ಸಿಎಂ ಸಿದ್ದರಾಮಯ್ಯಗೆ ಮುಡಾ ಕೇಸ್‌ ಸಂಕಷ್ಟ! – 23 ದಿನಗಳಲ್ಲಿ ಎರಡನೇ ಬಾರಿಗೆ ನಾಡದೇವತೆ ದರ್ಶನ ಪಡೆದ ಸಿಎಂ

ಸಿಎಂ ಸಿದ್ದರಾಮಯ್ಯಗೆ ಮುಡಾ ಕೇಸ್‌ ಸಂಕಷ್ಟ! – 23 ದಿನಗಳಲ್ಲಿ ಎರಡನೇ ಬಾರಿಗೆ ನಾಡದೇವತೆ ದರ್ಶನ ಪಡೆದ ಸಿಎಂ

ಸಿಎಂ ಸಿದ್ದರಾಮಯ್ಯಗೆ ಮುಡಾ ಹಗರಣ ಕೇಸ್‌ ಸಂಕಷ್ಟವಾಗಿ ಪರಿಣಮಿಸಿದೆ. ಕಾನೂನು ಹೋರಾಟ ನಡೆಸುತ್ತಿದ್ದಾರೆ. ಇದೀಗ ಸಿದ್ದರಾಮಯ್ಯ ನಾಡದೇವತೆ ಚಾಮುಂಡೇಶ್ವರಿಯ ಮೊರೆ ಹೋಗಿದ್ದಾರೆ.  ಚಾಮುಂಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: ತಂದೆಯಿಲ್ಲ, ಅಪಘಾತದಲ್ಲಿ ಕಾಲು ಹೋಯಿತು – ಭಾರತಕ್ಕೆ ಚಿನ್ನ ತಂದವನ ಯಶೋಗಾಥೆ

ಸಿಎಂ ಸಿದ್ದರಾಮಯ್ಯ ಚಾಮುಂಡಿ ಬೆಟ್ಟಕ್ಕೆ ಮಂಗಳವಾರ ಭೇಟಿ ನೀಡಿದ್ದಾರೆ. ಚಾಮುಂಡಿ ಬೆಟ್ಟಕ್ಕೆ ಸಿಎಂ ಬರುತ್ತಿದ್ದಂತೆ ದೇವಸ್ಥಾನ ಆಡಳಿತ ಮಂಡಳಿ, ಮಂಗಳವಾದ್ಯಗಳ ಮೂಲಕ ಸ್ವಾಗತ ಕೋರಿತು. ಬಳಿಕ ಸಿಎಂ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದರು. 23 ದಿನಗಳಲ್ಲಿ ಎರಡನೇ ಬಾರಿಗೆ ಚಾಮುಂಡಿ ದರ್ಶನ ಮಾಡಿದರು. ಈಡುಗಾಯಿ ಒಡೆದು ನಾಡದೇವಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ತಂದೆ ಜೊತೆ ಆಗಮಿಸಿದ್ದ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ, ಚಾಮುಂಡೇಶ್ವರಿಗೆ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಸಿಎಂಗೆ ಸಚಿವರಾದ ಹೆಚ್.ಸಿ.ಮಹದೇವಪ್ಪ, ವೆಂಕಟೇಶ್ ಸಾಥ್ ನೀಡಿದರು.

ಸಿದ್ದರಾಮಯ್ಯ ಹೆಸರಿನಲ್ಲಿ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಲಾಯಿತು. ಪೂಜೆ ಬಳಿಕ ಸಿದ್ದರಾಮಯ್ಯಗೆ ಮಂಗಳಾರತಿ ಕೊಡಲಾಯಿತು. ಸಿದ್ದರಾಮಯ್ಯ ಹಣೆಗೆ ಅರ್ಚಕರು ಕುಂಕುಮ ಇಟ್ಟರು. ಬಳಿಕ ಚಾಮುಂಡೇಶ್ವರಿ ಪಾದುಕೆಗೆ ಸಿಎಂ ನಮಸ್ಕರಿಸಿ ಭಕ್ತಿಯಿಂದ ಪ್ರಾರ್ಥಿಸಿದರು. ನಂತರ ಗಣಪತಿ, ಆಂಜನೇಯ ಸೇರಿದಂತೆ ಇತರ ದೇವರಲ್ಲೂ ಪ್ರಾರ್ಥನೆ ಮಾಡಿದರು. ಬಳಿಕ ದೇವಿಗೆ ಈಡುಗಾಯಿ ಹೊಡೆದ ಸಿದ್ದರಾಮಯ್ಯ.

ಚಾಮುಂಡಿಬೆಟ್ಟಕ್ಕೆ ಸಿಎಂ ಭೇಟಿ ಹಿನ್ನೆಲೆ ಬೆಟ್ಟದಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿತ್ತು. ದೇವಾಲಯ ಮುಂಭಾಗ ಯಾರೂ ಓಡಾಡದಂತೆ ಬ್ಯಾರಿಕೇಡ್ ಅಳವಡಿಸಲಾಗಿತ್ತು. ಭದ್ರತೆಗೆಗಾಗಿ ಬೆಟ್ಟದಲ್ಲಿ ಸಾಕಷ್ಟು ಪೊಲೀಸರ ನಿಯೋಜನೆ ಮಾಡಲಾಗಿತ್ತು.

Shwetha M

Leave a Reply

Your email address will not be published. Required fields are marked *