ನನ್ನ ವಿರುದ್ಧ ದೊಡ್ಡ ಷಡ್ಯಂತ್ರ ನಡೆದಿದೆ – ರಾಜ್ಯಪಾಲರ ವಿರುದ್ಧ ಸಿಎಂ ಸಿದ್ಧರಾಮಯ್ಯ ಟೀಕೆ

ನನ್ನ ವಿರುದ್ಧ ದೊಡ್ಡ ಷಡ್ಯಂತ್ರ ನಡೆದಿದೆ – ರಾಜ್ಯಪಾಲರ ವಿರುದ್ಧ ಸಿಎಂ ಸಿದ್ಧರಾಮಯ್ಯ ಟೀಕೆ

ಮುಡಾ ಹಗರಣದ ಗಂಭೀರ ಆರೋಪ ಸಿದ್ದರಾಮಯ್ಯ ಅವರಿಗೆ ಸುತ್ತಿಕೊಂಡಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಿಎಂ ವಿರುದ್ಧ ತನಿಖೆಗೆ ಅನುಮತಿ ನೀಡಿದ್ದಾರೆ. ಮುಖ್ಯಮಂತ್ರಿ ವಿರುದ್ಧ ತನಿಖೆಗೆ ಗ್ರೀನ್‌ಸಿಗ್ನಲ್ ಸಿಕ್ಕ ಮೇಲೆ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗುತ್ತಿದೆ. ಇದೀಗ ಸಿಎಂ ಸಿದ್ದರಾಮಯ್ಯ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನಡೆಯನ್ನ ಟೀಕಿಸಿದ್ದಾರೆ.

ಇದನ್ನೂ ಓದಿ:  ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ – ದೆಹಲಿಯಿಂದ ಕರ್ನಾಟಕಕ್ಕೆ ಮಲ್ಲಿಕಾರ್ಜುನ ಖರ್ಗೆ ದಿಢೀರ್ ಭೇಟಿ

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಸಿಎಂ, ಇದನ್ನು ನಾವು ನಿರೀಕ್ಷೆ ಮಾಡಿದ್ದೆವು. ದೂರು ಕೊಟ್ಟ ದಿನವೇ ಶೋಕಾಸ್ ನೋಟಿಸ್ ನೀಡುತ್ತಾರೆ. ಯಾವಾಗ ರಾಜ್ಯಪಾಲರು 26 ರಂದು‌ ಶೋಕಾಸ್ ನೋಟಿಸ್ ಕೊಟ್ಟಿದ್ದರೋ ಆವಾಗಲೇ ನಿರೀಕ್ಷೆ ಇತ್ತು. ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಮೇಲೆ ನವೆಂಬರ್ ತಿಂಗಳಲ್ಲೇ ಪಿಟಿಷನ್ ಸಲ್ಲಿಕೆಯಾಗಿದೆ. ಶಿಶಿಕಲಾ ಜೊಲ್ಲೆ, ಜನಾರ್ದನ ರೆಡ್ಡಿ ಮೇಲೆಯೂ ಇದೆ. ನನಗೆ ಮಾತ್ರ ಶೋಕಾಸ್ ನೋಟಿಸ್ ‌ಕಳುಹಿಸಿದ್ದಾರೆ. ನನಗೆ ‌ಮಾತ್ರ ನೋಟಿಸ್ ಕೊಟ್ಟಿದ್ದಾರೆ. ನನ್ನ ವಿರುದ್ಧ ದೊಡ್ಡ ಷಡ್ಯಂತ್ರ ನಡೆದಿದೆ ಎಂದು ಸಿದ್ದರಾಮಯ್ಯ ಆರೋಪಿಸಿದರು.

ಅನೇಕ ರಾಜ್ಯಗಳಲ್ಲಿ ಇದೇ ತರಹ ಮಾಡಿದ್ದಾರೆ. ದೆಹಲಿ, ಜಾರ್ಖಾಂಡ್​​​ನಲ್ಲಿ ಕೂಡ ಇದೆ ರೀತಿ ಆಗಿದೆ. ಬಿಜೆಪಿ, ಜೆಡಿಎಸ್ ಎಲ್ಲ ಸೇರಿಕೊಂಡಿದ್ದಾರೆ. ರಾಜ್ಯಪಾಲರ ನಿರ್ಧಾರ ಸಂವಿಧಾನ ಬಾಹಿರ. ನಾನು ಕಾನೂನು ಹೋರಾಟ ಮಾಡುತ್ತೇವೆ. ಹೈಕಮಾಂಡ್, ಪಕ್ಷ, ಶಾಸಕರು ಎಲ್ಲರೂ ನನ್ನ ಜೊತೆ ಇದ್ದಾರೆ. ನಾನು ರಾಜೀನಾಮೆ ‌ಕೊಡುವ ತಪ್ಪು ಮಾಡಿಲ್ಲ. ಅವರು ಕಾನೂನುಬಾಹಿರ ಅಂದಿದ್ದಾರೆ. ರಾಜ್ಯಪಾಲರ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ರಾಜ್ಯಪಾಲರು ಬಿಜೆಪಿಯ ಕೈಗೊಂಬೆಯಾಗಿದ್ದಾರೆ. ಇದರ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ರಾಜ್ಯಪಾಲರ ನಡೆಗೆ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

Shwetha M

Leave a Reply

Your email address will not be published. Required fields are marked *