ಜ್ಯೋತಿ ಬೆಳಗುವ ವೇಳೆ ಸಿಎಂ ಬಟ್ಟೆಗೆ ತಾಕಿದ ಬೆಂಕಿ ಕಿಡಿ

ಜ್ಯೋತಿ ಬೆಳಗುವ ವೇಳೆ ಸಿಎಂ ಬಟ್ಟೆಗೆ ತಾಕಿದ ಬೆಂಕಿ ಕಿಡಿ

ಕಿತ್ತೂರು ಉತ್ಸವದ ಜ್ಯೋತಿ ಬೆಳಗುವ ವೇಳೆ ಸಿಎಂ ಸಿದ್ದರಾಮಯ್ಯ ಅವರ ಬಟ್ಟೆಗೆ ಬೆಂಕಿಯ ಕಿಡಿ ತಾಗಿದ ಘಟನೆ ನಡೆದಿದೆ. ಗನ್ ಮ್ಯಾನ್​ ಗಳ ಸಮಯಪ್ರಜ್ಞೆಯಿಂದ ಸ್ವಲ್ಪದರಲ್ಲೇ ಭಾರೀ ಅನಾಹುತ ತಪ್ಪಿದೆ.

ಇದನ್ನೂ ಓದಿ: ರಾಹುಲ್ ದ್ರಾವಿಡ್ ಪುತ್ರನಿಗೆ ಶಾಕ್ – ಆಸ್ಟ್ರೇಲಿಯಾ ಸರಣಿಯಿಂದಲೇ OUT  

ಬುಧವಾರ ವಿಧಾನಸೌಧದ ಗ್ರ‍್ಯಾಂಡ್ ಸ್ಟೆಪ್ ನಲ್ಲಿ 200ನೇ ಕಿತ್ತೂರು ವಿಜಯೋತ್ಸವ ಆಚರಣೆ ಕಾರ್ಯಕ್ರಮಕ್ಕೆ ಸಿಎಂ ಚಾಲನೆ ನೀಡಿದರು. ಕಿತ್ತೂರು ಉತ್ಸವ ಜ್ಯೋತಿಗೆ ಚಾಲನೆ ನೀಡಿದ ಬಳಿಕ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರಿಗೆ ಜಾಗ ಬಿಡಲು ಸಿಎಂ ಮುಂದಾದರು. ಈ ವೇಳೆ ಸಿಎಂ ದೀಪದ ಹತ್ತಿರ ಬಂದಾಗ ಎಡಕೈಗೆ ಬೆಂಕಿಯ ಕಿಡಿ ತಾಗಿದೆ. ಬಟ್ಟೆಗೆ ಆಕಸ್ಮಿಕವಾಗಿ ತಾಕಿದ ಕಿಡಿಯನ್ನು ಕೂಡಲೇ ಭದ್ರತಾ ಸಿಬ್ಬಂದಿ ಆರಿಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಕಿತ್ತೂರು ರಾಣಿ ಚೆನ್ನಮ್ಮ ಸ್ವಾಭಿಮಾನದ ಸಂಕೇತ. ಬ್ರಿಟಿಷರು ವಿಧಿಸಿದ ತೆರಿಗೆಯನ್ನ ವಿರೋಧಿಸಿದ್ದರು. ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬುದನ್ನು ವಿರೋಧಿಸಿದರು. ತೆರಿಗೆಯನ್ನ ಕೊಡಲ್ಲ ಅಂತ ನೇರವಾಗಿ ಬ್ರಿಟಿಷರಿಗೆ ಹೇಳಿದ ದಿಟ್ಟ ಮಹಿಳೆ ಈಕೆ. ಸಂಗೊಳ್ಳಿ ರಾಯಣ್ಣ ಕೂಡ ಇವರ ಸೈನ್ಯದಲ್ಲಿದ್ದವರು. ಮೊದಲನೇ ಯುದ್ದದಲ್ಲಿ ಇವರಿಗೆ ಬ್ರಿಟಿಷರ ವಿರುದ್ದ ಜಯ ಗಳಿಸಿದ್ದರು ಎಂದು ಹೇಳದ್ದಾರೆ.

ಈ ವೇಳೆ ಡಿಸಿಎಂ ಡಿಕೆಶಿವಕುಮಾರ್, ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್, ಎಚ್.ಕೆ. ಪಾಟೀಲ್, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ ಸೇರಿ ಹಲವರು ಉಪಸ್ಥಿತರಿದ್ದರು.

Shwetha M