ಕುರ್ಚಿ ಫೈಟ್ ನಡುವೆ ದೆಹಲಿಗೆ ಹೊರಟ ಸಿಎಂ ಸಿದ್ಧರಾಮಯ್ಯ! – ಕಾಂಗ್ರೆಸ್ ಹೈಕಮಾಂಡ್ ಕರೆದಿದ್ಯಾಕೆ?

ರಾಜ್ಯದಲ್ಲಿ ಸಿಎಂ ಕುರ್ಚಿ ಫೈಟ್ ಇನ್ನು ಮುಂದುವರಿದಿದೆ. ಸಿಎಂ ಬದಲಾವಣೆ ಬಗ್ಗೆ ಕುರಿತು ಸ್ಪಷ್ಟತೆ ಇನ್ನು ಸಿಕ್ಕಿಲ್ಲ. ಇವೆಲ್ಲದ್ರ ಮಧ್ಯೆ ನಾಳೆ ಸಿಎಂ ಸಿದ್ಧರಾಮಯ್ಯ ದೆಹಲಿಗೆ ಹೋಗಲಿದ್ದಾರೆ. ದೆಹಲಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಇದನ್ನೂ ಓದಿ: ಮದುವೆಯಾದ 27 ದಿನದಲ್ಲೇ ಮಸಣ ಸೇರಿದ ನವವಧು! – ಗಂಡನೇ ಹೆಂಡ್ತಿ ಜೀವ ತೆಗೆದ್ನಾ?
ಡಿ.27 ರಂದು ದೆಹಲಿಯಯ ಇಂದಿರಾ ಭವನದಲ್ಲಿ ಸಿಡಬ್ಲ್ಯೂಸಿ ಸಭೆ ಅಯೋಜನೆಗೊಂಡಿದೆ. ಈ ಸಭೆಯಲ್ಲಿ ಭಾಗಿಯಾಗುವಂತೆ ಕಾಂಗ್ರೆಸ್ (CWC) ಅಧಿಕಾರದಲ್ಲಿರುವ ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಲಾಗಿದೆ. ಆದ್ರೆ ಸಿಎಂ ಸಿದ್ದರಾಮಯ್ಯ ಅವರು ಇಷ್ಟು ದಿನ ಸಿಡಬ್ಲ್ಯೂಸಿ ಸಭೆಗೆ ನನಗೆ ಆಹ್ವಾನವಿಲ್ಲ. ನಾನು ಈ ಸಭೆಗೆ ಹೋಗುತ್ತಿಲ್ಲ ಎಂದು ಹೇಳುತ್ತಾ ಬಂದಿದ್ದರು. ಇದೀಗ ಸಿದ್ದರಾಮಯ್ಯಗೆ ದೆಹಲಿಯಿಂದ ಬುಲಾವ್ ಬಂದಿದೆ. ಈ ಹಿನ್ನೆಲೆಯಲ್ಲಿ ನಾಳೆ ಸಿಎಂ ದೆಹಲಿಗೆ ಹೋಗುವುದು ಅಧಿಕೃತವಾಗಿದೆ.
ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ತೆಲಂಗಾಣದ ರೇವಂತ್ ರೆಡ್ಡಿ, ಹಿಮಾಚಲ ಪ್ರದೇಶದ ಸುಖ್ವಿಂದರ್ ಸಿಂಗ್ ಸುಖು ಭಾಗಿಯಾಗಲಿದ್ದಾರೆ. ಕರ್ನಾಟಕದ CWC ಸದಸ್ಯರಾದ ಬಿ.ಕೆ ಹರಿಪ್ರಸಾದ್, ನಾಸೀರ್ ಹುಸೇನ್ ಹಾಗೂ ವೀರಪ್ಪ ಮೊಯ್ಲಿ ಪಾಲ್ಗೊಳ್ಳಲಿದ್ದಾರೆ. ಇದೇ ವೇಳೆ ಐದು ರಾಜ್ಯಗಳ ಚುನಾವಣೆ, ಓಟ್ ಚೋರಿ, ನ್ಯಾಷನಲ್ ಹೆರಾಲ್ಡ್ ಮತ್ತು ಮನರೇಗಾ ಕಾಯ್ದೆ ತಿದ್ದುಪಡಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ರೂಪಿಸುವ ಬಗ್ಗೆ ಚರ್ಚೆ ನಡೆಯಲಿದೆ.

ನೋಡಿರಿ

