ವಿಹೆಚ್‌ಪಿ ಮೆರವಣಿಗೆ ವೇಳೆ ಕೋಮು ಘರ್ಷಣೆ – ಮೂವರು ಸಾವು, 60ಕ್ಕೂ ಹೆಚ್ಚು ಮಂದಿಗೆ ಗಾಯ

ವಿಹೆಚ್‌ಪಿ ಮೆರವಣಿಗೆ ವೇಳೆ ಕೋಮು ಘರ್ಷಣೆ – ಮೂವರು ಸಾವು, 60ಕ್ಕೂ ಹೆಚ್ಚು ಮಂದಿಗೆ ಗಾಯ

ಚಂಡೀಗಢ: ವಿಶ್ವ ಹಿಂದೂ ಪರಿಷತ್‌ (ವಿಹೆಚ್‌ಪಿ) ಮೆರವಣಿಗೆಯ ಸಮಯದಲ್ಲಿ ಕೋಮು ಗಲಭೆಯಾಗಿರುವ ಉಂಟಾಗಿರುವ ಘಟನೆ ಹರಿಯಾಣದ ನುಹ್ ಪ್ರದೇಶದಲ್ಲಿ ನಡೆದಿದೆ. ಗಲಭೆ ವೇಳೆ ಮೂವರು ಸಾವನ್ನಪ್ಪಿದ್ದು, ಪೊಲೀಸ್‌ ಸಿಬ್ಬಂದಿ ಸೇರಿ 60 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ವಿಶ್ವ ಹಿಂದೂ ಪರಿಷತ್‌ (ವಿಹೆಚ್‌ಪಿ) ಮೆರವಣಿಗೆಯ ಸಮಯದಲ್ಲಿ ಕೆಲ ಜನರು ಮೆರವಣಿಗೆಯನ್ನು ತಡೆಯಲು ಯತ್ನಿಸಿದ್ದಾರೆ. ಈ ವೇಳೆ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದಿದೆ. ಎರಡು ಗುಂಪುಗಳ ನಡುವೆ ಘರ್ಷಣೆ ಭುಗಿಲೆದ್ದಿದ್ದರಿಂದ ಕಲ್ಲು ತೂರಾಟ ನಡೆಸಿ ಕಾರುಗಳಿಗೆ ಬೆಂಕಿ ಹಚ್ಚಲಾಗಿದೆ. ಕೋಮು ಹಿಂಸಾಚಾರದಲ್ಲಿ ಇಬ್ಬರು ಹೋಮ್​ ಗಾರ್ಡ್​ ಹಾಗೂ ಓರ್ವ ನಾಗರಿಕ ಸೇರಿದಂತೆ ಮೂವರು ಮೃತಪಟ್ಟಿದ್ದು, ಅನೇಕ ಪೊಲೀಸ್​ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಹಿಜಾಬ್‌ ಧರಿಸದೇ ಮನೆಯಿಂದ ಹೊರಗೆ ಕಾಲಿಟ್ರೆ ಹುಷಾರ್‌.. – ಕಾರು ಜಪ್ತಿ, ಕೆಲಸದಿಂದ ವಜಾ!

ಹಿಂಸಾಚಾರದ ಸುದ್ದಿ ಹರಡುತ್ತಿದ್ದಂತೆ, ಎರಡು ಸಮುದಾಯಗಳ ಪ್ರತಿಭಟನಾಕಾರರು ಗುರುಗ್ರಾಮದ ಸೊಹ್ನಾ ರಸ್ತೆಯ ಬಳಿ ಗಲಾಟೆ ನಡೆಸಿದರು. ಇದರ ಪರಿಣಾಮವಾಗಿ ಹಲವಾರು ವಾಹನಗಳಿಗೆ ಹಾನಿಯಾಗಿದೆ. ಪ್ರತಿಭಟನಾಕಾರರು ಗಂಟೆಗಟ್ಟಲೆ ರಸ್ತೆ ತಡೆ ನಡೆಸಿದ ಪರಿಣಾಮ ಪರಿಸ್ಥಿತಿ ವಿಕೋಪಕ್ಕೆ ತಿರುಗಿತು. ಹಿಂಸಾತ್ಮಕ ಘಟನೆಗಳ ಹಿನ್ನೆಲೆಯಲ್ಲಿ ಗುರುಗ್ರಾಮ ಮತ್ತು ಫರಿದಾಬಾದ್‌ನಲ್ಲಿರುವ ಎಲ್ಲ ಶಾಲಾ ಮತ್ತು ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಗುರುಗ್ರಾಮ ಮತ್ತು ನುಹ್‌ನಲ್ಲಿ ಕೋಡ್​ ಆಫ್​ ಕ್ರಿಮಿನಲ್​ ಪ್ರೊಸಿಜರ್​ (ಸಿಆರ್​ಪಿಸಿ) ಸೆಕ್ಷನ್ 144ರ ಅಡಿಯಲ್ಲಿ ನಿಷೇಧಾಜ್ಞೆಗಳನ್ನು ವಿಧಿಸಲಾಗಿದೆ.

ತೀವ್ರವಾಗಿ ಕೋಮು ಉದ್ವಿಗ್ನತೆಯನ್ನು ನಿಯಂತ್ರಿಸಲು ನುಹ್ ಜಿಲ್ಲೆಯಲ್ಲಿ ಮೊಬೈಲ್ ಇಂಟರ್​ನೆಟ್​ ಸೇವೆಗಳನ್ನು ಆಗಸ್ಟ್ 2ರ ಬುಧವಾರದವರೆಗೆ ಸ್ಥಗಿತಗೊಳಿಸಲಾಗಿದೆ ಎಂದು ಹರಿಯಾಣ ಸರ್ಕಾರ ತಿಳಿಸಿದೆ. ಫರಿದಾಬಾದ್​ನ ಜಿಲ್ಲಾ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿ ಪ್ರಕಾರ ಜಿಲ್ಲೆಯ ಎಲ್ಲ ಶಿಕ್ಷಣ ಸಂಸ್ಥೆಗಳು, ಕಾಲೇಜುಗಳು ಮತ್ತು ಕೋಚಿಂಗ್ ಸೆಂಟರ್‌ಗಳು ಮಂಗಳವಾರ ಮುಚ್ಚಿವೆ.

ಹಿಂಸಾಚಾರದಲ್ಲಿ ಮೂರು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಪೊಲೀಸ್ ಸಿಬ್ಬಂದಿ ಸೇರಿದಂತೆ ಸುಮಾರು 60 ಕ್ಕೂ ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

suddiyaana