ಟಿಕೆಟ್ ಘೋಷಣೆ ಬೆನ್ನಲ್ಲೇ ಟೆಂಪಲ್ ರನ್ – ಧರ್ಮಸ್ಥಳದಲ್ಲಿ ಸಿಎಂ ವಿಶೇಷ ಪೂಜೆ

ಟಿಕೆಟ್ ಘೋಷಣೆ ಬೆನ್ನಲ್ಲೇ ಟೆಂಪಲ್ ರನ್ – ಧರ್ಮಸ್ಥಳದಲ್ಲಿ ಸಿಎಂ ವಿಶೇಷ ಪೂಜೆ

ವಿಧಾನಸಭೆ ಚುನಾವಣೆಗೆ ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಟೆಂಪಲ್ ರನ್ ನಲ್ಲಿ ಬ್ಯುಸಿಯಾಗಿದ್ದಾರೆ. ದಕ್ಷಿಣ ಕನ್ನಡದ ವಿವಿಧ ದೇವಾಲಯಗಳಿಗೆ ಭೇಟಿ ನೀಡಿದ್ದಾರೆ. ಬುಧವಾರ ಧರ್ಮಸ್ಥಳಕ್ಕೆ ಆಗಮಿಸಿದ ಸಿಎಂ, ಮಂಜುನಾಥನ ದರ್ಶನ ಮಾಡಿದರು.

ಇದನ್ನೂ ಓದಿ: ಬಿಜೆಪಿ ಟಿಕೆಟ್ ಕೈ ತಪ್ಪಿದ ಸಿಟ್ಟು- ಆರ್.ಶಂಕರ್, ಗೂಳಿಹಟ್ಟಿ ಮುಂದಿನ ನಡೆ ಏನು?

ಹೆಲಿಕಾಪ್ಟರ್‌ನಲ್ಲಿ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಹರ್ಷೇಂದ್ರ ಕುಮಾರ್ ಬರಮಾಡಿಕೊಂಡರು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸಿಎಂಗೆ ಜೊತೆಯಾಗಿದ್ದಾರೆ. ಧರ್ಮಸ್ಥಳಕ್ಕೆ ಬಂದು ಮಂಜುನಾಥನ ದರ್ಶನ ಪಡೆದರು. ದೇವಾಲಯದಲ್ಲಿ ವಿಶೇಷ ಪೂಜೆ‌ ಸಲ್ಲಿಸಿದ ಬಳಿಕ ಕುಕ್ಕೆ‌ ಸುಬ್ರಹ್ಮಣ್ಯಕ್ಕೆ ಸಿಎಂ ತೆರಳಿದ್ದಾರೆ. ರಾತ್ರಿ ಮಂಗಳೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಗುರುವಾರ ಮುಂಜಾನೆ‌ ಕೊಲ್ಲೂರಿಗೂ ತೆರಳಲಿರುವ ಅವರು ನಂತರ ಕಟೀಲು ದೇಗುಲ ಮತ್ತು ಉಳ್ಳಾಲದ ಪುರಾಣ ಪ್ರಸಿದ್ದ ಸೋಮನಾಥ ದೇಗುಲಕ್ಕೆ ತೆರಳಿ ದರ್ಶನ ಪಡೆಯಲಿದ್ದಾರೆ.

suddiyaana