ಸಿದ್ದರಾಮಯ್ಯ ಅಧಿಕಾರ ಬಿಟ್ಟು ಕೊಡ್ತಿಲ್ಲ.. ಡಿಕೆಶಿ ಹಠ ಬಿಡ್ತಿಲ್ಲ! – ಸರ್ಕಾರ ಪತನ ನಿಶ್ಚಿತ ಎಂದ ಆರ್‌.ಅಶೋಕ್!

ಸಿದ್ದರಾಮಯ್ಯ ಅಧಿಕಾರ ಬಿಟ್ಟು ಕೊಡ್ತಿಲ್ಲ.. ಡಿಕೆಶಿ ಹಠ ಬಿಡ್ತಿಲ್ಲ! – ಸರ್ಕಾರ ಪತನ ನಿಶ್ಚಿತ ಎಂದ ಆರ್‌.ಅಶೋಕ್!

ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ಚರ್ಚೆ ಜೋರಾಗಿದೆ. ಕಾಂಗ್ರೆಸ್‌ ನಾಯಕರೇ ಸಿಎಂ ಬದಲಾವಣೆ ಬಗ್ಗೆ ಹೇಳಿಕೆ ನೀಡುತ್ತಿದ್ದಾರೆ. ನಿನ್ನೆಯಷ್ಟೇ ಸಿಎಂ ಸಿದ್ಧರಾಮಯ್ಯ ಐದು ವರ್ಷವೂ ನಾನೇ ಸಿಎಂ ಎಂದು ಹೇಳಿದ್ರು. ಇದೀಗ ಸಿದ್ದರಾಮಯ್ಯ ಮುಖ್ಯಮಂತ್ರಿ ಹುದ್ದೆ ಕಳೆದುಕೊಳ್ಳುವುದು ನಿಶ್ಚಿತ ಎಂದು ವಿಪಕ್ಷ ನಾಯಕ ಆರ್‌.ಅಶೋಕ್ ಭವಿಷ್ಯ ನುಡಿದಿದ್ದಾರೆ.

ಇದನ್ನೂ ಓದಿ:‌ ಅ. 9 ರಿಂದ 16 ರವರೆಗೆ ತಾಲಿಬಾನ್ ವಿದೇಶಾಂಗ ಸಚಿವ ಅಮೀರ್ ಖಾನ್ ಭಾರತಕ್ಕೆ ಭೇಟಿ

ಬೆಳಗಾವಿಯಲ್ಲಿ ಮಳೆ ಹಾನಿ ಮತ್ತು ಬೆಳೆ ಹಾನಿ ವೀಕ್ಷಣೆಗೆ ಆರ್‌ ಅಶೋಕ್ ಆಗಮಿಸಿದ್ರು. ಈ ವೇಳೆ ರಾಜ್ಯದ ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ್ದಾರೆ.  ನವೆಂಬರ್-ಡಿಸೆಂಬರ್ ಒಳಗೆ ಸಿದ್ದರಾಮಯ್ಯ ಮುಖ್ಯಮಂತ್ರಿ ಹುದ್ದೆ ಕಳೆದುಕೊಳ್ಳುವುದು ನೂರಕ್ಕೆ ನೂರರಷ್ಟು ನಿಜ ಎಂದು ಹೇಳಿದ್ದಾರೆ.

ಅಧಿಕಾರ ಹಂಚಿಕೆ ಸಂಬಂಧ ಒಪ್ಪಂದ ಆಗಿರುವುದು ನಿಜ. ನವೆಬರ್, ಡಿಸೆಂಬರ್ ತಿಂಗಳಲ್ಲಿ ಕಾಂತ್ರಿ ಅಂತ ಹೇಳಿ ಒಬ್ಬರು ಸಚಿವರು ಈಗ ಮನೆಗೆ ಹೋಗಿದ್ದಾರೆ‌. ಒಪ್ಪಂದ ಆಗಿರೋದು ನಿಜ. ಈಗ ಜಗಳ ಆರಂಭವಾಗಿದೆ‌. ಸಿದ್ದರಾಮಯ್ಯ ಅಧಿಕಾರ ಬಿಟ್ಟುಕೊಡಲ್ಲ, ಡಿಕೆಶಿ ಹಠ ಬಿಡ್ತಿಲ್ಲ. ಕಾಂಗ್ರೆಸ್ ಜಗಳದಲ್ಲಿ ಸರ್ಕಾರ ಪತನವಾದ್ರೆ ನಾವೇನೂ ಸರ್ಕಾರ ಮಾಡಲ್ಲ. ನಾವು ಚುನಾವಣೆಗೆ ಹೋಗಲು ಸಿದ್ಧರಿದ್ದೇವೆ‌ ಎಂದು ತಿಳಿಸಿದ್ದಾರೆ.

ಇನ್ನು ಕಾಂಗ್ರೆಸ್ ಶಾಸಕರೇ ಅನುದಾನ ಬಂದಿಲ್ಲ ಎಂದು ಹೇಳುತ್ತಿದ್ದಾರೆ. ಬೆಂಗಳೂರಿನಲ್ಲಿ ಹಳ್ಳ ಇಲ್ಲದೇ ರಸ್ತೆ ತೋರಿಸಿದ್ರೆ ಬಹುಮಾನ ಕೊಡಬಹುದು ಎಂದು ಸಿದ್ದರಾಮಯ್ಯ ಸರ್ಕಾರದ ವಿದುದ್ಧ ವ್ಯಂಗ್ಯವಾಡಿದ್ದಾರೆ.

Shwetha M