ಮುಡಾ ಕೇಸ್‌: ಸಿಎಂ ಸಿದ್ದರಾಮಯ್ಯಗೆ  ರಿಲೀಫ್ –‌ ಸೆ.9ಕ್ಕೆ ಮತ್ತೆ ವಿಚಾರಣೆ ಮುಂದೂಡಿಕೆ!

ಮುಡಾ ಕೇಸ್‌: ಸಿಎಂ ಸಿದ್ದರಾಮಯ್ಯಗೆ  ರಿಲೀಫ್ –‌ ಸೆ.9ಕ್ಕೆ ಮತ್ತೆ ವಿಚಾರಣೆ ಮುಂದೂಡಿಕೆ!

ರಾಜ್ಯದಾದ್ಯಂತ ಮುಡಾ ಮುಡಾ ನಿವೇಶನ ಹಂಚಿಕೆಯಲ್ಲಿನ ಅಕ್ರಮ ಪ್ರಕರಣ ಭಾರಿ ಸದ್ದು ಮಾಡುತ್ತಿದೆ. ಈ ಪ್ರಕರಣ ಈಗ ಸಿಎಂ ಸಿದ್ದರಾಮಯ್ಯ ಅವರನ್ನ ಬೆಂಬಿಡದೇ ಕಾಡುತ್ತಿದೆ. ಇದೀಗ ಈ ಕೇಸ್‌ ಸಂಬಂಧ ಕೊಂಚ ರಿಲೀಫ್‌ ಸಿಕ್ಕಿದೆ. ತಮ್ಮ ವಿರುದ್ಧ ರಾಜ್ಯಪಾಲರು ತನಿಖೆಗೆ ಒಪ್ಪಿಗೆ ಸೂಚಿಸಿ ಆದೇಶ ಹೊರಡಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್‌ನಲ್ಲಿ ಒಂದು ವಾರಗಳ ಬಳಿಕ ಮಧ್ಯಂತರ ರಿಲೀಫ್‌ ಸಿಕ್ಕಿದೆ.

ಇದನ್ನೂ ಓದಿ: RCB ಬಾಯ್.. 13 ಬಾಲ್​.. 44 ರನ್ – ಮೈಸೂರು ಹುಡುಗ್ರಿಗೆ ಮಹಾರಾಜ ಪಟ್ಟ

ಮುಡಾ ಹಗರಣ ಪ್ರಕಣಕ್ಕೆ ಸಂಬಂಧಿಸಿದಂತೆ  ಸಿಎಂ ಸಿದ್ದರಾಮಯ್ಯ  ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದರು. ಈ ಆದೇಶವನ್ನು ವಜಾಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಪ್ರಕರಣದ ವಿಚಾರಣೆ ಸೋಮವಾರ ನ್ಯಾಯಮೂರ್ತಿ ನಾಗಪ್ರಸನ್ನ ಏಕಸದಸ್ಯ ಪೀಠದಲ್ಲಿ ನಡೆದಿತ್ತು.

ದೂರುದಾರ ಸ್ನೇಹಮಯಿ ಕೃಷ್ಣ ಪರ ವಕೀಲರ ವಾದ ಆಲಿಸಿದ ನ್ಯಾಯಾದೀಶರು ವಿಚಾರಣೆಯನ್ನ ಮುಂದಿನ ಸೋಮವಾರ ಅಂದರೆ ಸೆಪ್ಟೆಂಬರ್​ 9ಕ್ಕೆ ಮುಂದೂಡಿ ಆದೇಶ ಹೊರಡಿಸಿದ್ದಾರೆ. ಅಂದು ಅಡ್ವೊಕೇಟ್ ಜನರಲ್ ಶಶಿ ಕಿರಣ್ ಶೆಟ್ಟಿ ವಾದ ಮಂಡಿಸಲಿದ್ದಾರೆ. ಸೆಪ್ಟೆಂಬರ್ 12ರಂದು ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಲಿದ್ದಾರೆ. ಜುಲೈ 12ರಂದು ವಾದವನ್ನು ಸಂಪೂರ್ಣವಾಗಿ ಮುಗಿಸಬೇಕು ಎಂದು ನ್ಯಾಯಮೂರ್ತಿಗಳು ಸೂಚನೆ ನೀಡಿದ್ದಾರೆ.

Shwetha M