ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಆರೋಗ್ಯದಲ್ಲಿ ಏರುಪೇರು – ICU ನಲ್ಲಿ ಚಿಕಿತ್ಸೆ!

ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಆರೋಗ್ಯದಲ್ಲಿ ಏರುಪೇರು – ICU ನಲ್ಲಿ ಚಿಕಿತ್ಸೆ!

ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಶ್ವಾಸಕೋಶದ ಸಮಸ್ಯೆಯಿಂದಾಗಿ ಬೆಂಗಳೂರಿನ ಶೇಷಾದ್ರಿಪುರಂ‌‌ನ ಅಪೋಲೊ ಆಸ್ಪತ್ರೆಗೆ ಪಾರ್ವತಿ ಅವರನ್ನು ದಾಖಲಿಸಲಾಗಿದೆ.

ಪಾರ್ವತಿ ಅವರಿಗೆ ತಜ್ಞ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ. ಡಾ. ಬಿಸಿ ಶ್ರೀನಿವಾಸ್ ನೇತೃತ್ವದ ವೈದ್ಯರ ತಂಡ ಐಸಿಯುನಲ್ಲಿ ಪಾರ್ವತಿಗೆ ಚಿಕಿತ್ಸೆ ನೀಡುತ್ತಿದ್ದು ನಾಳೆಯವರೆಗೂ ನಿಗವಹಿಸಲು ಸೂಚಿಸಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ನವದೆಹಲಿಯಲ್ಲಿರುವ ಸಿದ್ದರಾಮಯ್ಯ ವೈದ್ಯರಿಗೆ ಕರೆ ಮಾಡಿ ಪತ್ನಿ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಆಸ್ಪತ್ರೆಯ ಡಾ ಬಿಸಿ ಶ್ರೀನಿವಾಸ್ ನೇತೃತ್ವದ ವೈದ್ಯರ ತಂಡ ಚಿಕಿತ್ಸೆ ಆರಂಭಿಸಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡುತ್ತಿದೆ. ಆಸ್ಪತ್ರೆಯಲ್ಲಿ ಸಿಎಂ ಪುತ್ರ ಯತೀಂದ್ರ ಇದ್ದಾರೆ.

ಇದನ್ನೂ ಓದಿ: ಮೋದಿ ತವರಲ್ಲಿ ಕಾಂಗ್ರೆಸ್ ಕಹಳೆ – ನ.21 ರಿಂದ ಗುಜರಾತ್‌ನಲ್ಲಿ ಜನ್ ಅಕ್ರೋಶ್ ಯಾತ್ರೆ

ಪ್ರಧಾನಿ ಮೋದಿ ಭೇಟಿ ಹಾಗೂ ಹೈಕಮಾಂಡ್‌ ಜತೆ ಚರ್ಚೆ ಹಿನ್ನೆಲೆ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಿದ್ದರು. ಸಭೆ ಮುಕ್ತಾಯವಾದ ಬೆನ್ನಲ್ಲೆ ಪತ್ನಿ ಅನಾರೋಗ್ಯ ವಿಚಾರ ತಿಳಿದಿದೆ. ಬೆಂಗಳೂರಿಗೆ ಆಗಮಿಸಿದ ಕೂಡಲೇ ನೇರವಾಗಿ ಆಸ್ಪತ್ರೆಗೆ ತೆರಳಿ ಪತ್ನಿ ಆರೋಗ್ಯ ವಿಚಾರಿಸಲು ಮುಂದಾಗಿದ್ದಾರೆ.

Kishor KV