ಕಾಮನ್ ವೆಲ್ತ್ ಗೇಮ್‌ನಲ್ಲಿ ಭಾರತಕ್ಕೆ ಮತ್ತೆರಡು ಸ್ವರ್ಣ- ಪುರುಷರ 10 ಸಾವಿರ ಮೀ. ಓಟದಲ್ಲಿ ಮೊದಲ ಪದಕ ಗೆದ್ದ ಗುಲ್ವಿರ್ ಸಿಂಗ್

ಕಾಮನ್ ವೆಲ್ತ್ ಗೇಮ್‌ನಲ್ಲಿ ಭಾರತಕ್ಕೆ  ಮತ್ತೆರಡು ಸ್ವರ್ಣ- ಪುರುಷರ 10 ಸಾವಿರ ಮೀ. ಓಟದಲ್ಲಿ ಮೊದಲ ಪದಕ ಗೆದ್ದ ಗುಲ್ವಿರ್ ಸಿಂಗ್

ಕಾಮನ್‌ವೆಲ್ತ್ ಗೇಮ್‌ನಲ್ಲಿ ಭಾರತಕ್ಕೆ ಮತ್ತೆ ಎರಡು ಚಿನ್ನದ ಪದಕ ಸಿಕ್ಕಿದೆ. ಭಾರತದ ಉದಯೋನ್ಮುಖ ಅಥ್ಲೆಟ್ ಗುಲ್ವಿರ್ ಸಿಂಗ್ ಅವರು ಕಾಮನ್‌ವೆಲ್ತ್ ಕ್ರೀಡಾಕೂಟದ ಪುರುಷರ 10 ಸಾವಿರ ಓಟದ ಫೈನಲ್‌ನಲ್ಲಿ ಐತಿಹಾಸಿಕ ಬೆಳ್ಳಿ ಪದಕಕ್ಕೆ ಗೆದ್ದಿದ್ದಾರೆ.  ಈ ಸ್ಪರ್ಧೆಯಲ್ಲಿ ಪದಕ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ.

ಸ್ಕಾಟ್‌ನ್‌ ಕ್ರೀಡಾಂಗಣದಲ್ಲಿ ಸುರಿಯುತ್ತಿದ್ದ ಭಾರಿ ಮಳೆ ಮತ್ತು ನೀರು ತುಂಬಿದ ಟ್ರ್ಯಾಕ್‌ನಂತಹ ಸವಾಲಿನ ಪರಿಸ್ಥಿತಿಯಲ್ಲೂ ಛಲ ಬಿಡದೆ ಓಡಿದ ಗುಲ್ವೇರ್, ಕೊನೆಯವರೆಗೂ ಮುಂಚೂಣಿಯಲ್ಲೇ ಉಳಿದು ಸಹ ಆಟಗಾರರಿಗೆ ಪ್ರಬಲ ಪೈಪೋಟಿ ನೀಡಿದ್ರು. ಗುಲ್ವಿರ್ 27 ನಿಮಿಷ 49.78 ಸೆಕೆಂಡುಗಳಲ್ಲಿ ಗುರಿ ತಲುಪಿ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದರು. 27 ನಿಮಿಷ 48.93 ಸೆಕೆಂಡುಗಳಲ್ಲಿ ಗುರಿ ತಲುಪುವ ಮೂಲಕ ಆಸ್ಟ್ರೇಲಿಯಾದ ಕೈ ರಾಬಿನ್ಸನ್ ಚಿನ್ನದ ಪದಕ ಗೆದ್ದು ಬೀಗಿದರು. ಇತ್ತ, ಡೇವಿಡ್ ಮುಲ್ಲಾರ್ಕಿ ಕಂಚಿನ ಪದಕಕ್ಕೆ ತೃಪ್ತಿಪಟ್ಟರು.

ಇದನ್ನೂ ಓದಿ: ಗೆಲ್ಲುವ ಲಕ್ಷ್ಮಣ್.. ಸೋಲುವ ಗಂಭೀರ್ – ಹೆಡ್ ಕೋಚ್ ಹುದ್ದೆಯಲ್ಲಿ ಶುರು ವಾರ್

ಭಾರತದ ಹರ್ಜಿಂದರ್ ಕೌರ್ ಅವರು ಮಹಿಳೆಯರ 69 ಕೆ.ಜಿ. ವೇಟ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. 2022ರ ಬರ್ಮಿಂಗ್‌ಹ್ಯಾಮ್ ಕಾಮನ್‌ವೆಲ್ತ್ ಗೇಮ್ಸ್‌ ನ 71 ಕೆ.ಜಿ. ವಿಭಾಗದಲ್ಲಿ ಕಂಚಿನ ಪದಕ ಗೆದ್ದಿದ್ದ 29 ವರ್ಷದ ಹರ್ಜಿಂದರ್, ಈ ಬಾರಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ವೇಟ್‌ಲಿಫ್ಟಿಂಗ್ ವಿಭಾಗದಲ್ಲಿ ಭಾರತಕ್ಕೆ 7ನೇ ಪದಕ ತಂದುಕೊಟ್ಟಿದ್ದಾರೆ.

Kishor KV

Leave a Reply

Your email address will not be published. Required fields are marked *