ಬಜೆಟ್‌ನಲ್ಲಿ ಬೆಂಗಳೂರಿಗೆ ಬಂಪರ್‌ ಗಿಫ್ಟ್‌ – ಆರೋಗ್ಯ ವಲಯಕ್ಕೂ ಹೆಚ್ಚಿನ ಆದ್ಯತೆ

ಬಜೆಟ್‌ನಲ್ಲಿ ಬೆಂಗಳೂರಿಗೆ ಬಂಪರ್‌ ಗಿಫ್ಟ್‌ – ಆರೋಗ್ಯ ವಲಯಕ್ಕೂ ಹೆಚ್ಚಿನ ಆದ್ಯತೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 14ನೇ ದಾಖಲೆಯ ಬಜೆಟ್​ ಮಂಡನೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿಯೇ 7ನೇ ಬಾರಿ ಬಜೆಟ್ ಮಂಡಿಸುತ್ತಿದ್ದಾರೆ. ಈ ಬಾರಿ ಬಜೆಟ್ ಗಾತ್ರ 3,27,747 ಲಕ್ಷ ಕೋಟಿ ರೂ ಗಾತ್ರದ್ದಾಗಿದೆ. ಇದರಲ್ಲಿ 3.27 ಲಕ್ಷ ಕೋಟಿ ರೂ ಬಜೆಟ್​ನಲ್ಲಿ ಸಾಲ ಮರುಪಾವತಿಗೆ 22,441 ಕೋಟಿ ರೂ ವ್ಯಯವಾಗಲಿದೆ. ಇನ್ನು ಬಂಡವಾಳ ಹೂಡಿಕೆಗಳಿಗೆ 54,374 ಕೋಟಿ ರೂ ವೆಚ್ಚ ಮಾಡಲಾಗುತ್ತದೆ ಎಂದು ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಮೋದಿ ಉಪನಾಮ ವಿವಾದ – ರಾಹುಲ್ ಗಾಂಧಿಗೆ 2 ವರ್ಷ ಶಿಕ್ಷೆ ಖಾಯಂ

ಈ ಬಾರಿಯ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ಬಜೆಟ್‌ನಲ್ಲಿ ಬೆಂಗಳೂರಿಗೆ ಬರೊಬ್ಬರಿ 45 ಸಾವಿರ ಕೋಟಿ ರೂ. ಅನುದಾನ ನೀಡಿದ್ದು, ಬೆಂಗಳೂರು ವೈಟ್‌ ಟಾಪಿಂಗ್​, ರಸ್ತೆ ಅಭಿವೃದ್ಧಿ, ನಗರೋತ್ಥಾನ, ತಾಜ್ಯ ನಿರ್ವಹಣೆ, ರಾಜಕಾಲುವೆ ತೆರವು & ದುರಸ್ತಿಗೆ ಅನುದಾನ, ಮೆಟ್ರೋ, ಬೆಂಗಳೂರು ಉಪನಗರ ರೈಲ್ವೆ ಯೋಜನೆ, ಬ್ರ್ಯಾಂಡ್ ಬೆಂಗಳೂರಿಗೆ ಆಧ್ಯತೆ ನೀಡುವ ನಿಟ್ಟಿನಲ್ಲಿ 45 ಸಾವಿರ ಕೋಟಿ ರೂ. ಅನುದಾನ ನೀಡಲಾಗಿದೆ.

ಇನ್ನು ಆರೋಗ್ಯ ಕ್ಷೇತ್ರಕ್ಕೂ ಬಜೆಟ್​ನಲ್ಲಿ ಭರ್ಜರಿ ಕೊಡುಗೆ ನೀಡಲಾಗಿದೆ.  ಪುನೀತ್ ರಾಜಕುಮಾರ್ ಸ್ಮರಣಾರ್ಥ ಆರೋಗ್ಯ ವ್ಯವಸ್ಥೆ ಕಲ್ಪಿಸಲು ಸರ್ಕಾರ 6 ಕೋಟಿ ರೂಪಾಯಿ ಮೀಸಲಿಟ್ಟಿದೆ. ಹಠಾತ್‌ ಹೃದಯಾಘಾತ ತಪ್ಪಿಸಲು ಆಸ್ಪತ್ರೆಗಳಲ್ಲಿ ಎಇಡಿ ವ್ಯವಸ್ಥೆ ಮಾಡಲಾಗಿದೆ.

ಜಿಲ್ಲಾ, ತಾಲೂಕು ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ಸೆಂಟರ್ ತೆರೆಯಲು ಸರ್ಕಾರ ನಿರ್ಧರಿಸಿದೆ. ಬರೋಬ್ಬರಿ 92 ಕೋಟಿ ರೂಪಾಯಿ ವೆಚ್ಚದಲ್ಲಿ 219 ಡಯಾಲಿಸಿಸ್ ಸೆಂಟರ್ ನಿರ್ಮಾಣಕ್ಕೆ ನಿರ್ಧಾರ ಮಾಡಲಾಗಿದೆ. ಅಷ್ಟೇ ಅಲ್ಲದೇ ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯ ವ್ಯವಸ್ಥೆಗೆ 70 ಕೋಟಿ ರೂಪಾಯಿ ಅನುದಾನ ಮೀಸಲಿಟ್ಟಿದೆ.

ಕೊಪ್ಪಳ, ಕಾರವಾರ ಕೊಡುಗು ಜಿಲ್ಲಾಸ್ಪತ್ರೆಯ ಉನ್ನತಿಕರಣಕ್ಕೆ ನಿರ್ಧಾರ ಮಾಡಲಾಗಿದೆ. ಕನಕಪುರ ತಾಲೂಕಿನಲ್ಲಿ ಹೊಸ ವೈದ್ಯಕೀಯ ಕಾಲೇಜು ಸ್ಥಾಪನೆ, ಮೈಸೂರು, ಕಲಬುರಗಿ, ಬೆಳಗಾವಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಸೇರಿದಂತೆ ದೇಶದಲ್ಲೇ ಮೊದಲ ಅಂಗಾಗ ಜೋಡಣೆ ಆಸ್ಪತ್ರೆ ಸ್ಥಾಪನೆಗೆ ನಿರ್ಧಾರ ಮಾಡಲಾಗಿದೆ. ಮೈಸೂರು ಮತ್ತು ಕಲಬುರ್ಗಿಯಲ್ಲಿ 30 ಕೋಟಿ ವೆಚ್ಚದಲ್ಲಿ ಟ್ರಾಮಾ ಕೇರ್ಸ ಸೆಂಟರ್ ತೆರೆಯಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ಬಜೆಟ್‌ ಮಂಡನೆಯಲ್ಲಿ ತಿಳಿಸಿದ್ದಾರೆ.

suddiyaana