ಕೋಚ್ ಗಂಭೀರ್‌ಗೆ ಬೌಲರ್ ಭಯ – ಶಿಷ್ಯ ಅಭಿ ಬೆನ್ನಿಗೆ ಯುವರಾಜ್‌ ಬಲ

ಕೋಚ್ ಗಂಭೀರ್‌ಗೆ ಬೌಲರ್ ಭಯ –  ಶಿಷ್ಯ ಅಭಿ ಬೆನ್ನಿಗೆ ಯುವರಾಜ್‌ ಬಲ

 ಅಭಿಷೇಕ್ ಶರ್ಮಾ ಸ್ಥಾನದ ಕುರಿತು ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಬ್ಯಾಟ್ ಬೀಸಿದ್ದಾರೆ. ಯುವರಾಜ್ ಸಿಂಗ್, ಅಭಿಷೇಕ್ ಶರ್ಮಾ ಅವರ ಏಕದಿನ ತಂಡಕ್ಕೆ ಆಯ್ಕೆಯಾಗದಿರುವುದನ್ನು ಪ್ರಶ್ನಿಸಿದ್ದಾರೆ. ಉತ್ತಮ ಪ್ರದರ್ಶನ ನೀಡುತ್ತಿದ್ದರೂ ಅಭಿಷೇಕ್ ಶರ್ಮಾಗೆ ಇನ್ನೂ ಭಾರತದ ಏಕದಿನ ತಂಡದಲ್ಲಿ ಯಾಕೆ ಸ್ಥಾನ ನೀಡಲ್ಲ ಎಂದು ಆಯ್ಕೆ ಸಮಿತಿಯನ್ನ ಪ್ರಶ್ನೆ ಮಾಡಿದ್ದಾರೆ.

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೂ ಮುನ್ನ ಟೀಂ ಇಂಡಿಯಾ ಕೋಚ್ ಗೌತಮ್ ಗಂಭೀರ್‌ಗೆ ಬೌಲಿಂಗ್ ಬಗ್ಗೆ ಚಿಂತೆ ಆಗಿದೆ. ಬೌಲಿಂಗ್ ವಿಭಾಗ ಅನುಭವದ ಕೊರತೆಯಿಂದ ಬಳಲುತ್ತಿರುವುದು ಎದ್ದು ಕಾಣುತ್ತಿದೆ. ಜಸ್ಪ್ರೀತ್ ಬುಮ್ರಾ ಮತ್ತು ಹಾರ್ದಿಕ್ ಪಾಂಡ್ಯ ಲಭ್ಯವಿಲ್ಲದಿರುವುದರಿಂದ ಮೊಹಮ್ಮದ್ ಸಿರಾಜ್ ಹಾಗೂ ಅರ್ಷದೀಪ್ ಸಿಂಗ್ ಮೇಲೆ ಹೆಚ್ಚಿನ ಜವಾಬ್ದಾರಿ ಬೀಳಲಿದೆ. ಈ ಸವಾಲನ್ನು ಭಾರತ ಹೇಗೆ ಎದುರಿಸಲಿದೆ ಎಂಬ ಕುತೂಹಲ ಮೂಡಿದ್ದುಸ ಗಂಭೀರ್‌ಗೆ ಈ ಬಗ್ಗೆ ಭಯ ಕಾಡುತ್ತಿದೆ ಎಂದು ಚರ್ಚೆ ಶುರುವಾಗಿದೆ.

ಇದನ್ನೂ ಓದಿ: ಗಂಭೀರ್ ಡಿಕ್ಷನರಿಯಲ್ಲಿಲ್ಲ ಭಯ – ವೈಭವ್ ಕೈಬಿಟ್ಟಿದ್ದು ಇದಕ್ಕೇನಾ?

ಟೀಂ ಇಂಡಿಯಾದ ಮಾಜಿ ನಾಯಕ ರೋಹಿತ್ ಶರ್ಮಾ ಮತ್ತೆ ದೇಶೀಯ ಕ್ರಿಕೆಟ್‌ನಲ್ಲಿ ಕಾಣಿಸಿಕೊಳ್ಳಲು ಸಿದ್ಧರಾಗಿದ್ದಾರೆ. ವಿಜಯ್ ಹಜಾರೆ ಟ್ರೋಫಿಯಲ್ಲಿ ಮುಂಬೈ ತಂಡದ ಪರ ಆಡಲು ಅವರು ಸಜ್ಜಾಗುತ್ತಿದ್ದಾರೆ. ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯ ಬಳಿಕ ಮುಂಬೈ ತಂಡವನ್ನು ಕೂಡಿಕೊಳ್ಳುವ ಸಾಧ್ಯತೆಯಿದೆ. ಐಪಿಎಲ್ 2027ರಲ್ಲೂ ಮುಂಬೈ ಇಂಡಿಯನ್ಸ್ ತಂಡದ ನಾಯಕತ್ವ ವಹಿಸಿಕೊಳ್ಳುವ ಸಾಧ್ಯತೆ ಬಗ್ಗೆ ಚರ್ಚೆ ನಡೆಯುತ್ತಿದೆ.

ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯ ಬಳಿಕ ಟೀಂ ಇಂಡಿಯಾ ನಾಯಕ ಶ್ರೇಯಸ್ ಅಯ್ಯರ್ ತಂಡದ ಫೀಲ್ಡಿಂಗ್ ವಿಭಾಗದ ಬಗ್ಗೆ ಮಾತನಾಡಿದ್ದಾರೆ. ಕೆಲವು ಸಂದರ್ಭಗಳಲ್ಲಿ ಕ್ಯಾಚ್‌ಗಳನ್ನು ಕೈಬಿಟ್ಟಿರುವುದು ಹಾಗೂ ಫೀಲ್ಡಿಂಗ್‌ನಲ್ಲಿ ಸುಧಾರಣೆ ಅಗತ್ಯವಿದೆ ಎಂದು ಹೇಳಿದ್ದಾರೆ. ಸರಣಿಯನ್ನು ಗೆದ್ದಿದ್ದರೂ ತಂಡದ ತಪ್ಪುಗಳನ್ನು ಸರಿಪಡಿಸಿಕೊಳ್ಳಬೇಕು ಎಂದಿದ್ದಾರೆ.

ನ್ಯೂಜಿಲೆಂಡ್ ಎ ವಿರುದ್ಧ ನಡೆಯುತ್ತಿರುವ ಎರಡನೇ ಅನಧಿಕೃತ ಟೆಸ್ಟ್ ಪಂದ್ಯದಲ್ಲಿ ಭಾರತ ಎ ತಂಡದ ನಾಯಕ ಧ್ರುವ್ ಜುರೇಲ್ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಾರೆ. ಮೊದಲ ಇನ್ನಿಂಗ್ಸ್‌ನಲ್ಲಿ 105 ರನ್ ಗಳಿಸಿ ತಂಡಕ್ಕೆ ನೆರವಾಗಿದ್ದಾರೆ. ಆಕಾಶ್ ದೀಪ್ ಕೂಡ 68 ರನ್ ಗಳಿಸಿದ್ದಾರೆ. ಭಾರತ ಎ ತಂಡ 346 ರನ್ ಗಳಿಸಿದ್ದು, ನ್ಯೂಜಿಲೆಂಡ್ ಎ ತಂಡದ ವಿರುದ್ಧ ಉತ್ತಮ ಮುನ್ನಡೆ ಪಡೆಯುವ ಅವಕಾಶ ಹೊಂದಿತ್ತು.

ಟೀಂ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಗಾಯದ ಸಮಸ್ಯೆಯಿಂದ ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ ಎಂಬ ವರದಿಗಳು ಬಂದಿವೆ. ನ್ಯೂಜಿಲೆಂಡ್ ಎ ವಿರುದ್ಧದ ಮುಂದಿನ ಪಂದ್ಯಕ್ಕೆ ಅವರು ಅಲಭ್ಯರಾಗುವ ಸಾಧ್ಯತೆಯಿದೆ. ನವೆಂಬರ್ 19ರಿಂದ ಆರಂಭವಾಗಲಿರುವ ಭಾರತ–ನ್ಯೂಜಿಲೆಂಡ್ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕೂ ಅವರ ಲಭ್ಯತೆ ಬಗ್ಗೆ ಅನುಮಾನ ಮೂಡಿದೆ.

