ್ಯಾರಂಟಿಗಳ ಮೂಲಕ ಕುಟುಂಬಗಳಿಗೆ ಲಾಭ, ಅಭಿವೃದ್ಧಿಯ ಫಲ ಜನರಿಗೆ ಹಿಂದಿರುಗಿಸುವುದೇ ಸಂತೋಷ ಎಂದು ಬಜೆಟ್ ಮಂಡನೆ ವೇಳೆ ಸಿಎಂ ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ:ಎಲ್ಲಾ ಸರ್ಕಾರಿ ವಸತಿ ಶಾಲೆ, ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆ ಮಾಡಬಾರದು – ರಾಜ್ಯ ಸರ್ಕಾರದಿಂದ ಸುತ್ತೂಲೆ

ಶರಣರ ದಾಸೋಹ ಚಿಂತನೆ ಪ್ರಸ್ತಾಪಿಸಿದ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ನಮ್ಮ ಗ್ಯಾರಂಟಿಗಳನ್ನು ಕದ್ದು ಅವರದೆಂದು ನಂಬಿಸುವ ಯತ್ನ ಆಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.  ವಿದ್ಯುತ್ ಉತ್ಪಾದನೆಯಾಗಲು ಮುಂಚೂಣಿಯಾಗಲು ಹೂಡಿಕೆ, ಮುಂದೆ ತ್ವರಿತ ಆರ್ಥಿಕ ಬೆಳವಣಿಗೆಗೆ ಒತ್ತು ನೀಡಲಾಗುವುದು ಎಂದು ಬಜೆಟ್ ಮಂಡನೆ ವೇಳೆ ಸಿಎಂ ಸಿದ್ದರಾಮಯ್ಯ ಹೇಳಿದರು. ಗ್ರಾಮಪಂಚಾಯತ್ ಮಟ್ಟದಲ್ಲಿ ಉತ್ತಮ ಶಾಲೆಗಳ ಅಭಿವೃದ್ಧಿ, ಹಾಗೂ ಮುಂದಿನ 5 ವರ್ಷಗಳಲ್ಲಿ ಉತ್ತಮ ಆರೋಗ್ಯ ಸೇವೆ ವಿಚಾರವನ್ನು ಬಜೆಟ್ ಮಂಡನೆ ವೇಳೆ ಸಿದ್ದರಾಮಯ್ಯ ಹೇಳಿದರು.

 

Sulekha