ಸಂಪುಟ ಪುನಾರಚನೆಗಾಗಿ ನ.15ಕ್ಕೆ ಸಿಎಂ ದೆಹಲಿಗೆ! – ರಾಹುಲ್, ಖರ್ಗೆ ಜೊತೆ ಮಾತ್ನಾಡ್ತಿನಿ ಅಂದಿದ್ಯಾಕೆ ಸಿದ್ದರಾಮಯ್ಯ?

ರಾಜ್ಯ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಆಗುತ್ತಾ? ಇಲ್ವಾ? ಎಂಬ ಚರ್ಚೆಗೆ ಹೊಸ ಆಯಾಮ ಸಿಕ್ಕಿದೆ. ನವೆಂಬರ್ ತಿಂಗಳಲ್ಲಿ ಸರ್ಕಾರಕ್ಕೆ ಎರಡುವರೆ ವರ್ಷ ತುಂಬಲಿದೆ. ಇಂತಹ ಸಂದರ್ಭದಲ್ಲಿ ನಾಯಕತ್ವ ಬದಲಾವಣೆ ನಡೆಯಲಿದೆ ಎಂಬ ಚರ್ಚೆ ಮುನ್ನಲೆಗೆ ಬಂದಿದೆ. ಇದೀಗ ಸಿಎಂ ಸಿದ್ಧರಾಮಯ್ಯ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಸಂಪುಟ ಪುನಾರಚನೆಗಾಗಿ ನವೆಂಬರ್ 15ಕ್ಕೆ ದೆಹಲಿಗೆ ಹೋಗುತ್ತಿದ್ದೇನೆ ಎಂದಿದ್ದಾರೆ.
ಇದನ್ನೂ ಓದಿ: ಗೌತಮ್ ಭೂಮಿ ಒಂದಾಗೋ ಹೊತ್ತಲ್ಲೇ ಶಾಕ್! – ಕೇಡಿ ಜೈದೇವ್ ಜೊತೆ ಕೈ ಜೋಡಿಸಿದ ಎಂಎಲ್ಎ
ಸಂಪುಟ ಪುನಾರಚನೆ ಬಗ್ಗೆ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿ ಎಂಬ ಬಿಹಾರ ಮುಖಂಡರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಯಾರು ಏನೇ ಹೇಳಿದ್ರೂ ಅದು ಮುಖ್ಯವಲ್ಲ. ಕಾಂಗ್ರೆಸ್ ಹೈಕಮಾಂಡ್ ಹೇಳುವುದಷ್ಟೇ ಮುಖ್ಯ. ಕಾಂಗ್ರೆಸ್ ಹೈಕಮಾಂಡ್ ಏನಾದ್ರೂ ಹೇಳಿದ್ಯಾ ಈ ಬಗ್ಗೆ? ಯಾಕೆ ಪದೆ ಪದೆ ಅದನ್ನೇ ಮಾತನಾಡ್ತೀರಾ. ಜನ ಮಾತನಾಡುತ್ತಿಲ್ಲ, ಮಾಧ್ಯಮದವರೇ ಪದೇ ಪದೇ ಮಾತನಾಡುತ್ತಿದ್ದಾರೆ ಅಂತ ಗರಂ ಆದರು.
ಕಾಂಗ್ರೆಸ್ಗೆ ಹೈಕಮಾಂಡ್ ಇದೆ. ಹೈಕಮಾಂಡ್ ಹೇಳುವುದು ಮಾತ್ರವೇ ಮುಖ್ಯ, ಅದೇ ಅಂತಿಮ. ನಾನು ಬಿಹಾರ ಚುನಾವಣೆ ಬಳಿಕ ರಾಹುಲ್ ಗಾಂಧಿ ಅವರನ್ನ ಭೇಟಿ ಮಾಡುತ್ತೇನೆ. ಸಂಪುಟ ಪುನಾರಚನೆ ಬಗ್ಗೆ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರೊಟ್ಟಿಗೆ ಚರ್ಚೆ ಮಾಡುತ್ತೇನೆ. ಇದಕ್ಕಾಗಿಯೇ ನವೆಂಬರ್ 15ಕ್ಕೆ ದೆಹಲಿಗೆ ಹೋಗುತ್ತಿದ್ದೇನೆ. ಪುನಾರಚನೆ ಬಗ್ಗೆ ಹೈಕಮಾಂಡ್ ಏನು ಹೇಳುತ್ತೋ ಆ ರೀತಿ ನಡೆದುಕೊಳ್ಳುತ್ತೇನೆ ಎಂದು ಹೇಳಿದ್ದಾರೆ ಸಿಎಂ.

ನೋಡಿರಿ