ಸೋಶಿಯಲ್​ ಮೀಡಿಯಾದಲ್ಲಿ ಗುರ್ನೂರ್ ಬ್ರಾರ್ ಅವರದ್ದು ಎನ್ನಲಾದ ಖಾಸಗಿ ಚಾಟ್ ಹಾಗೂ ಫೋಟೋವೊಂದು ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.  ಸ್ನ್ಯಾಪ್‌ಚಾಟ್ ಆ್ಯಪ್‌ಗೆ ಸಂಬಂಧಿಸಿದೆ ಎನ್ನಲಾದ ಈ ಚಾಟ್‌ನಲ್ಲಿ ಗುರ್ನೂರ್ ಅವರ ಶರ್ಟ್‌ಲೆಸ್ ಫೋಟೋವಿದ್ದು, ತಮ್ಮ ದೇಹದ ಸಣ್ಣ ಭಾಗವನ್ನು ಟವೆಲ್‌ನಿಂದ ಮರೆಮಾಚಿದ್ದಾರೆ. ಇದರ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೇ ವೈರಲ್ಆಗ್ತಿದೆ.

ದಕ್ಷಿಣ ಆಫ್ರಿಕಾ ತಂಡ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯನ್ನು 2-1 ಅಂತರದಲ್ಲಿ ಗೆದ್ದುಕೊಂಡಿದೆ. ಕೇಪ್‌ಟೌನ್‌ನಲ್ಲಿ ನಡೆದ ನಿರ್ಣಾಯಕ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು 176 ರನ್‌ಗಳಿಂದ ಮಣಿಸಿದೆ. ಈ ಗೆಲುವಿನಿಂದ ದಕ್ಷಿಣ ಆಫ್ರಿಕಾ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ತಲುಪುವ ತನ್ನ ಅವಕಾಶವನ್ನು ಮತ್ತಷ್ಟು ಬಲಪಡಿಸಿಕೊಂಡಿದೆ. ಸತತ ಎರಡನೇ ಬಾರಿ ಫೈನಲ್ ಪ್ರವೇಶಿಸುವ ಗುರಿ ಈಗ ತಂಡದ ಮುಂದಿದೆ.

ಪಾಕಿಸ್ತಾನ ತಂಡ ಶ್ರೀಲಂಕಾ ವಿರುದ್ಧದ ಏಕದಿನ ತ್ರಿಕೋನ ಸರಣಿಯ ಫೈನಲ್‌ನಲ್ಲಿ ರೋಚಕ ಗೆಲುವು ಸಾಧಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ 325 ರನ್ ಗಳಿಸಿತ್ತು. ಗುರಿ ಬೆನ್ನಟ್ಟಿದ ಪಾಕಿಸ್ತಾನ ಫಖರ್ ಜಮಾನ್ ಅವರ 127 ರನ್‌ಗಳ ಅದ್ಭುತ ಆಟದ ನೆರವಿನಿಂದ ಮೂರು ವಿಕೆಟ್‌ಗಳ ಜಯ ದಾಖಲಿಸಿತು. ಕೊನೆಯ ಹಂತದಲ್ಲಿ ಹಸನ್ ನವಾಜ್ ಮತ್ತು ಅರಾಫತ್ ಮಿನ್ಹಾಸ್ ತಂಡವನ್ನು ಗೆಲುವಿನ ದಡ ಸೇರಿಸಿದರು.

ಅಫ್ಘಾನಿಸ್ತಾನ ಕ್ರಿಕೆಟ್ ತಂಡ ಹಾಂಗ್‌ಕಾಂಗ್ ಸಿಕ್ಸಸ್ ಟೂರ್ನಿಯಲ್ಲಿ ಹೊಸ ಇತಿಹಾಸ ನಿರ್ಮಿಸಿದೆ. ಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು ನಾಲ್ಕು ವಿಕೆಟ್‌ಗಳಿಂದ ಸೋಲಿಸಿ ಚೊಚ್ಚಲ ಬಾರಿಗೆ ಪ್ರಶಸ್ತಿ ಗೆದ್ದುಕೊಂಡಿದೆ. ಸಿಕ್ಸರ್‌ಗಳ ಸುರಿಮಳೆಯೇ ಇರುವ ಈ ವಿಶೇಷ ಟೂರ್ನಿಯಲ್ಲಿ ಅಫ್ಘಾನಿಸ್ತಾನದ ಆಟಗಾರರು ಅದ್ಭುತ ಪ್ರದರ್ಶನ ನೀಡಿದ್ದಾರೆ. ಈ ಗೆಲುವು ಅಫ್ಘಾನಿಸ್ತಾನ ಕ್ರಿಕೆಟ್ ಅಭಿಮಾನಿಗಳಲ್ಲಿ ಸಂಭ್ರಮ ಮೂಡಿಸಿದೆ.

Kishor KV

Leave a Reply

Your email address will not be published. Required fields are marked *