ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ – ವಿಸ್ತೃತ ವರದಿ ಕೇಳಿದ ಸುಪ್ರೀಂ ಕೋರ್ಟ್

ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ – ವಿಸ್ತೃತ ವರದಿ ಕೇಳಿದ ಸುಪ್ರೀಂ ಕೋರ್ಟ್

ಮಣಿಪುರದಲ್ಲಿ ಭುಗಿಲೆದ್ದಿರುವ ಜನಾಂಗೀಯ ಹಿಂಸಾಚಾರ ತಾರಕಕ್ಕೇರಿರುತ್ತಿದ್ದು, ಇದಕ್ಕೆ ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿದೆ. ರಾಜ್ಯದಲ್ಲಿ ಜನಾಂಗೀಯ ಹಿಂಸಾಚಾರವನ್ನು ತಡೆಯಲು ತೆಗೆದುಕೊಂಡ ಕ್ರಮಗಳ ಬಗ್ಗೆ ಏಳು ದಿನಗಳಲ್ಲಿ ವಿಸ್ತೃತ ಮಾಹಿತಿ ನೀಡುವಂತೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಇದನ್ನೂ ಓದಿ: ಕೊರೋನಾ ಎಫೆಕ್ಟ್‌ – ರಾಜ್ಯದಲ್ಲಿ ಬರೋಬ್ಬರಿ 2 ಲಕ್ಷಕ್ಕೂ ಅಧಿಕ ಮಕ್ಕಳಿಗೆ ಅಪೌಷ್ಟಿಕತೆ!

ಸೋಮವಾರ ಪ್ರಕರಣದ ವಿಚಾರಣೆ ನಡೆಸಿದ ಮುಖ್ಯ ನ್ಯಾಯಾಧೀಶ ಡಿ.ವೈ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠ, ಮಣಿಪುರದ ಪರಿಸ್ಥಿತಿ ಬಗ್ಗೆ ಮಾಹಿತಿ ಕೇಳಿದೆ. ಇದಕ್ಕೆ ಸರ್ಕಾರದ ಪರವಾಗಿ ಉತ್ತರಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಸರ್ಕಾರ ಎಲ್ಲ ರೀತಿಯ ಭದ್ರತೆಯನ್ನು ಒದಗಿಸಿದೆ. ಪರಿಸ್ಥಿತಿ ಹಂತ ಹಂತವಾಗಿ ನಿಯಂತ್ರಣಕ್ಕೆ ಬರುತ್ತಿದೆ ಎಂದರು.

ಇದಲ್ಲದೇ ಭದ್ರತೆಗೆ ಸಿವಿಲ್ ಪೊಲೀಸರ ಹೊರತಾಗಿ ಅಸ್ಸಾಂ ರೈಫಲ್ಸ್‌, ಸಿಆರ್‌ಪಿಎಫ್‌ನ ತುಕಡಿಗಳು ಸೇರಿದಂತೆ ಸಕಲ ಭದ್ರತಾ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದ್ದು ನಿಧಾನವಾದರೂ ಪರಿಸ್ಥಿತಿಯನ್ನು ಸಂಪೂರ್ಣವಾಗಿ ಹತೋಟಿಗೆ ತೆಗೆದುಕೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.

suddiyaana